ಬೆಂಗಳೂರು ನಗರ ಉತ್ತರ ಪಾಲಿಕೆ ಆಯುಕ್ತ ಪೊಮ್ಮಲ ಸುನೀಲ್ ಕುಮಾರ್ 
ರಾಜ್ಯ

ಮನೆ-ಮನೆ ತೆರಳಿ ತ್ಯಾಜ್ಯ ಸಂಗ್ರಹಿಸಿ: ಅಧಿಕಾರಿಗಳಿಗೆ ಬೆಂಗಳೂರು ಉತ್ತರ ಪಾಲಿಕೆ ಆಯುಕ್ತ ಸೂಚನೆ

ತ್ಯಾಜ್ಯ ವಿಲೇವಾರಿಗೆ ಜವಾಬ್ದಾರರಾಗಿರುವ ಸಂಬಂಧಪಟ್ಟ ಅಧಿಕಾರಿಗಳಿಗೆ ಗುತ್ತಿಗೆದಾರರು ಮತ್ತು ಆಟೋ-ಟಿಪ್ಪರ್‌ಗಳು ಮನೆಗಳಿಂದ ನೇರವಾಗಿ ತ್ಯಾಜ್ಯವನ್ನು ಸಂಗ್ರಹಿಸಿ ಗೊತ್ತುಪಡಿಸಿದ ತ್ಯಾಜ್ಯ ವಿಲೇವಾರಿ ಕೇಂದ್ರಗಳಿಗೆ ಸಾಗಿಸುವುದನ್ನು ಖಚಿತಪಡಿಸಿಕೊಳ್ಳಬೇಕು.

ಬೆಂಗಳೂರು: ತ್ಯಾಜ್ಯ ವಿಲೇವಾರಿಗೆ ಜವಾಬ್ದಾರರಾಗಿರುವ ಸಂಬಂಧಪಟ್ಟ ಅಧಿಕಾರಿಗಳಿಗೆ ಗುತ್ತಿಗೆದಾರರು ಮತ್ತು ಆಟೋ-ಟಿಪ್ಪರ್‌ಗಳು ಮನೆಗಳಿಂದ ನೇರವಾಗಿ ತ್ಯಾಜ್ಯವನ್ನು ಸಂಗ್ರಹಿಸಿ ಗೊತ್ತುಪಡಿಸಿದ ತ್ಯಾಜ್ಯ ವಿಲೇವಾರಿ ಕೇಂದ್ರಗಳಿಗೆ ಸಾಗಿಸುವುದನ್ನು ಖಚಿತಪಡಿಸಿಕೊಳ್ಳಬೇಕೆಂದು ಅಧಿಕಾರಿಗಳಿಗೆ ಬೆಂಗಳೂರು ನಗರ ಉತ್ತರ ಪಾಲಿಕೆ ಆಯುಕ್ತ ಪೊಮ್ಮಲ ಸುನೀಲ್ ಕುಮಾರ್ ಅವರು ಮಂಗಳವಾರ ಸೂಚನೆ ನೀಡಿದರು.

ಪುಲಕೇಶಿ ನಗರ ವಿಭಾಗದಲ್ಲಿ, ವಿಶೇಷವಾಗಿ ಕಾವೇರಿ ನಗರ, ಮುನಿಸ್ವಾಮಪ್ಪ ಕಾಲೋನಿ ಮತ್ತು ಆದರ್ಶ ನಗರ ಕಾಲೋನಿ ಸೇರಿದಂತೆ ಇತರೆ ಪ್ರದೇಶಗಳಲ್ಲಿ ಉತ್ತರ ಪಾಲಿಕೆ ಆಯುಕ್ತ ಪೊಮ್ಮಲ ಸುನೀಲ್ ಕುಮಾರ್ ಅವರು ಪರಿಶೀಲನೆ ನಡೆಸಿದರು.

ತ್ಯಾಜ್ಯ ಸಂಗ್ರಹಣಾ ವಾಹನಗಳು ಮನೆ-ಮನೆಗಳಿಂದ ಕಸ ಸಂಗ್ರಹಿಸುತ್ತಿಲ್ಲ ಎಂಬ ಪುಲಕೇಶಿ ನಗರ ವಿಭಾಗದ ಕಲ್ಯಾಣ ಅಭಿವೃದ್ಧಿ ಸಂಘಗಳಿಂದ ದೂರು ಕೇಳಿಬಂದ ಹಿನ್ನೆಲೆಯಲ್ಲಿ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು.

ಈ ವೇಳೆ ತ್ಯಾಜ್ಯ ವಿಲೇವಾರಿಗೆ ಜವಾಬ್ದಾರರಾಗಿರುವ ಸಂಬಂಧಪಟ್ಟ ಅಧಿಕಾರಿಗಳಿಗೆ ಗುತ್ತಿಗೆದಾರರು ಮತ್ತು ಆಟೋ-ಟಿಪ್ಪರ್‌ಗಳು ಮನೆಗಳಿಂದ ನೇರವಾಗಿ ತ್ಯಾಜ್ಯವನ್ನು ಸಂಗ್ರಹಿಸಿ ಗೊತ್ತುಪಡಿಸಿದ ತ್ಯಾಜ್ಯ ವಿಲೇವಾರಿ ಕೇಂದ್ರಗಳಿಗೆ ಸಾಗಿಸುವುದನ್ನು ಖಚಿತಪಡಿಸಿಕೊಳ್ಳಬೇಕು. ಖಾಲಿ ಜಾಗಗಳಲ್ಲಿ ತ್ಯಾಜ್ಯವನ್ನು ಸುರಿಯುವುದನ್ನು ತಡೆಯಲು ನಿವಾಸಿಗಳಲ್ಲಿ ಜಾಗೃತಿ ಮೂಡಿಸಬೇಕೆಂದು ಸೂಚನೆ ನೀಡಿದರು.

ಎಲ್ಆರ್ ಬಂಡೆ ರಸ್ತೆಯಲ್ಲಿರುವ ಖಾಲಿ ಜಾಗವು ವಿವಾದಿತ ಪ್ರದೇಶವಾಗಿದ್ದು, ನ್ಯಾಯಾಲಯದಲ್ಲಿ ಪ್ರಕರಣ ಬಾಕಿ ಉಳಿದಿವೆ. ಸಂಬಂಧಪಟ್ಟ ಎಂಜಿನಿಯರ್‌ಗಳು ಮತ್ತು ಕಂದಾಯ ಇಲಾಖೆಯ ಮೂಲಕ ಸಮಸ್ಯೆಯನ್ನು ಪರಿಹರಿಸಿ ಸೂಕ್ತ ಕ್ರಮಗಳನ್ನು ತೆಗೆದುಕೊಳ್ಳಬೇಕು ಎಂದು ಸಲಹೆ ನೀಡಿದರು.

ಈ ಸಂದರ್ಭದಲ್ಲಿ ಜಂಟಿ ಆಯುಕ್ತ ಮೊಹಮ್ಮದ್ ನಯೀಮ್ ಮೋಮಿನ್ ಮತ್ತು ಇತರ ಸಂಬಂಧಪಟ್ಟ ಎಂಜಿನಿಯರ್‌ಗಳು ಹಾಜರಿದ್ದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಸಾಕಿದ ಹಸು ತಿಂದಿದೆ ಎಂದು ಹುಲಿಗಳಿಗೆ ವಿಷ ಹಾಕಿದರೆ ಸಹಿಸಲ್ಲ, ಪ್ರಾಣಿ ಸಂಪತ್ತು ಕೊಲ್ಲುವವರ ವಿರುದ್ಧ ಕಠಿಣ ಕ್ರಮ: ಸಿಎಂ ಸಿದ್ದರಾಮಯ್ಯ

ಕೊನೆಗೂ Bigg Boss Kannada ವೀಕ್ಷಕರಿಗೆ ಸಿಹಿಸುದ್ದಿ ಕೊಟ್ಟ ಸರ್ಕಾರ, ರಿಯಾಲಿಟಿ ಶೋ ಪುನಾರಂಭಕ್ಕೆ ಡಿಸಿಎಂ ಡಿಕೆ ಶಿವಕುಮಾರ್ ಗ್ರೀನ್ ಸಿಗ್ನಲ್!

ಶಬರಿಮಲೆಯ ಮೂಲ ಚಿನ್ನದ ಹೊದಿಕೆ 'ದೈವಿಕ ಟ್ರೋಫಿ'ಯಾಗಿ ಮಾರಾಟ? TDB ಅಧಿಕಾರಿಗಳು ಹೇಳುವುದೇನು?

ಹಿಮಾಚಲ ಪ್ರದೇಶದ ಭೂಕುಸಿತ: ಸಾವಿನ ಸಂಖ್ಯೆ 16 ಕ್ಕೆ ಏರಿಕೆ, ಭರದಿಂದ ಸಾಗಿದ ರಕ್ಷಣಾ ಕಾರ್ಯಾಚರಣೆ!

ನಾಯಕತ್ವದಿಂದ ಕೊಕ್.. Rohit Sharma ಮೊದಲ ಪ್ರತಿಕ್ರಿಯೆ.. ಹೇಳಿದ್ದೇನು?

SCROLL FOR NEXT