ಸಾಂದರ್ಭಿಕ ಚಿತ್ರ 
ರಾಜ್ಯ

ಬೆಂಗಳೂರು: ಕಿವಿಗೆ ಹೆಡ್‌ಫೋನ್‌ ಹಾಕಿಕೊಂಡು ಹಳಿ ದಾಟುವಾಗ ರೈಲು ಡಿಕ್ಕಿ; ಬಿಬಿಎಂ ವಿದ್ಯಾರ್ಥಿ ಸಾವು

ವೀರಣ್ಣಪಾಳ್ಯ ನಿವಾಸಿ ಶಶಿಕುಮಾರ್‌(20) ಮೃತ ವಿದ್ಯಾರ್ಥಿ. ಮಂಗಳವಾರ ಬೆಳಿಗ್ಗೆ 8ರ ಸುಮಾರಿಗೆ ನಾಗೇನಹಳ್ಳಿ ರೈಲ್ವೆ ಟ್ರ್ಯಾಕ್‌ ಬಳಿ ಘಟನೆ ನಡೆದಿದೆ ಎಂದು ರೈಲ್ವೆ ಪೊಲೀಸರು ಮಾಹಿತಿ ನೀಡಿದರು.

ಬೆಂಗಳೂರು: ಕಿವಿಯಲ್ಲಿ ಹೆಡ್‌ಫೋನ್‌ ಹಾಕಿಕೊಂಡು ರೈಲು ಹಳಿ ದಾಟುತ್ತಿದ್ದ ವೇಳೆ ರೈಲು ಡಿಕ್ಕಿಯಾಗಿ ವಿದ್ಯಾರ್ಥಿ ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ಬೈಯಪ್ಪನಹಳ್ಳಿ ರೈಲ್ವೆ ಪೊಲೀಸ್ ಠಾಣೆ ವ್ಯಾಪ್ತಿಯ ನಾಗೇನಹಳ್ಳಿಯಲ್ಲಿ ನಡೆದಿದೆ.

ವೀರಣ್ಣಪಾಳ್ಯ ನಿವಾಸಿ ಶಶಿಕುಮಾರ್‌(20) ಮೃತ ವಿದ್ಯಾರ್ಥಿ. ಮಂಗಳವಾರ ಬೆಳಿಗ್ಗೆ 8ರ ಸುಮಾರಿಗೆ ನಾಗೇನಹಳ್ಳಿ ರೈಲ್ವೆ ಟ್ರ್ಯಾಕ್‌ ಬಳಿ ಘಟನೆ ನಡೆದಿದೆ ಎಂದು ರೈಲ್ವೆ ಪೊಲೀಸರು ಮಾಹಿತಿ ನೀಡಿದರು.

ವೀರಣ್ಣಪಾಳ್ಯದ ನಿವಾಸಿ ವಾಸುದೇವ್ ಅವರ ಪುತ್ರ ಶಶಿಕುಮಾರ್‌, ಯಲಹಂಕದಲ್ಲಿ ಇರುವ ಖಾಸಗಿ ಕಾಲೇಜಿನಲ್ಲಿ ಬಿಬಿಎ ವ್ಯಾಸಂಗ ಮಾಡುತ್ತಿದ್ದ. ಮಂಗಳವಾರ ಬೆಳಿಗ್ಗೆ ಮನೆಯಿಂದ ಬಸ್ ನಿಲ್ದಾಣಕ್ಕೆ ಹೋಗುವಾಗ ಕಿವಿಗೆ ಹೆಡ್‌ಫೋನ್‌ ಹಾಕಿಕೊಂಡು ನಾಗೇನಹಳ್ಳಿ ರೈಲ್ವೆ ಹಳಿ ದಾಟುತ್ತಿದ್ದ.

ಆ ಸಮಯದಲ್ಲಿ ಎಲೆಕ್ಟ್ರಿಕ್ ಎಂಜಿನ್‌ನ ಗೂಡ್ಸ್‌ ರೈಲು ಬಂದು ಡಿಕ್ಕಿ ಹೊಡೆದಿದ್ದು, ಸ್ಥಳದಲ್ಲೇ ಆತ ಮೃತಪಟ್ಟಿದ್ದಾನೆ ಎಂದು ಮೂಲಗಳು ತಿಳಿಸಿವೆ. ಬೈಯಪ್ಪನಹಳ್ಳಿ ರೈಲ್ವೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

‘ವೈಯಕ್ತಿಕ ಮಹತ್ವಾಕಾಂಕ್ಷೆ ಅಲ್ಲ, ಧ್ಯೇಯಕ್ಕಾಗಿ ಬದುಕಿದ್ದೇನೆ, ದೇಶದ ಜನತೆಗೆ ತಲೆಬಾಗುತ್ತೇನೆ’: ಆಡಳಿತದಲ್ಲಿ 25 ವರ್ಷ ಪೂರೈಸಿದ ಪ್ರಧಾನಿ ಮೋದಿ ಮಾತು; Video

ರಷ್ಯಾ ಕರಾವಳಿಯಲ್ಲಿ ಡ್ರೋನ್ ದಾಳಿ: ಹೊತ್ತಿ ಉರಿದ ತೈಲ ಟ್ಯಾಂಕರ್‌, 23 ಭಾರತೀಯ ಸಿಬ್ಬಂದಿ ಪಾರು..!

Lionel Messi: 21 ವರ್ಷಗಳ ಬಳಿಕ ತವರಿನಲ್ಲೇ ಫುಟ್ಬಾಲ್​ ದಿಗ್ಗಜ ಲಿಯೋನೆಲ್ ಮೆಸ್ಸಿ ಭಾವುಕ ವಿದಾಯ; ಹೇಗಿತ್ತು ನೋಡಿ ಅಂತಿಮ ಪಂದ್ಯ; Video

‘ದಯವಿಟ್ಟು ಮಲಗಬೇಡಿ, ನಮಗೆ ನೀವು ಬೇಕು’: ಸಾವಿನ ದವಡೆಯಲ್ಲಿದ್ದ ಸ್ಮಿತ್ ಮಚ್ಚರ್'ಗೆ ಧೈರ್ಯ ತುಂಬಿದ ದಂತ ವೈದ್ಯ, Flydubai ವಿಮಾನದಲ್ಲಿ ಆ 45 ನಿಮಿಷಗಳಲ್ಲಿ ನಡೆದಿದ್ದೇನು..?

‘ಮತ ಕಳ್ಳತನ’ದ ಆರೋಪದಲ್ಲಿ ಹುರುಳಿಲ್ಲ, ಸುಖಾಸುಮ್ಮನೆ ರಾಹುಲ್ ಗಾಂಧಿಯಿಂದ ಗೊಂದಲ ಸೃಷ್ಟಿ: ಹೆಚ್‌.ಡಿ. ಕುಮಾರಸ್ವಾಮಿ ಆರೋಪ