ಸಿಟಿ ಸಿವಿಲ್ ಕೋರ್ಟ್ 
ರಾಜ್ಯ

ಬೆಂಗಳೂರು: ನ್ಯಾಯಾಲಯದ 5ನೇ ಮಹಡಿಯಿಂದ ಜಿಗಿದು ಪೋಕ್ಸೋ ಪ್ರಕರಣದ ಆರೋಪಿ ಆತ್ಮಹತ್ಯೆ

ಇಂದು ಬೆಳಗ್ಗೆ ನಗರದ ಸಿಟಿ ಸಿವಿಲ್ ಕೋರ್ಟ್ ಆವರಣದಲ್ಲಿ ಈ ಘಟನೆ ನಡೆದಿದ್ದು, ಆತ್ಮಹತ್ಯೆ ಮಾಡಿಕೊಂಡ ಆರೋಪಿಯನ್ನು ಗೌತಮ್ ಎಂದು ಗುರುತಿಸಲಾಗಿದೆ.

ಬೆಂಗಳೂರು: ಪೋಕ್ಸೋ ಪ್ರಕರಣದಲ್ಲಿ ಬಂಧಿತನಾಗಿದ್ದ ಆರೋಪಿಯೊಬ್ಬ ನ್ಯಾಯಾಲಯದ 5ನೇ ಮಹಡಿಯಿಂದ ಜಿಗಿದು ಆತ್ಮಹತ್ಯೆ ಮಾಡಿಕೊಂಡಿರುವ ದಾರುಣ ಘಟನೆ ಗುರುವಾರ ನಡೆದಿದೆ.

ಇಂದು ಬೆಳಗ್ಗೆ ನಗರದ ಸಿಟಿ ಸಿವಿಲ್ ಕೋರ್ಟ್ ಆವರಣದಲ್ಲಿ ಈ ಘಟನೆ ನಡೆದಿದ್ದು, ಆತ್ಮಹತ್ಯೆ ಮಾಡಿಕೊಂಡ ಆರೋಪಿಯನ್ನು ಗೌತಮ್ ಎಂದು ಗುರುತಿಸಲಾಗಿದೆ.

ಮರಣೋತ್ತರ ಪರೀಕ್ಷೆಗಾಗಿ ಮೃತದೇಹವನ್ನು ವಿಕ್ಟೋರಿಯಾ ಆಸ್ಪತ್ರೆಗೆ ರವಾನಿಸಲಾಗಿದೆ. ವೈದ್ಯಕೀಯ ಪರೀಕ್ಷೆಯ ಬಳಿಕ ಕುಟುಂಬಸ್ಥರಿಗೆ ಶವ ಹಸ್ತಾಂತರಿಸಲಾಗುವುದು ಎಂದು ಪೊಲೀಸರು ತಿಳಿಸಿದ್ದಾರೆ.

ಗೌತಮ್ ಕೆ.ಆರ್.ಪುರಂನ ಆಕಾಶನಗರದ ನಿವಾಸಿಯಾಗಿದ್ದು, ತನ್ನ ಸಂಬಂಧಿ ಬಾಲಕಿಯ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದ ಮೇಲೆ ಬಂಧಿಸಲಾಗಿತ್ತು.

ಗೌತಮ್ ವಿರುದ್ಧ ಪೋಕ್ಸೋ ಪ್ರಕರಣ ದಾಖಲಿಸಿಕೊಂಡಿದ್ದ ಆಡುಗೋಡಿ ಪೊಲೀಸರು, ಕಳೆದ ಏಪ್ರಿಲ್​ನಲ್ಲಿ ಬಂಧಿಸಿ ಜೈಲಿಗೆ ಕಳಿಸಿದ್ದರು.

3ನೇ ತ್ವರಿತಗತಿ ವಿಶೇಷ ನ್ಯಾಯಾಲಯದಲ್ಲಿ ಇಂದು ವಿಚಾರಣೆ ನಿಗದಿಯಾಗಿತ್ತು. ನ್ಯಾಯಾಂಗ ಬಂಧನದಲ್ಲಿದ್ದ ಗೌತಮ್ ಜೊತೆಗೆ ಮತ್ತೊಂದು ಪ್ರಕರಣದ ಆರೋಪಿಯನ್ನು ಪೊಲೀಸರು ಪರಪ್ಪನ ಅಗ್ರಹಾರ ಜೈಲಿನಿಂದ ಬೆಳಗ್ಗೆ ನ್ಯಾಯಾಲಯಕ್ಕೆ ಕರೆತಂದಿದ್ದರು.

ಆರೋಪಿಗಳನ್ನು ಕೈಕೊಳ ಧರಿಸಿಯೇ ಕೋರ್ಟ್​​ಗೆ ಕರೆತರಲಾಗಿತ್ತು. ಬಳಿಕ ಕೋರ್ಟ್ ಹಾಲ್‌ನಲ್ಲಿ ಕೈಕೊಳವನ್ನು ಪೊಲೀಸರು ಬಿಚ್ಚಿದ್ದರು. ವಿಚಾರಣೆ ಮುಗಿಸಿ ಹೊರಬಂದ ಗೌತಮ್, ಕುಟುಂಬಸ್ಥರನ್ನು ಕಂಡು ತೀರ ಬೇಸರ ಮಾಡಿಕೊಂಡರು ಮತ್ತು ಏಕಾಏಕಿ ಪೊಲೀಸರಿಂದ ತಪ್ಪಿಸಿಕೊಂಡು ಕಟ್ಟಡದ 5ನೇ ಮಹಡಿಯಿಂದ ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

ಕೂಡಲೇ ಸ್ಥಳೀಯ ಆಸ್ಪತ್ರೆಗೆ ದಾಖಲಿಸಿದರೂ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾನೆ ಎಂದು ಪೊಲೀಸ್​ ಮೂಲಗಳು ತಿಳಿಸಿವೆ.

ಹಲಸೂರು ಗೇಟ್ ಪೊಲೀಸರು ಸ್ಥಳಕ್ಕೆ ಆಗಮಿಸಿ ತಪಾಸಣೆ ನಡೆಸಿ, ಪ್ರಕರಣ ದಾಖಲಿಸಿಕೊಂಡು ತನಿಖೆ ಕೈಗೊಂಡಿದ್ಧಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

CJP protest: ಮಮತಾ ಬ್ಯಾನರ್ಜಿ, ನೇಹಾ ಬೋರಾ, ಯೋಗೇಂದ್ರ ಯಾದವ್ ವಶಕ್ಕೆ ಪಡೆದ ಪೊಲೀಸರು

'ರೆಡ್ ಹ್ಯಾಂಡ್ ಆಗಿ ಸಿಕ್ಕಿ ಬಿದ್ಲು..' 'ವಿಡಿಯೋ ಕೋರ್ಟ್ ಗೆ ಕೊಟ್ಟಿದ್ದೆ'; ಐಶ್ವರ್ಯಾ ರೈ ಬಗ್ಗೆ ಲಾಲು ಪುತ್ರ ಸ್ಫೋಟಕ ಹೇಳಿಕೆ-Video

ಮತಗಳ್ಳತನದ ಆರೋಪದ ಬಗ್ಗೆ ಮೌನಕ್ಕೆ ಯಾಕೆ? ಮೋಹನ್ ಭಾಗವತ್ ಜೀ ಈಗ ಎಲ್ಲಿದ್ದಾರೆ?: ಪ್ರಿಯಾಂಕ್ ಖರ್ಗೆ ಪ್ರಶ್ನೆ

'ದೆಹಲಿ ಪೊಲೀಸರು ಟಾಸ್ ಗೆದ್ದು, ಮೊದಲು ಬ್ಯಾಟಿಂಗ್ ಮಾಡಲಿ': ಪಾಕಿಸ್ತಾನ ಮಾಜಿ ಕ್ರಿಕೆಟಿಗನ ಪೋಸ್ಟ್ ವೈರಲ್​!

ಹೊಸ ಇನ್ನಿಂಗ್ಸ್ ಆರಂಭಿಸಿದ RCB ಮಾಜಿ ಆಟಗಾರ; ತಮ್ಮ ಬಹುಕಾಲದ ಗೆಳತಿ ಕೈ ಹಿಡಿದ ಸ್ಫೋಟಕ ಬ್ಯಾಟರ್!