ಮಂಗಳೂರು: ಮಂಗಳೂರಿನ ಸರ್ಕಾರಿ ಆಸ್ಪತ್ರೆಯಲ್ಲಿ ಪ್ಯಾರಾ ಮೆಡಿಕ್ ಆಗಿದ್ದ 26 ವರ್ಷದ ಯುವಕ, ತನ್ನ ಖಾಸಗಿ ವಿಡಿಯೋ ಮಾಡಿ ಹಣಕ್ಕಾಗಿ ಕಿರುಕುಳ ನೀಡುತ್ತಿದ್ದಾರೆಂದು ದೆತ್ತ್ ನೋಟ್ ಬರೆದಿಟ್ಟು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.
ಆತ್ಮಹತ್ಯೆ ಮಾಡಿಕೊಂಡ ಯುವಕನನ್ನು ನಿಟ್ಟೆಯ ಪರ್ಪಾಡಿ ನಿವಾಸಿ ಅಭಿಷೇಕ್ ಎಂದು ಗುರುತಿಸಲಾಗಿದ್ದು, ಇಂದು ಬೆಳಗ್ಗೆ ತಮ್ಮ ಮನೆಯಲ್ಲಿ ಶವವಾಗಿ ಪತ್ತೆಯಾಗಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.
ಪೊಲೀಸರ ಪ್ರಕಾರ, ಅಭಿಷೇಕ್, ತನ್ನ ಖಾಸಗಿ ವಿಡಿಯೋ ಬಳಸಿ ನಾಲ್ವರು "ಬ್ಲ್ಯಾಕ್‌ಮೇಲ್ ಮತ್ತು ಕಿರುಕುಳ ನೀಡುತ್ತಿದ್ದಾರೆ" ಎಂದು ಆರೋಪಿಸಿದ್ದಾರೆ.
ನಾಲ್ವರು ವ್ಯಕ್ತಿಗಳಾದ ನಿರೀಕ್ಷಾ, ರಾಹುಲ್, ರಾಕೇಶ್ ಮತ್ತು ತಸ್ಲಿಮ್ ಹಣಕ್ಕಾಗಿ ತೀವ್ರ ಮಾನಸಿಕ ಮತ್ತು ದೈಹಿಕ ಕಿರುಕುಳ ನೀಡಿದ್ದಾರೆ. ಅಲ್ಲದೆ ಕೊಲ್ಲುವುದಾಗಿ ಬೆದರಿಕೆ ಹಾಕಿದ್ದಾರೆ ಎಂದು ಅಭಿಷೇಕ್ ಆರೋಪಿಸಿದ್ದಾರೆ.
ಡೆತ್ ನೋಟ್‌ನ ವಿಷಯಗಳ ಆಧಾರದ ಮೇಲೆ ತನಿಖೆ ನಡೆಯುತ್ತಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ಪ್ರಾಥಮಿಕ ತನಿಖೆಯಲ್ಲಿ, ಅಭಿಷೇಕ್ ನಿರಂತರ ಬೆದರಿಕೆ ಮತ್ತು ಸುಲಿಗೆ ಪ್ರಯತ್ನಗಳಿಂದ ನೊಂದಿದ್ದರು ಎಂದು ಸೂಚಿಸಿವೆ.