ಸಾಂದರ್ಭಿಕ ಚಿತ್ರ 
ರಾಜ್ಯ

ದೇಶದಲ್ಲೇ ಮೊದಲು: ಉದ್ಯೋಗಸ್ಥ ಮಹಿಳೆಯರಿಗೆ ಗುಡ್ ನ್ಯೂಸ್; ವೇತನ ಸಹಿತ 'ಋತುಚಕ್ರ ರಜೆ'ಗೆ ರಾಜ್ಯ ಸಚಿವ ಸಂಪುಟ ಒಪ್ಪಿಗೆ!

ದೇಶದಲ್ಲೇ ಇದೇ ಮೊದಲ ಬಾರಿಗೆ ಕರ್ನಾಟಕ ಸರ್ಕಾರವು ಮಾಸಿಕ ಋತುಸ್ರಾವದ ರಜೆ ನೀತಿಯನ್ನು ಜಾರಿಗೆ ತರಲು ನಿರ್ಧರಿಸಿದ್ದು, ಈ ನೀತಿಯ ಅನ್ವಯ ಮಹಿಳಾ ನೌಕರರಿಗೆ ತಿಂಗಳಿಗೆ ಒಂದು ದಿನದ ವೇತನ ಸಹಿತ ರಜೆ ಸಿಗಲಿದೆ.

ಬೆಂಗಳೂರು: ಮಹತ್ವದ ಬೆಳವಣಿಗೆಯಲ್ಲಿ ಕರ್ನಾಟಕ ಕಾಂಗ್ರೆಸ್ ಸರ್ಕಾರ ಉದ್ಯೋಗಸ್ಥ ಮಹಿಳೆಯರಿಗೆ ಸಿಹಿಸುದ್ದಿ ನೀಡಿದ್ದು, ವೇತನ ಸಹಿತ 'ಋತುಚಕ್ರ ರಜೆ'ಗೆ ಸಚಿವ ಸಂಪುಟ ಸಭೆಯಲ್ಲಿ ಗುರುವಾರ ಒಪ್ಪಿಗೆ ಲಭಿಸಿದೆ.

ಹೌದು.. ದೇಶದಲ್ಲೇ ಇದೇ ಮೊದಲ ಬಾರಿಗೆ ಕರ್ನಾಟಕ ಸರ್ಕಾರವು ಮಾಸಿಕ ಋತುಸ್ರಾವದ ರಜೆ ನೀತಿಯನ್ನು ಜಾರಿಗೆ ತರಲು ನಿರ್ಧರಿಸಿದ್ದು, ಈ ನೀತಿಯ ಅನ್ವಯ ಮಹಿಳಾ ನೌಕರರಿಗೆ ತಿಂಗಳಿಗೆ ಒಂದು ದಿನದ ವೇತನ ಸಹಿತ ರಜೆ ಸಿಗಲಿದೆ.

ಸಾರ್ವಜನಿಕ ಮತ್ತು ಖಾಸಗಿ ವಲಯದ ಎಲ್ಲ ಉದ್ಯೋಗದಾತರು ಈ ನೀತಿಯನ್ನು ಕಡ್ಡಾಯವಾಗಿ ಅಳವಡಿಸಿಕೊಳ್ಳಬೇಕಾಗುತ್ತದೆ. ಸಚಿವ ಸಂಪುಟ ಸಭೆಯಲ್ಲಿ ಈ ಬಗ್ಗೆ ಚರ್ಚಿಸಿ ಅನುಮೋದನೆ ನೀಡಲಾಗಿದೆ.

ನೂತನ ನೀತಿಯ ಅನ್ವಯ ಇದರನ್ವಯ ಮಹಿಳಾ ನೌಕರರಿಗೆ ತಿಂಗಳಿಗೆ ಒಂದು ದಿನದ ವೇತನ ಸಹಿತ ರಜೆ ಸಿಗಲಿದೆ. ಸಾರ್ವಜನಿಕ ಮತ್ತು ಖಾಸಗಿ ವಲಯದ ಎಲ್ಲ ಉದ್ಯೋಗದಾತರು ಈ ನೀತಿಯನ್ನು ಕಡ್ಡಾಯವಾಗಿ ಅಳವಡಿಸಿಕೊಳ್ಳಬೇಕಾಗುತ್ತದೆ. ಗುರುವಾರ ನಡೆದ ಕರ್ನಾಟಕ ಸಚಿವ ಸಂಪುಟ ಸಭೆಯಲ್ಲಿ ಈ ಬಗ್ಗೆ ಚರ್ಚಿಸಿ, ಅನುಮೋದನೆ ನೀಡಲಾಗಿದೆ.

ಮಾಹಿತಿ ನೀಡಿದ ಸಚಿವ ಎಚ್ ಕೆ ಪಾಟೀಲ್

ಇನ್ನು ಈ ಬಗ್ಗೆ ಕಾನೂನು ಸಚಿವ ಎಚ್‌ಕೆ ಪಾಟೀಲ್‌ ಮಾಹಿತಿ ನೀಡಿದ್ದು, 'ಸರ್ಕಾರಿ ಕಚೇರಿಗಳು, ಗಾರ್ಮೆಂಟ್ಸ್, ಎಂಎನ್‌ಸಿ, ಐಟಿ ಮತ್ತು ಇತರೆ ಖಾಸಗಿ ಸಂಸ್ಥೆ, ಕೈಗಾರಿಕೆಗಳು ಸೇರಿದಂತೆ ಎಲ್ಲಾ ವಲಯಗಳಲ್ಲಿ ಕೆಲಸ ಮಾಡುವ ಮಹಿಳೆಯರಿಗೆ ಪ್ರತಿ ತಿಂಗಳು ಒಂದು ದಿನದ ವೇತನ ಸಹಿತ ರಜೆ ನೀಡುವ "ಋತುಚಕ್ರ ರಜೆ ನೀತಿ"ಗೆ ಸಂಪುಟ ಒಪ್ಪಿಗೆ ನೀಡಿದೆ' ಎಂದು ಹೇಳಿದರು.

ಕಾರ್ಮಿಕ ಸಚಿವ ಸಂತೋಷ್ ಲಾಡ್ ಪ್ರಸ್ತಾಪ

ಇನ್ನು ಕಾರ್ಮಿಕ ಇಲಾಖೆಯು 2025 ರ ಮಾಸಿಕ ಋತುಸ್ರಾವದ ರಜೆ ನೀತಿಗಾಗಿ ಆಡಳಿತಾತ್ಮಕ ಅನುಮೋದನೆ ಕೋರಿತ್ತು. ಈಗಾಗಲೇ ಕೇರಳವು ಇಂಡಸ್ಟ್ರಿಯಲ್ ಟ್ರೈನಿಂಗ್ ಇನ್‌ಸ್ಟಿಟ್ಯೂಟ್‌ಗಳಲ್ಲಿನ ಮಹಿಳಾ ತರಬೇತಿದಾರರಿಗೆ ಎರಡು ದಿನಗಳ ಮಾಸಿಕ ಋತುಸ್ರಾವದ ರಜೆಯನ್ನು ಪರಿಚಯಿಸಿದೆ.

ಬಿಹಾರ ಮತ್ತು ಒಡಿಶಾದಲ್ಲಿ ರಾಜ್ಯ ಸರ್ಕಾರಿ ನೌಕರರಿಗೆ ಮಾತ್ರ 12 ದಿನಗಳ ವಾರ್ಷಿಕ ಮಾಸಿಕ ಋತುಸ್ರಾವದ ರಜೆ ನೀತಿ ಜಾರಿಯಲ್ಲಿದೆ. ಆದರೆ, ಕರ್ನಾಟಕವು ಈ ನೀತಿಯನ್ನು ಸಮಗ್ರವಾಗಿ ಜಾರಿಗೆ ತರುವ ಮೊದಲ ರಾಜ್ಯವಾಗಲಿದೆ ಎಂದು ಕಾರ್ಮಿಕ ಸಚಿವ ಸಂತೋಷ್ ಲಾಡ್ ತಿಳಿಸಿದ್ದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Asian Games 2026: ಫೈನಲ್ ನಲ್ಲಿ ಪಾಕಿಸ್ತಾನ ವಿರುದ್ಧ ಭಾರತಕ್ಕೆ ರೋಚಕ ಜಯ, ಮತ್ತೊಂದು ಚಿನ್ನದ ಪದಕ

Asian Games 2026: ಇತಿಹಾಸ ಬರೆದ ಮೈಸೂರಿನ ಪ್ರಣವಿ ಅರಸ್; ಚಿನ್ನ ಗೆದ್ದ ಮೊದಲ ಭಾರತೀಯ ಮಹಿಳಾ ಗಾಲ್ಫರ್

Dimple Queen: ಹುಟ್ಟುಹಬ್ಬದ ಸಂಭ್ರಮದಲ್ಲಿ ರಚಿತಾ ರಾಮ್ ಕೆನ್ನೆ ಗಿಂಡಿದ ಅಭಿಮಾನಿ! Video ವೈರಲ್

ನೈಟ್ ಶಿಫ್ಟ್ ಮುಗಿಸಿ ಮನೆಗೆ ಮರಳುವಷ್ಟರಲ್ಲಿ ಎದುರಾಯ್ತು ಸಾವು: ತಿರುಪತಿಯ ಫಾರ್ಮಾ ಘಟಕದಲ್ಲಿ ಸಿಡಿದ ಬಾಯ್ಲರ್, ಐವರು ಕಾರ್ಮಿಕರು ಸಾವು!

CNG ರೀಫಿಲ್ ವೇಳೆ ಭೀಕರ ಸ್ಫೋಟ; NH-48ರಲ್ಲಿ ಭಯಾನಕ ಘಟನೆ, ಬದುಕಿದ್ದೇ ಅಚ್ಚರಿ! Video