ಬೆಂಗಳೂರು: ಅನಾರೋಗ್ಯದ ಹಿನ್ನೆಲೆಯಲ್ಲಿ ಬೆಂಗಳೂರಿನ ಮಣಿಪಾಲ್ ಆಸ್ಪತ್ರೆಗೆ ದಾಖಲಾಗಿರುವ ಮಾಜಿ ಪ್ರಧಾನಿ ಹಾಗೂ ಜೆಡಿಎಸ್ ವರಿಷ್ಠ ಎಚ್ ಡಿ ದೇವೇಗೌಡರ ಅವರು ಚೇತರಿಸಿಕೊಂಡಿದ್ದು, ಬುಧವಾರ ಅವರನ್ನು ವಾರ್ಡ್‌ಗೆ ಸ್ಥಳಾಂತರಿಸಲಾಗಿದೆ, ತಜ್ಞರ ತಂಡವು ಅವರ ಆರೋಗ್ಯದ ಮೇಲ್ವಿಚಾರಣೆ ಮಾಡುತ್ತಿದೆ.
ಮಣಿಪಾಲ್ ಆಸ್ಪತ್ರೆ ಇಂದು ದೇವೇಗೌಡರ ಆರೋಗ್ಯದ ಬಗ್ಗೆ ಹೆಲ್ತ್ ಬುಲೆಟಿನ್ ಬಿಡುಗಡೆ ಮಾಡಿದ್ದು, ಮಾಜಿ ಪ್ರಧಾನಿಯ ಆರೋಗ್ಯದಲ್ಲಿ ಚೇತರಿಕೆ ಕಂಡುಬಂದಿದೆ. ಹೀಗಾಗಿ ಅವರನ್ನು ವಾರ್ಡ್ ಗೆ ಶಿಫ್ಟ್ ಮಾಡಲಾಗಿದೆ. ಅವರ ಆರೋಗ್ಯದ ಮೇಲೆ ವೈದ್ಯಕೀಯ ತಜ್ಞರ ತಂಡ ನಿಗಾವಹಿಸಿದೆ ಎಂದು ಮಾಹಿತಿ ನೀಡಿದೆ.
ಚಳಿ ಜ್ವರ ಹಾಗೂ ಯೂರಿನ್ ಇನ್ಫೆಕ್ಷನ್ ನಿಂದ ಬಳಲುತ್ತಿದ್ದ ದೇವೇಗೌಡ ಅವರನ್ನು ಸೋಮವಾರ ತಡರಾತ್ರಿ ಮಣಿಪಾಲ್ ಆಸ್ಪತ್ರೆಯ ತೀವ್ರ ನಿಗಾ ಘಟಕಕ್ಕೆ ದಾಖಲಿಸಲಾಗಿತ್ತು.
ಡಾ.ಸುದರ್ಶನ್ ಬಲ್ಲಾಳ್ ಅವರ ನೇತೃತ್ವದಲ್ಲಿ ತೀವ್ರಾ ನಿಗಾ ಘಟಕದಲ್ಲಿ ಚಿಕಿತ್ಸೆ ನೀಡಲಾಗಿದ್ದು, ದೇವೇಗೌಡರ ಆರೋಗ್ಯದಲ್ಲಿ ಚೇತರಿಕೆ ಕಂಡು ಬಂದಿದೆ. ಇಂದು ವಾರ್ಡ್‌ಗೆ ಶಿಫ್ಟ್ ಮಾಡಲಾಗಿದೆ ಎಂದು ಆಸ್ಪತ್ರೆ ತಿಳಿಸಿದೆ.