ಜಿಬಿಎ ಸಭೆಯಲ್ಲಿ ಸಿದ್ದರಾಮಯ್ಯ 
ರಾಜ್ಯ

ಸಮಸ್ತ ಜನರಿಗೆ ಸುಗಮ ಆಡಳಿತ, ಶುದ್ಧ ನೀರಿನ ಪೂರೈಕೆ; ಸ್ವಚ್ಚತೆ-ಸಂಚಾರ ವ್ಯವಸ್ಥೆಗೆ ಸಿಎಂ ಸಿದ್ದರಾಮಯ್ಯ ಕಟ್ಟಪ್ಪಣೆ

ಕಸ ವಿಲೇವಾರಿ ಆಗಬೇಕು. ಪಾಲಿಕೆಗಳ ಆದಾಯ ಹೆಚ್ಚಳ ಆಗಬೇಕು. ಟ್ರಾಫಿಕ್ ದಟ್ಟಣೆ ನಿವಾರಣೆ ಆಗಬೇಕು. ನಗರವನ್ನು ಚೊಕ್ಕವಾಗಿಡಬೇಕು. ರಸ್ತೆ, ಚರಂಡಿ, ಪಾದಚಾರಿ ಮಾರ್ಗ, ಉದ್ಯಾನಗಳ ನಿರ್ಮಾಣಕ್ಕೆ ಆದ್ಯತೆ ನೀಡಿ ಮಾದರಿ ಪಾಲಿಕೆಗಳನ್ನಾಗಿ ರೂಪಿಸಬೇಕು.

ಬೆಂಗಳೂರು: ಅತಿ ವೇಗವಾಗಿ ಬೆಳೆಯುತ್ತಿರುವ ಬೆಂಗಳೂರು ನಗರದ ಸಮಸ್ತ ಜನರಿಗೆ ಸುಗಮ ಆಡಳಿತ, ಸಮರ್ಪಕ‌ ಅಭಿವೃದ್ಧಿಗಾಗಿ ‘ಗ್ರೇಟರ್ ಬೆಂಗಳೂರು ಪ್ರಾಧಿಕಾರ’(ಜಿಬಿಎ) ಅಸ್ತಿತ್ವಕ್ಕೆ ತರಲಾಗಿದೆ. ಅದರಡಿ ಐದು ನಗರ ಪಾಲಿಕೆಗಳನ್ನು ರಚಿಸಲಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು.

ಗ್ರೇಟರ್ ಬೆಂಗಳೂರು ಪ್ರಾಧಿಕಾರದ ಮೊದಲ ಸಭೆಯ ಶುಕ್ರವಾರ ನಡೆಯಿತು. ಸಭೆಯಲ್ಲಿ ಜಿಬಿಎ ರಚನೆ ಹಿಂದಿನ‌ ಉದ್ದೇಶಗಳನ್ನು ಪ್ರಸ್ತಾಪಿಸಿ, ನಗರದ ಸರ್ವತೋಮುಖ ಅಭಿವೃದ್ಧಿಗೆ ಕೈಗೊಳ್ಳಬೇಕಾದ ಕ್ರಮಗಳ ಬಗ್ಗೆ ಅಧಿಕಾರಿಗಳಿಗೆ ಸೂಚನೆ ನೀಡಿದರು.

ಶುದ್ಧ ನೀರಿನ ಪೂರೈಕೆ, ಸ್ವಚ್ಚತೆ, ಸಂಚಾರ ವ್ಯವಸ್ಥೆ ಸೇರಿದಂತೆ ಬೆಂಗಳೂರಿಗರ ಜೀವನಮಟ್ಟ ಸುಧಾರಣೆಗೆ ಕೈಗೊಳ್ಳಬೇಕಿರುವ ಕ್ರಮಗಳ ಬಗ್ಗೆ ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ. ಜೊತೆಗೆ ಬೆಂಗಳೂರಿನ ಅಭಿವೃದ್ಧಿ ಒಲ್ಲದವರಿಗೆ ಸಭೆಯನ್ನು ವಿರೋಧಿಸುತ್ತಾರೆ ಎಂದು ಪರೋಕ್ಷವಾಗಿ ಟಾಂಗ್​ ಕೊಟ್ಟಿದ್ದಾರೆ.

ಕಸ ವಿಲೇವಾರಿ ಆಗಬೇಕು. ಪಾಲಿಕೆಗಳ ಆದಾಯ ಹೆಚ್ಚಳ ಆಗಬೇಕು. ಟ್ರಾಫಿಕ್ ದಟ್ಟಣೆ ನಿವಾರಣೆ ಆಗಬೇಕು. ನಗರವನ್ನು ಚೊಕ್ಕವಾಗಿಡಬೇಕು. ರಸ್ತೆ, ಚರಂಡಿ, ಪಾದಚಾರಿ ಮಾರ್ಗ, ಉದ್ಯಾನಗಳ ನಿರ್ಮಾಣಕ್ಕೆ ಆದ್ಯತೆ ನೀಡಿ ಮಾದರಿ ಪಾಲಿಕೆಗಳನ್ನಾಗಿ ರೂಪಿಸಬೇಕು ಎನ್ನುವ ಮಹತ್ತರ ಗುರಿ ಮತ್ತು ಉದ್ದೇಶಗಳೊಂದಿಗೆ ಕಾರ್ಯನಿರ್ವಹಿಸಬೇಕು ಎಂದು ಅಧಿಕಾರಿಗಳಿಗೆ ಕಟ್ಟಪ್ಪಣೆ ಮಾಡಿದರು.

ಬೆಂಗಳೂರಿನ ಜನಸಂಖ್ಯೆ 1.40 ಕೋಟಿ ತಲುಪಿದೆ. ಒಂದು ಪಾಲಿಕೆಯಿಂದ ದೊಡ್ಡ ನಗರದ ಸಮರ್ಪಕ ಅಭಿವೃದ್ಧಿ ಬಹಳ ದೊಡ್ಡ ಸವಾಲು. ಈ ಚರ್ಚೆ ಹಲವು ವರ್ಷಗಳಿಂದ ಇದ್ದೇ ಇದೆ. ಒಂದಕ್ಕಿಂತ ಹೆಚ್ಚು ಪಾಲಿಕೆಗಳಿಂದ ಅಭಿವೃದ್ಧಿ ಸಾಧ್ಯ ಎನ್ನುವ ಕಾರಣಕ್ಕೆ, ನಾನು ಮೊದಲ ಬಾರಿ ಮುಖ್ಯಮಂತ್ರಿ ಆಗಿದ್ದಾಗಲೇ ಸಮಿತಿ ರಚಿಸಲಾಗಿತ್ತು. ನಂತರ ಬಂದ ಸರ್ಕಾರಗಳು ಈ ದಿಕ್ಕಿನಲ್ಲಿ ಗಮನಹರಿಸಲೇ ಇಲ್ಲ.

ನಮ್ಮ ಸರ್ಕಾರವೇ ಪುನಃ ಅಧಿಕಾರಕ್ಕೆ ಬಂದ ಬಳಿಕ ಸಮಿತಿಯನ್ನು ಪುನರ್‌ ರಚಿಸಿ, ಅದು ನೀಡಿದ ವರದಿಯಂತೆ ಮುಖ್ಯಮಂತ್ರಿ ಅಧ್ಯಕ್ಷತೆಯ ಗ್ರೇಟರ್ ಬೆಂಗಳೂರು ಪ್ರಾಧಿಕಾರ ಅಸ್ತಿತ್ವಕ್ಕೆ ಬಂದಿದೆ ಎಂದರು. ನಮ್ಮ ಗುರಿ ಮತ್ತು ಉದ್ದೇಶ ನೆರವೇರಲು ಜಲಮಂಡಳಿ, ಬಿಡಿಎ, ಬೆಸ್ಕಾಂ ಸೇರಿ ಎಲ್ಲಾ ಇಲಾಖೆಗಳು ಜಿಬಿಎ ಜತೆ ಪರಸ್ಪರ ಸಹಕಾರ, ಸಹಯೋಗವನ್ನು ಅತ್ಯಂತ ಕಡ್ಡಾಯವಾಗಿ ಆಚರಣೆಗೆ ತರಬೇಕು ಸೂಚಿಸಿದರು.

ಚರ್ಚೆ-ಸಂವಾದದಿಂದ ಪ್ರಜಾಪ್ರಭುತ್ವ ಗಟ್ಟಿಯಾಗುತ್ತದೆ. ಏನೇ ವಿರೋಧಗಳಿದ್ದರೂ ಸಭೆಗೆ ಹಾಜರಾಗಿ ಚರ್ಚೆ ನಡೆಸಿ ಅಭಿವೃದ್ಧಿಗೆ ಪೂರಕವಾಗಿ ಸಹಕಾರ ನೀಡಬೇಕು. ಅಧಿಕಾರ ವಿಕೇಂದ್ರೀಕರಣವನ್ನು ವಿರೋಧಿಸುವವರು ಮತ್ತು ಬೆಂಗಳೂರಿನ ಅಭಿವೃದ್ಧಿಗೆ ಒಲ್ಲದವರು ಸಭೆಯನ್ನು ವಿರೋಧಿಸುತ್ತಾರೆ ಎಂದು ವಿರೋಧ ಪಕ್ಷಗಳಿಗೆ ಟಾಂಗ್ ನೀಡಿದರು.

ಎಲ್ಲಾ ನಗರಸಭೆ ಆಯುಕ್ತರು ತಮ್ಮ ವ್ಯಾಪ್ತಿಯಲ್ಲಿ ತೆರಿಗೆ ಸಂಗ್ರಹವನ್ನು ಹೆಚ್ಚಿಸಬೇಕು. ಕಸ ವಿಲೇವಾರಿ, ಸ್ವಚ್ಚತೆಗೆ ಆದ್ಯತೆ ನೀಡಬೇಕು. ಫುಟ್‌ಪಾತ್‌ಗಳು ಸಾಧ್ಯವಾದಷ್ಟು ವಿಸ್ತಾರವಾಗಿರುವಂತೆ ನೋಡಿಕೊಳ್ಳಬೇಕು. ಗುಣಮಟ್ಟದಲ್ಲಿ ಯಾವುದೇ ಕಾರಣಕ್ಕೂ ರಾಜಿಯಾಗದಂತೆ ನೋಡಿಕೊಳ್ಳಬೇಕು. ಅಧಿಕಾರಿಗಳು ಗುತ್ತಿಗೆದಾರರೊಂದಿಗೆ ಶಾಮೀಲಾದರೆ ಗುಣಮಟ್ಟದ ಕಾಮಗಾರಿ ಸಾಧ್ಯವಿಲ್ಲ. ಇದಕ್ಕೆ ಅವಕಾಶ ನೀಡಬಾರದು ಎಂದು ಸೂಚನೆ ನೀಡಿದ್ದೇನೆ ಎಂದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಅಮೆರಿಕ ನಿಯೋಜಿತ ರಾಯಭಾರಿ ಸೆರ್ಗಿಯೊ ಗೋರ್- ಮೋದಿ, ಜೈಶಂಕರ್ ಭೇಟಿ; Tariff ಒತ್ತಡದ ನಡುವೆ ಭಾರತ-ಅಮೆರಿಕ ಸಂಬಂಧ ಸುಧಾರಣೆಯ ಸೂಚನೆ?

ಅಫ್ಘಾನಿಸ್ತಾನ ನಮ್ಮೊಂದಿಗೆ ಗಡಿ ಹಂಚಿಕೊಂಡಿರುವ ನೆರೆ ರಾಷ್ಟ್ರ- S Jaishankar; ಭಾರತದೊಂದಿಗೆ POK ವಿಲೀನದ ಸುಳಿವು; ಚೀನಾಗೂ ಶಾಕ್!

ಅಬ್ಬಬ್ಬಾ ರೋಮಾಂಚನ: ಅದ್ಭುತ ಸೃಷ್ಟಿಸಿದ ರಿಷಬ್ ಶೆಟ್ಟಿಗೆ ರಾಷ್ಟ್ರಪ್ರಶಸ್ತಿ ಕೊಡಲೇಬೇಕು - ತಮಿಳು ನಿರ್ದೇಶಕ ಅಟ್ಲೀ

Pakistan: ಇಸ್ರೇಲ್ ವಿರೋಧಿ ಪ್ರತಿಭಟನಾ ಜಾಥಾ, ಪೋಲೀಸರ ಗುಂಡೇಟಿಗೆ 11 ಮಂದಿ ಬಲಿ! Video

ಉತ್ತರ ಪ್ರದೇಶಕ್ಕೆ ಭೇಟಿ ನೀಡಿದ ತಾಲಿಬಾನ್ ಸಚಿವನಿಗೆ ಅದ್ಧೂರಿ ಸ್ವಾಗತ, ಸರ್ಕಾರದ ಭದ್ರತೆ; ಯೋಗಿಗೆ ನಾಚಿಕೆಯಾಗಬೇಕು- SP ಸಂಸದ ಶಫೀಕರ್

SCROLL FOR NEXT