ಸಂಗ್ರಹ ಚಿತ್ರ 
ರಾಜ್ಯ

ತುಮಕೂರು: ಮಾರ್ಕೋನಹಳ್ಳಿ ಡ್ಯಾಂನಲ್ಲಿ ದುರಂತ; ಒಂದೇ ಕುಟುಂಬದ 6 ಮಂದಿ ನೀರುಪಾಲು!

ತುಮಕೂರು ಜಿಲ್ಲೆ ಕುಣಿಗಲ್ ತಾಲೂಕಿನ ಯಡಿಯೂರು ಬಳಿ ಮಾರ್ಕೋನಹಳ್ಳಿ ಡ್ಯಾಂ ನೀರಿನಲ್ಲಿ ಈಜಲು ಹೋಗಿದ್ದ ಒಂದೇ ಕುಟುಂಬದ ಆರು ಮಂದಿ ನೀರುಪಾಲಾಗಿದ್ದಾರೆ. ಕೊಚ್ಚಿ ಹೋಗುತ್ತಿದ್ದ ಏಳು ಮಂದಿ ಪೈಕಿ ಓರ್ವನನ್ನು ರಕ್ಷಿಸಲಾಗಿದೆ.

ತುಮಕೂರು: ತುಮಕೂರು ಜಿಲ್ಲೆ ಕುಣಿಗಲ್ ತಾಲೂಕಿನ ಯಡಿಯೂರು ಬಳಿ ಮಾರ್ಕೋನಹಳ್ಳಿ ಡ್ಯಾಂ ನೀರಿನಲ್ಲಿ ಈಜಲು ಹೋಗಿದ್ದ ಒಂದೇ ಕುಟುಂಬದ ಆರು ಮಂದಿ ನೀರುಪಾಲಾಗಿದ್ದಾರೆ. ಕೊಚ್ಚಿ ಹೋಗುತ್ತಿದ್ದ ಏಳು ಮಂದಿ ಪೈಕಿ ಓರ್ವನನ್ನು ರಕ್ಷಿಸಲಾಗಿದೆ. ಇನ್ನುಳಿದಂತೆ ಇಬ್ಬರ ಮೃತದೇಹ ಪತ್ತೆಯಾಗಿದ್ದು ನಾಲ್ವರಿಗಾಗಿ ರಕ್ಷಣಾ ಕಾರ್ಯಾಚರಣೆ ನಡೆಯುತ್ತಿದೆ. ಮೃತರನ್ನು ತುಮಕೂರು ನಗರದ ಬಿ.ಜಿ.ಪಾಳ್ಯದ ನಿವಾಸಿಗಳಾದ ಸಾಜಿಯಾ, ಅರ್ಬಿನ್ ಎಂದು ಗುರುತಿಸಲಾಗಿದೆ. ಇನ್ನು ಶಬಾನ (44), ತಬಾಸುಮ್ (45), ಮಹಿಬ್ (1) ಮತ್ತು ಮಿಫ್ರಾ (4 ಕಣ್ಮರೆಯಾದವರು. ನವಾಜ್‌ ಎಂಬಾತ ಪ್ರಾಣಾಪಾಯದಿಂದ ಪಾರಾಗಿದ್ದು, ಸದ್ಯ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ದುರಂತದ ಮಾಹಿತಿ ತಿಳಿಯುತ್ತಿದ್ದಂತೆ ಘಟನಾ ಸ್ಥಳಕ್ಕೆ ಹುಲಿಯೂರುದುರ್ಗ ಪೊಲೀಸರು ಹಾಗೂ ಅಮೃತೂರು ಪೊಲೀಸರು ದೌಡಾಯಿಸಿದ್ದು ಪರಿಶೀಲನೆ ನಡೆಸಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Cockroach Janta Partyಗೆ ಬಿಗ್ ಶಾಕ್: ಜಂತರ್ ಮಂತರ್ ಪ್ರತಿಭಟನೆಗೆ ಅನುಮತಿ ನಿರಾಕರಿಸಿದ ದೆಹಲಿ ಪೊಲೀಸರು, 57 ಮೆಟ್ರೋ ನಿಲ್ದಾಣಗಳು ಬಂದ್..!

ಕನ್ನಡಿಗರ ಆತ್ಮೀಯತೆ, ವಾತ್ಸಲ್ಯ, ದಯೆ ನಿಜಕ್ಕೂ ನನ್ನ....: ಬೆಂಗಳೂರು ಭೇಟಿ ಬಗ್ಗೆ ಅಭಿಜೀತ್ ದೀಪ್ಕೆ ಭಾವುಕ ಪೋಸ್ಟ್!

ಕೇಂದ್ರ ಸಚಿವ, ಬಿಜೆಪಿ ನಾಯಕನಿಂದ ಸ್ಟಿಂಗ್ ಆಪರೇಷನ್‌ಗೆ ಸಂಚು: Congress ಶಾಸಕ ಗಣಿಗ ರವಿ ಸ್ಫೋಟಕ ಆರೋಪ; Video

ಧಾರವಾಡ: ಕಾರು - ಕ್ಯಾಂಟರ್ ಮುಖಾಮುಖಿ ಡಿಕ್ಕಿ; ಭೀಕರ ಅಪಘಾತದಲ್ಲಿ ನಾಲ್ವರು ಸ್ಥಳದಲ್ಲೇ ಸಾವು!

ಉಪ ಚುನಾವಣೆ ಫಲಿತಾಂಶ| ಅಸ್ಸಾಂ, ಪ.ಬಂಗಾಳ, ತಮಿಳುನಾಡು, ಪುದುಚೇರಿಯ ಆರು ಕ್ಷೇತ್ರಗಳಲ್ಲಿ ಮತ ಎಣಿಕೆ ಪ್ರಗತಿಯಲ್ಲಿ