ರೆಸಾರ್ಟ್ ತೆರವುಗೊಳಿಸುತ್ತಿರುವ ಅಧಿಕಾರಿಗಳು. 
ರಾಜ್ಯ

ಕಾವೇರಿ ನದಿ ಪ್ರದೇಶ ಒತ್ತುವರಿ: ಅತಿಕ್ರಮಣದಾರರಿಗೆ ಅಧಿಕಾರಿಗಳ ಶಾಕ್, ಅಕ್ರಮ ರೆಸಾರ್ಟ್ ನೆಲಸಮ..!

ಕೆಲ ದಿನಗಳ ಹಿಂದಷ್ಟೇ ಶ್ರೀರಂಗಪಟ್ಟಣಕ್ಕೆ ಭೇಟಿ ನೀಡಿದ್ದ ಉಪ ಲೋಕಾಯುಕ್ತ ನ್ಯಾಯಮೂರ್ತಿ ಬಿ. ವೀರಪ್ಪ ಅವರಿಗೆ ಸ್ಥಳೀಯರು ಕಾವೇರಿ ನದಿ ಬಫರ್‌ ವಲಯ ವ್ಯಾಪ್ತಿಯಲ್ಲಿ ಕಟ್ಟಡ ನಿರ್ಮಾಣ ಮತ್ತು ನೀರಾವರಿ ಇಲಾಖೆಗೆ ಸೇರಿದ ಜಾಗದ ಅತಿಕ್ರಮಣದ ಬಗ್ಗೆ ದೂರು ನೀಡಿದ್ದರು.

ಮೈಸೂರು: ಕಾವೇರಿ ನದಿ ಪ್ರದೇಶವನ್ನು ಒತ್ತುವರಿ ಮಾಡಿಕೊಂಡು ಅಕ್ರಮವಾಗಿ ರೆಸಾರ್ಟ್, ಕಟ್ಟಡಗಳನ್ನು ನಿರ್ಮಿಸಿದ್ದವರಿಗೆ ಅಧಿಕಾರಿಗಳು ಬುಧವಾರ ಶಾಕ್ ನೀಡಿದ್ದಾರೆ.

ಮಂಡ್ಯದ ಶ್ರೀರಂಗಪಟ್ಟಣದ ಕಾವೇರಿ ನದಿ ತೀರದಲ್ಲಿ ತಲೆ ಎತ್ತಿದ್ದ ಅಕ್ರಮ ರೆಸಾರ್ಟ್ ಹಾಗೂ ಇತರೆ ಕಟ್ಟಡಗಳನ್ನು ತಹಶೀಲ್ದಾರ್‌ ಚೇತನಾ ಯಾದವ್ ಅವರ ನೇತೃತ್ವದಲ್ಲಿ, ಪೊಲೀಸ್‌ ಬಿಗಿ ಭದ್ರತೆಯಲ್ಲಿ ಸುಮಾರು ನಾಲ್ಕು ತಾಸುಗಳ ಕಾಲ ಕಾರ್ಯಾಚರಣೆ ನಡೆಸಿ, ತೆರವುಗೊಳಿಸಲಾಗಿದೆ.

ಖಾಸಗಿ ರೆಸಾರ್ಟ್‌, ಇತರೆ ವಾಣಿಜ್ಯ ಉದ್ದೇಶಕ್ಕಾಗಿ ನಿರ್ಮಿಸಿದ್ದ ಕಟ್ಟಡಗಳನ್ನು ಜೆಸಿಬಿ ಯಂತ್ರಗಳನ್ನು ಬಳಸಿ ಕೆಡವಲಾಗಿದೆ.

ಕೆಲ ದಿನಗಳ ಹಿಂದಷ್ಟೇ ಶ್ರೀರಂಗಪಟ್ಟಣಕ್ಕೆ ಭೇಟಿ ನೀಡಿದ್ದ ಉಪ ಲೋಕಾಯುಕ್ತ ನ್ಯಾಯಮೂರ್ತಿ ಬಿ. ವೀರಪ್ಪ ಅವರಿಗೆ ಸ್ಥಳೀಯರು ಕಾವೇರಿ ನದಿ ಬಫರ್‌ ವಲಯ ವ್ಯಾಪ್ತಿಯಲ್ಲಿ ಕಟ್ಟಡ ನಿರ್ಮಾಣ ಮತ್ತು ನೀರಾವರಿ ಇಲಾಖೆಗೆ ಸೇರಿದ ಜಾಗದ ಅತಿಕ್ರಮಣದ ಬಗ್ಗೆ ದೂರು ನೀಡಿದ್ದರು.

ಈ ದೂರು ಆಧರಿಸಿ ಅತಿಕ್ರಮ ತೆರವು ಮಾಡಿಸಿ ವರದಿ ಸಲ್ಲಿಸುವಂತೆ ಉಪ ಲೋಕಾಯುಕ್ತರಿಂದ ತಾಲ್ಲೂಕು ಆಡಳಿತಕ್ಕೆ ಒಂದು ತಿಂಗಳ ಹಿಂದೆ ನಿರ್ದೇಶನ ಬಂದಿತ್ತು. ಈ ಹಿನ್ನೆಲೆಯಲ್ಲಿ ಬಧವಾರ ನಸುಕಿನಲ್ಲೇ ತೆರವು ಕಾರ್ಯಾಚರಣೆ ನಡೆಯಿತು.

ರೆಸಾರ್ಟ್ ನಲ್ಲಿ ವಾರಾಂತ್ಯ ಕಾರ್ಯಕ್ರಮಗಳು ನಡೆಯುತ್ತಿದ್ದವು. ಇದು ಸೆಲೆಬ್ರಿಟಿಗಳ ಕೇಂದ್ರವಾಗಿ ಮಾರ್ಪಟ್ಟಿತ್ತು. ಜಾಗದ ಕುರಿತು ಸಾಮಾಜಿಕ ಜಾಲತಾಣಗಳಲ್ಲಿ ಪ್ರಚಾರ ಮಾಡಲಾಗುತ್ತಿತ್ತು. ಪ್ರಭಾವಿ ವ್ಯಕ್ತಿಗಳು, ಚಿತ್ರರಂಗದ ನಟ-ನಟಿಯರ ಕಾರ್ಯಕ್ರಮಗಳು ನಡೆಯುವುದು ಸಾಮಾನ್ಯವಾಗಿ ಹೋಗಿತ್ತು ಎಂದು ಸ್ಥಳೀಯರು ಹೇಳಿದ್ದಾರೆ.

ತಹಶೀಲ್ದಾರ್ ನೇತೃತ್ವದ ತಂಡವು ಸ್ವಯಂಪ್ರೇರಿತ ಪ್ರಕರಣ ದಾಖಲಿಸಿಕೊಂಡು ಈ ಕಾರ್ಯಾಚರಣೆಯನ್ನು ನಡೆಸಿದೆ ಎಂದು ಮಂಡ್ಯ ಜಿಲ್ಲಾಧಿಕಾರಿ ಕುಮಾರ್ ಅವರು ಹೇಳಿದ್ದಾರೆ.

ಇನ್ನು ಅತಿಕ್ರಮಣಗಳಿಗೆ ಅವಕಾಶ ನೀಡುವುದಿಲ್ಲ. ಇದೇ ರೀತಿ ಕಾರ್ಯಾಚರಣೆ ನಡೆಸಿ, ಅತಿಕ್ರಮಣಗಳನ್ನು ತೆರವುಗೊಳಿಸಲಾಗುವುದು ಎಂದು ತಿಳಿಸಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ದಾವಣಗೆರೆಯಲ್ಲಿ ಕಾಂಗ್ರೆಸ್ ಬೆನ್ನಿಗೆ ಚೂರಿ: ಸುರ್ಜೇವಾಲ ಕೈಸೇರಿದ ರಿಪೋರ್ಟ್; MLC ಅಬ್ದುಲ್ ಜಬ್ಬಾರ್ ರಾಜಿನಾಮೆ!

ಬಂಗಾಳದಲ್ಲಿ CAA, UCC ತ್ವರಿತ ಅನುಷ್ಠಾನ; ಮಾತುವಾ, ನಮಸುದ್ರರಿಗೆ ಪೌರತ್ವ ನೀಡುತ್ತೇವೆ: ಪ್ರಧಾನಿ ಮೋದಿ

ಚಲಿಸುತ್ತಿದ್ದ ಐಶಾರಾಮಿ ಕಾರಿನಲ್ಲೇ 'ದಮ್ ಮಾರೋ ದಮ್'; ಸಿಗರೇಟ್ ರಸ್ತೆಗೆಸೆದ Yuzvendra Chahal? Video Viral

ಹಾರ್ಮುಜ್ ತೆರೆಯಲು ಇರಾನ್ ಪರದಾಟ: ಜಲಸಂಧಿ ನಿರ್ಬಂಧಿಸಲು ತಾನೇ ನೆಟ್ಟ ಮೈನ್ಸ್ ಹುಡುಕಲು ವಿಫಲ; ಹಾಗಾದ್ರೆ ಮುಂದೇನು?

ಇಸ್ಲಾಮಾಬಾದ್‌ಗೆ ಆಗಮಿಸಿದ ಜೆಡಿ ವ್ಯಾನ್ಸ್ ವಿಮಾನಕ್ಕೆ ಪಾಕ್‌ನ ಐದು ಎಫ್-16 ಎಸ್ಕಾರ್ಟ್; Video ನೋಡಿ

SCROLL FOR NEXT