ಡಿಕೆ ಶಿವಕುಮಾರ್ 
ರಾಜ್ಯ

ಬೆಂಗಳೂರಿನ ಸಂಚಾರ ದಟ್ಟಣೆ ಜಾಗತಿಕ ಸವಾಲು: ಲಂಡನ್-ದೆಹಲಿ ಉದಾಹರಣೆ ಕೊಟ್ಟ ಡಿಸಿಎಂ ಡಿ.ಕೆ ಶಿವಕುಮಾರ್

ದೆಹಲಿಯಲ್ಲಿಯೂ ಸಹ ವಿಮಾನ ನಿಲ್ದಾಣದಿಂದ ಹೊರಗೆ ಬರಲು ಒಂದೂವರೆ ಗಂಟೆಗೂ ಹೆಚ್ಚು ಕಾಲ ಬೇಕಾಗುತ್ತದೆ. ಆದರೆ ಬೆಂಗಳೂರು, ಮುಂಬೈ, ಚೆನ್ನೈ ಮತ್ತು ಹೈದರಾಬಾದ್‌ಗಿಂತ ಹೆಚ್ಚು ಸದ್ದು ಮಾಡುವುದಿಲ್ಲ.

ಬೆಂಗಳೂರು: ಲಂಡನ್ ಮತ್ತು ದೆಹಲಿಯನ್ನು ಉದಾಹರಣೆಯಾಗಿ ಉಲ್ಲೇಖಿಸಿದ ಡಿಸಿಎಂ ಡಿಕೆ ಶಿವಕುಮಾರ್ ಬೆಂಗಳೂರು ಸಂಚಾರ ದಟ್ಟಣೆ ಜಾಗತಿಕ ಮತ್ತು ರಾಷ್ಟ್ರೀಯ ಸವಾಲು ಎಂದು ಹೇಳಿದ್ದಾರೆ. ಬೆಂಗಳೂರು ಅಭಿವೃದ್ಧಿ ಸಚಿವರೂ ಆಗಿರುವ ಶಿವಕುಮಾರ್, ನಗರದ ಕಸದ ಸಮಸ್ಯೆಗಳನ್ನು ಸರಿಪಡಿಸಲು ಕಸ ಮಾಫಿಯಾ ದೊಡ್ಡ ಅಡ್ಡಿಯಾಗಿದೆ. ಕಳೆದ ಎರಡೂವರೆ ವರ್ಷಗಳಿಂದ ನಾನು ಕಸ ವಿಲೇವಾರಿ ವಿಚಾರದಲ್ಲಿ ಸಾಕಷ್ಟು ಪ್ರಯತ್ನ ಮಾಡುತ್ತಿದ್ದೇನೆ. ಆದರೆ ಕಸದ ಮಾಫಿಯಾ ನನ್ನ ಪ್ರಯತ್ನ ತಡೆಯುತ್ತಿವೆ. ನ್ಯಾಯಾಲದಲ್ಲಿ ಪಿಐಎಲ್ ಹಾಕಿ ನಮ್ಮನ್ನು ತಡೆಯುತ್ತಿದ್ದಾರೆ ಎಂದು ಡಿಕೆ ಶಿವಕುಮಾರ್ ಹೇಳಿದರು.

ಮೌಂಟ್ ಕಾರ್ಮೆಲ್ ಕಾಲೇಜಿನ ಸಹಯೋಗದೊಂದಿಗೆ ಬೆಂಗಳೂರು ರಾಜಕೀಯ ಕ್ರಿಯಾ ಸಮಿತಿ (ಬಿಪಿಎಸಿ) ಆಯೋಜಿಸಿದ್ದ ಜಿಬಿಎ: ಟ್ರಾನ್ಸ್‌ಫಾರ್ಮೇಟಿವ್ ವಿಷನ್ ಫಾರ್ ಬೆಂಗಳೂರು ವಿತ್ ಜಿಬಿಎ ಕುರಿತು ಪ್ಯಾನಲ್ ಚರ್ಚೆಯಲ್ಲಿ ಡಿಕೆ ಶಿವಕುಮಾರ್ ಮಾತನಾಡಿದರು. ನಗರದ ಸಂಚಾರ ಸಮಸ್ಯೆಗಳನ್ನು ಪರಿಹರಿಸುವ ಅಗತ್ಯವನ್ನು ಒತ್ತಿ ಹೇಳಿದ ಅವರು, ಲಂಡನ್‌ನಲ್ಲಿಯೂ ಸಹ ಜನರು ಸಾರ್ವಜನಿಕ ಸಾರಿಗೆ ಬಳಸದಿದ್ದರೆ ಮೂರು ಗಂಟೆಗಳ ಕಾಲ ಸಂಚರಿಸಬೇಕಾಗುತ್ತದೆ ಎಂದು ಹೇಳಿದರು.

ದೆಹಲಿಯಲ್ಲಿಯೂ ಸಹ ವಿಮಾನ ನಿಲ್ದಾಣದಿಂದ ಹೊರಗೆ ಬರಲು ಒಂದೂವರೆ ಗಂಟೆಗೂ ಹೆಚ್ಚು ಕಾಲ ಬೇಕಾಗುತ್ತದೆ. ಆದರೆ ಬೆಂಗಳೂರು, ಮುಂಬೈ, ಚೆನ್ನೈ ಮತ್ತು ಹೈದರಾಬಾದ್‌ಗಿಂತ ಹೆಚ್ಚು ಸದ್ದು ಮಾಡುವುದಿಲ್ಲ. ಆದರೆ ತಮಿಳುನಾಡು ಆಂಧ್ರ ಮತ್ತು ಇತರ ರಾಜ್ಯಗಳಿಗೆ ಹೋಲಿಸಿದರೆ ನಮ್ಮ ಮಾಧ್ಯಮಗಳಿಗೆ ಮುಕ್ತ ಅವಕಾಶ ಇರುವುದರಿಂದ ಹೆಚ್ಚಾಗಿ ಮಾಧ್ಯಮಗಳಲ್ಲಿ ಹೆಚ್ಚು ಸುದ್ದಿಯಾಗುತ್ತವೆ. ನಾವು ಟೀಕೆಗಳನ್ನು ಸ್ವೀಕರಿಸುತ್ತೇವೆ ಎಂದು ಶಿವಕುಮಾರ್ ಹೇಳಿದರು.

ಗ್ರೇಟರ್ ಬೆಂಗಳೂರು ಪ್ರಾಧಿಕಾರ (ಜಿಬಿಎ) ರಚನೆಯ ಕುರಿತು ಮಾತನಾಡಿದ ಶಿವಕುಮಾರ್, ಇಲಾಖೆಗಳ ನಡುವೆ ಉತ್ತಮ ಮತ್ತು ಹೆಚ್ಚು ಪರಿಣಾಮಕಾರಿ ಆಡಳಿತ ಮತ್ತು ಸಮನ್ವಯವನ್ನು ಖಚಿತಪಡಿಸಿಕೊಳ್ಳುವ ಗುರಿಯನ್ನು ಹೊಂದಿದೆ. ಏಕೆಂದರೆ ಬೆಂಗಳೂರು ನಗರವನ್ನು ನಿರ್ವಹಿಸುವುದು ಸುಲಭದ ಕೆಲಸವಲ್ಲ. ಇಲ್ಲಿ ಜನರಿಗೆ ಬಹಳಷ್ಟು ನಿರೀಕ್ಷೆಗಳಿವೆ. ಬೆಂಗಳೂರಿನ ದೊಡ್ಡ ಸವಾಲುಗಳೆಂದರೆ ಚಲನಶೀಲತೆ, ಘನತ್ಯಾಜ್ಯ ನಿರ್ವಹಣೆ ಮತ್ತು ಕುಡಿಯುವ ನೀರಿನ ಸಮಸ್ಯೆಗಳು. ಬೆಂಗಳೂರು ಯೋಜಿತ ನಗರವಲ್ಲ ಎಂದು ಅವರು ಹೇಳಿದರು.

ಪ್ರತಿಯೊಬ್ಬ ನಾಗರಿಕರು ಧ್ವನಿ ಎತ್ತಬೇಕು ಮತ್ತು ನಗರದ ಬಗ್ಗೆ ತಮ್ಮ ಜವಾಬ್ದಾರಿಯನ್ನು ಅರ್ಥಮಾಡಿಕೊಳ್ಳಬೇಕು. ಹಾಗೆಯೇ ನಿಗಮವು ನಾಗರಿಕರ ಅಗತ್ಯಗಳಿಗೆ ಪರಿಣಾಮಕಾರಿಯಾಗಿ ಪ್ರತಿಕ್ರಿಯಿಸಬೇಕು. ನಾವು ನೀತಿ ನಿರೂಪಕರು, ಆದರೆ ನಾವು ಎಂದಿಗೂ ಸ್ವತಂತ್ರವಾಗಿ ನಿರ್ಧಾರಗಳನ್ನು ತೆಗೆದುಕೊಳ್ಳುವುದಿಲ್ಲ. ನಾವು ಎಲ್ಲಾ ಪಾಲುದಾರರೊಂದಿಗೆ ಸಮಾಲೋಚಿಸಿ ನಂತರ ತೀರ್ಮಾನಕ್ಕೆ ಬರುತ್ತೇವೆ ಎಂದು ಅವರು ಹೇಳಿದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಗ್ರೇಟರ್‌ ಬೆಂಗಳೂರು ಪಾಲಿಕೆ ಚುನಾವಣೆಯಲ್ಲಿ ಮಹಿಳೆಯರಿಗೆ ಶೇ. 50ರಷ್ಟು ಟಿಕೆಟ್‌: ಡಿಕೆ ಶಿವಕುಮಾರ್ ಘೋಷಣೆ

ಅನಂತ್‌ನಾಗ್‌: ಕೂಂಬಿಂಗ್ ಕಾರ್ಯಾಚರಣೆ ವೇಳೆ ಇಬ್ಬರು ಸೈನಿಕರು ನಾಪತ್ತೆ!

ಬೆಂಗಳೂರು: CJI ಮೇಲೆ ಶೂ ಎಸೆಯಲು ಯತ್ನಿಸಿದ ವಕೀಲನ ವಿರುದ್ಧ ಎಫ್ಐಆರ್ ದಾಖಲು

ಸ್ವದೇಶಿ ಮಂತ್ರ: Gmailನಿಂದ Zoho Mailಗೆ ಅಮಿತ್ ಶಾ ಶಿಫ್ಟ್; ಟ್ರಂಪ್‌ಗೆ ಠಕ್ಕರ್

ತಾನು ಯಾವತ್ತಿಗೂ ವಿಮರ್ಶಾತೀತ ಎಂದೆಣಿಸುವುದರಲ್ಲಿ ಯಾವ ನ್ಯಾಯವಿದೆ? (ತೆರೆದ ಕಿಟಕಿ)

SCROLL FOR NEXT