ಮೃತ ಜಯಶ್ರೀ 
ರಾಜ್ಯ

ಚಿಕ್ಕಬಳ್ಳಾಪುರ: ಬೇರೆ ಮಹಿಳೆಯೊಂದಿಗೆ ಪತಿಯ ಸಂಬಂಧ, ಬೆಂಕಿ ಹಚ್ಚಿಕೊಂಡು ನವವಿವಾಹಿತೆ ಆತ್ಮಹತ್ಯೆ!

ಜಯಶ್ರೀ ಆತ್ಮಹತ್ಯೆ ಮಾಡಿಕೊಂಡ ವಿವಾಹಿತೆ. ತವರು ಮನೆಯಲ್ಲಿ ಮನೆಯ ಹೊರಭಾಗದ ಶೌಚಾಲಯದಲ್ಲಿ ಮೈ ಮೇಲೆ ಸೀಮೆಎಣ್ಣೆ ಸುರಿದುಕೊಂಡು ಬೆಂಕಿ ಹಚ್ಚಿಕೊಂಡು ಜಯಶ್ರೀ ಆತ್ಮಹತ್ಯೆಗೆ ಶರಣಾಗಿದ್ದಾಳೆ.

ಚಿಕ್ಕಬಳ್ಳಾಪುರ: ಬೇರೆ ಮಹಿಳೆಯೊಂದಿಗೆ ಪತಿ ಅಕ್ರಮ ಸಂಬಂಧ ಹೊಂದಿದ್ದರಿಂದ ಬೇಸತ್ತ ನವ ವಿವಾಹಿತೆಯೊಬ್ಬಳು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಜಿಲ್ಲೆಯ ಗುಡಿಬಂಡೆ ತಾಲೂಕಿನ ಕೊಂಡವಾಲಹಳ್ಳಿ ಗ್ರಾಮದಲ್ಲಿ ನಡೆದಿದೆ.

ಜಯಶ್ರೀ ಆತ್ಮಹತ್ಯೆ ಮಾಡಿಕೊಂಡ ವಿವಾಹಿತೆ. ತವರು ಮನೆಯಲ್ಲಿ ಮನೆಯ ಹೊರಭಾಗದ ಶೌಚಾಲಯದಲ್ಲಿ ಮೈ ಮೇಲೆ ಸೀಮೆಎಣ್ಣೆ ಸುರಿದುಕೊಂಡು ಬೆಂಕಿ ಹಚ್ಚಿಕೊಂಡು ಜಯಶ್ರೀ ಆತ್ಮಹತ್ಯೆಗೆ ಶರಣಾಗಿದ್ದಾಳೆ.

ಅಂದಹಾಗೆ, ಕಳೆದ 6 ತಿಂಗಳ ಹಿಂದೆಯಷ್ಟೇ ಜಿಲ್ಲೆಯ ಶಿಡ್ಲಘಟ್ಟ ತಾಲೂಕಿನ ಕೊಂಡಪ್ಪಗಾರಹಳ್ಳಿಯ ನಿವಾಸಿ ಚಂದ್ರಶೇಖರ್ ಜೊತೆ ವಿವಾಹವಾಗಿತ್ತು. ಆದರೆ. ಆದರೆ ದಿನೇ ದಿನೇ ಇಬ್ಬರ ಮಧ್ಯೆ ಹೊಂದಾಣಿಕೆ ಕಡಿಮೆಯಾಗಿದ್ದು, ಕಿರುಕುಳ ನೀಡುತ್ತಿದ್ದ ಎಂದು ಆರೋಪಿಸಿ ನವ ವಿವಾಹಿತೆ ಫೇಸ್ ಬುಕ್ ನಲ್ಲಿ ಡೆತ್​ನೋಟ್​​ ಬರೆದಿಟ್ಟು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

ಬೇರೆ ಯುವತಿ ಜೊತೆ ಗಂಡನಿಗೆ ಅಕ್ರಮ ಸಂಬಂಧವಿದ್ದು, ಮದುವೆ ಬಳಿಕ ಈ ವಿಷಯ ನನಗೆ ತಿಳಿಯಿತು. ಇಬ್ಬರೂ ಯಾವಾಗಲೂ ಫೋನ್​, ಚಾಟಿಂಗ್​ ಮಾಡುತ್ತಿರುತ್ತಾರೆ. ಇದನ್ನು ಪ್ರಶ್ನಿಸಿದರೆ ಗಂಡ ಕೋಪಮಾಡಿಕೊಂಡು ಜಗಳವಾಡುತ್ತಾರೆ. ಅವರ ಕಿರುಕುಳದಿಂದಾಗಿ ಬೇಸತ್ತು ಸೂಸೈಡ್​ ಮಾಡಿಕೊಳ್ಳುತ್ತಿರೋದಾಗಿ ಡೆತ್​ ನೋಟ್​ ನಲ್ಲಿ ಆಕೆ ಆರೋಪಿಸಿದ್ದಾಳೆ.

ಈ ಸಂಬಂಧ ಜಯಶ್ರೀ ತಂದೆ ಶ್ರೀಧರ್ ನೀಡಿದ ದೂರಿನ ಮೇರೆಗೆ ಗುಡಿಬಂಡೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ತನಿಖೆ ಕೈಗೊಂಡಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

Tsunami: ದಕ್ಷಿಣ ಫಿಲಿಪೈನ್ಸ್‌ನಲ್ಲಿ 7.6 ತೀವ್ರತೆಯ ಭೂಕಂಪ; ಅಪಾಯಕಾರಿ ಸುನಾಮಿಯ ಎಚ್ಚರಿಕೆ!

Bus strike-ಬೇಡಿಕೆಗೆ ಕ್ಯಾರೇ ಎನ್ನದ ಸರ್ಕಾರ: ಮತ್ತೆ ಮುಷ್ಕರಕ್ಕೆ ಮುಂದಾದ ಸಾರಿಗೆ ನೌಕರರು

ಕುತೂಹಲ ಮೂಡಿಸಿದ ಸಿಎಂ ಸಿದ್ದರಾಮಯ್ಯ ಡಿನ್ನರ್ ಮೀಟ್: ಗರಿಗೆದರಿದ ಸಂಪುಟ ಪುನಾರಚನೆ, ಡಿಸಿಎಂ ಡಿಕೆಶಿ ಏನೆಂದರು?

ಸಚಿವ ಸಂಪುಟ ಪುನಾರಚನೆ ವಿಚಾರ ನನಗೆ ಗೊತ್ತಿಲ್ಲ: ಡಿಸಿಎಂ ಡಿ.ಕೆ. ಶಿವಕುಮಾರ್

Big shake-up: ಎರಡೂವರೆ ವರ್ಷಗಳ ಅವಧಿ ಮುಗಿಯುತ್ತಿದ್ದಂತೆ ಶೇ.50ರಷ್ಟು ಸಚಿವರನ್ನು ಸಿದ್ದು ಕೈಬಿಡುವ ಸಾಧ್ಯತೆ?

SCROLL FOR NEXT