ಮೃತ ಬಾಲಕ 
ರಾಜ್ಯ

ಮಡಿಕೇರಿ: ವಸತಿ ಶಾಲೆಯಲ್ಲಿ ಬೆಂಕಿ ಅನಾಹುತ; 2ನೇ ತರಗತಿ ವಿದ್ಯಾರ್ಥಿ ಸಜೀವ ದಹನ

ವಸತಿ ಶಾಲೆಯ 2ನೇ ತರಗತಿ ವಿದ್ಯಾರ್ಥಿ ಪುಷ್ಪಕ್ ಮೃತಪಟ್ಟಿದ್ದಾನೆ. ಪುಷ್ಪಕ್ ಚೆಟ್ಟಿಮಾನಿ ನಿವಾಸಿ ಅನೀಲ್ ಅವರ ಪುತ್ರ ಎಂದು ತಿಳಿದುಬಂದಿದೆ.

ಮಡಿಕೇರಿ: ವಸತಿ ಶಾಲೆಯೊಂದರಲ್ಲಿ ಭೀಕರ ಅಗ್ನಿ ದುರಂತ ಸಂಭವಿಸಿದ್ದು, 2ನೇ ತರಗತಿ ವಿದ್ಯಾರ್ಥಿ ಮೃತಪಟ್ಟಿರುವ ಘಟನೆ ನಡೆದಿದೆ.

ವಸತಿ ಶಾಲೆಯ 2ನೇ ತರಗತಿ ವಿದ್ಯಾರ್ಥಿ ಪುಷ್ಪಕ್ ಮೃತಪಟ್ಟಿದ್ದಾನೆ. ಪುಷ್ಪಕ್ ಚೆಟ್ಟಿಮಾನಿ ನಿವಾಸಿ ಅನೀಲ್ ಅವರ ಪುತ್ರ ಎಂದು ತಿಳಿದುಬಂದಿದೆ.

ಕೊಡಗು ಜಿಲ್ಲೆಯ ಮಡಿಕೇರಿ ತಾಲೂಕಿನ ಕಾಟಗೇರಿ ಗ್ರಾಮದಲ್ಲಿ ಈ ದುರಂತ ಸಂಭವಿಸಿದೆ. ಬೆಳಗಿನ ನಾಲ್ಕು-ಐದು ಗಂಟೆ ವೇಳೆಗೆ ಶಾಲಾ ವಸತಿ ಗೃಹದಲ್ಲಿ ಬೆಂಕಿ ಕಾಣಿಸಿಕೊಂಡಿದೆ. ಶಾಲೆಯ ವಸತಿ ಗೃಹದಲ್ಲಿ ಒಟ್ಟು 53 ಮಂದಿ ವಿದ್ಯಾರ್ಥಿಗಳು ವಾಸಿಸುತ್ತಿದ್ದು, ಅವರಲ್ಲಿ ಬಾಲಕ ದುರದೃಷ್ಟವಶಾತ್ ಸಜೀವ ದಹನವಾಗಿದ್ದಾನೆ.

ಅಗ್ನಿ ಕಾಣಿಸಿಕೊಂಡ ತಕ್ಷಣ ಸ್ಥಳೀಯರು ಹಾಗೂ ಶಾಲಾ ಸಿಬ್ಬಂದಿ ವಿದ್ಯಾರ್ಥಿಗಳನ್ನು ಸುರಕ್ಷಿತ ಸ್ಥಳಕ್ಕೆ ಸ್ಥಳಾಂತರಿಸಲು ಯತ್ನಿಸಿದರೂ, ಪುಷ್ಪಕ್ ಆ ಸಮಯದಲ್ಲಿ ಸಿಕ್ಕಿಹಾಕಿಕೊಂಡಿದ್ದಾನೆಂದು ಪ್ರಾಥಮಿಕ ಮಾಹಿತಿ ತಿಳಿಸಿದೆ.

ಅಗ್ನಿಶಾಮಕ ದಳದ ಸಿಬ್ಬಂದಿ ತಕ್ಷಣ ಸ್ಥಳಕ್ಕೆ ಧಾವಿಸಿ ಬೆಂಕಿಯನ್ನು ನಿಯಂತ್ರಣಕ್ಕೆ ತರಲು ಪ್ರಯತ್ನಿಸಿದರು. ಶಾರ್ಟ್ ಸರ್ಕ್ಯೂಟ್‌ನಿಂದ ಈ ಘಟನೆ ಸಂಭವಿಸಿದೆ ಎಂದು ತಿಳಿದು ಬಂದಿದೆ. ಘಟನೆ ನಡೆದ ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ. ವಸತಿ ಶಾಲೆಯ ಸುರಕ್ಷತಾ ಅಂಶಗಳನ್ನು ಪರಿಶೀಲಿಸಲಾಗುತ್ತಿದೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಅನ್ನಭಾಗ್ಯ: 5 ಕೆಜಿ ಅಕ್ಕಿ ಬದಲು ಇಂದಿರಾ ಕಿಟ್ ವಿತರಣೆ: ಸಂಪುಟ ಸಭೆಯಲ್ಲಿ ಮಹತ್ವದ ತೀರ್ಮಾನ

ದೇಶದಲ್ಲೇ ಮೊದಲು: ಉದ್ಯೋಗಸ್ಥ ಮಹಿಳೆಯರಿಗೆ ಗುಡ್ ನ್ಯೂಸ್, ವೇತನ ಸಹಿತ 'ಋತುಚಕ್ರ ರಜೆ'ಗೆ ಸಚಿವ ಸಂಪುಟ ಒಪ್ಪಿಗೆ!

'ಮೂರ್ನಾಲ್ಕು ದಿನಗಳಲ್ಲಿ ಡಿಸ್ಚಾರ್ಜ್ ಆಗ್ತಾರೆ': ಎಚ್ ಡಿ ದೇವೇಗೌಡರ ಆರೋಗ್ಯದ ಕುರಿತು ಎಚ್ ಡಿ ಕುಮಾರಸ್ವಾಮಿ ಹೇಳಿಕೆ

Op Sindoor ನಿಂದ ಭಾರಿ ನಷ್ಟ, ಭಾರತದ ವಿರುದ್ಧ ಪ್ರತೀಕಾರಕ್ಕೆ ಸಜ್ಜು: ಮೊದಲ ಬಾರಿಗೆ 'ಮಹಿಳಾ ವಿಂಗ್ ' ರಚಿಸಿದ ಉಗ್ರ ಸಂಘಟನೆ JeM!

Dalit IPS officer's death: ಸೂಸೈಡ್ ನೋಟ್ ನಲ್ಲಿ ಅಧಿಕಾರಿಗಳ ಹೆಸರು ಉಲ್ಲೇಖ, ಕ್ರಮಕ್ಕೆ IAS ಪತ್ನಿಯ ಒತ್ತಾಯ!

SCROLL FOR NEXT