ಕಂಬಳ ಕ್ರೀಡೆ  
ರಾಜ್ಯ

ಕಂಬಳ ಕ್ರೀಡೆಗೆ ಬಜೆಟ್‌ನಲ್ಲಿ 2 ಕೋಟಿ ರೂ ಅನುದಾನ ಮೀಸಲಿಡಿ: ಅಸೋಸಿಯೇಷನ್ ಒತ್ತಾಯ

ಕಂಬಳ ಸಂಘವು ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ಅಡಿಯಲ್ಲಿ ಕ್ರೀಡಾ ಸಂಸ್ಥೆಯಾಗಿ ಮಾನ್ಯತೆ ಪಡೆದಿದೆ. ಇದರೊಂದಿಗೆ, ಕಂಬಳವನ್ನು ರಾಜ್ಯ ಕ್ರೀಡೆಯಾಗಿ ಗುರುತಿಸಲಾಗಿದೆ.

ಮಂಗಳೂರು: ಕಂಬಳ ಕ್ರೀಡೆಗೆ ರಾಜ್ಯ ಸರ್ಕಾರ ಬಜೆಟ್‌ನಲ್ಲೇ ಕನಿಷ್ಠ 2 ಕೋಟಿ ರೂ.ಅನುದಾನ ಮೀಸಲಿಡಬೇಕು ಎಂದು ರಾಜ್ಯ ಕಂಬಳ ಅಸೋಸಿಯೇಷನ್‌ ಶನಿವಾರ ಒತ್ತಾಯಿಸಿದೆ.

ಶನಿವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅಸೋಸಿಯೇಷನ್ ಅಧ್ಯಕ್ಷ ಐಕಳಬಾವ ದೇವಿಪ್ರಸಾದ್ ಶೆಟ್ಟಿ ಅವರು, ಕಂಬಳ ಸಂಘವು ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ಅಡಿಯಲ್ಲಿ ಕ್ರೀಡಾ ಸಂಸ್ಥೆಯಾಗಿ ಮಾನ್ಯತೆ ಪಡೆದಿದೆ. ಇದರೊಂದಿಗೆ, ಕಂಬಳವನ್ನು ರಾಜ್ಯ ಕ್ರೀಡೆಯಾಗಿ ಗುರುತಿಸಲಾಗಿದೆ. ಇದು ನೆರೆಯ ಕಾಸರಗೋಡು ಸೇರಿದಂತೆ ಕರಾವಳಿ ಜಿಲ್ಲೆಗಳ ಸಾಂಪ್ರದಾಯಿಕ ಕ್ರೀಡೆಯಾಗಿದೆ ಎಂದು ಹೇಳಿದರು.

ಈ ವರ್ಷ, ನವೆಂಬರ್ 15 ರಿಂದ ಪ್ರಾರಂಭವಾಗುವ 25 ಕಂಬಳ ಕಾರ್ಯಕ್ರಮಗಳನ್ನು ನಾವು ಯೋಜಿಸಿದ್ದೇವೆ. ಹರೇಕಳ ಮತ್ತು ಬಡಗಬೆಟ್ಟುವಿನಲ್ಲಿ ಎರಡು ಹೊಸ ಕಂಬಳ ಕಾರ್ಯಕ್ರಮಗಳನ್ನು ನಡೆಸಲಾಗುವುದು. ಹೀಗಾಗಿ ಪ್ರತಿ ಕಂಬಳಕ್ಕೆ 8 ಲಕ್ಷ ರೂ.ಗಳಂತೆ ಬಜೆಟ್‌ನಲ್ಲಿ 2 ಕೋಟಿ ರೂ.ಗಳನ್ನು ನಿಗದಿಪಡಿಸುವಂತೆ ರಾಜ್ಯ ಸರ್ಕಾರವನ್ನು ಒತ್ತಾಯಿಸಿದ್ದೇವೆ, ಐಪಿಎಲ್ ಮಾದರಿಯಲ್ಲಿ ಕಂಬಳ ಕಾರ್ಯಕ್ರಮಗಳಿಗೆ ಪ್ರಾಯೋಜಕರನ್ನು ಕರೆತರುವ ಯೋಜನೆಯೂ ಇದೆ ಎಂದು ತಿಳಿಸಿದರು.

ಕಂಬಳ ಸಂದರ್ಭದಲ್ಲಿ ಕೋಣಗಳಿಗೆ ಹಿಂಸೆ ನೀಡುವುದನ್ನು ತಡೆಯಲು ಕಟ್ಟುನಿಟ್ಟಿನ ಕ್ರಮ ವಹಿಸುತ್ತೇವೆ. ನಮ್ಮ ಅಸೋಸಿಯೇಷನ್ ಜೊತೆಗೆ ಪೊಲೀಸ್‌ ಇಲಾಖೆ ಪಶುಸಂಗೋಪನಾ ಇಲಾಖೆಗಳೂ ಈ ಬಗ್ಗೆ ಕಣ್ಗಾವಲು ಇಡಲಿವೆ. ಕಂಬಳದ ಆಯೋಜಕರು ಮತ್ತು ಭಾಗವಹಿಸುವವರು ನಿರ್ದಿಷ್ಟ ಸಮಯದ ಚೌಕಟ್ಟನ್ನು ಕಟ್ಟುನಿಟ್ಟಾಗಿ ಅನುಸರಿಸುತ್ತಾರೆ. ಇದನ್ನೂ ಮೀರಿಯೂ ಕೋಣಗಳಿಗೆ ಹಿಂಸೆ ನೀಡಿದ್ದು ಕಂಡು ಬಂದರೆ ಅಂತಹ ಕಂಬಳಗಳನ್ನು ಕಪ್ಪುಪಟ್ಟಿಗೆ ಸೇರ್ಪಡೆ ಮಾಡಲಿದ್ದೇವೆ. ಕಂಬಳ ಆಯೋಜಿಸುವವರು ಪಾಲಿಸ ಬೇಕಾದ ನಿಯಮಗಳ ಕುರಿತು ಪುಸ್ತಕವನ್ನೇ ಸಿದ್ಧಪಡಿಸಲಿದ್ದೇವೆ.

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಕಂಬಳ ಕ್ರೀಡೆಗೆ ಬಜೆಟ್ ಹಂಚಿಕೆ ಕುರಿತು ಬೈಲಾವನ್ನು ರೂಪಿಸಲು ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ಪ್ರಧಾನ ಕಾರ್ಯದರ್ಶಿ ನವೀನ್ ರಾಜ್ ಸಿಂಗ್ ಅವರಿಗೆ ನಿರ್ದೇಶನ ನೀಡಿದ್ದಾರೆ. ಭಾಗವಹಿಸುವವರು ಮತ್ತು ಸಂಘಟಕರು ಅನುಸರಿಸಬೇಕಾದ ನಿಯಮ ಪುಸ್ತಕವನ್ನು ಸಂಘವು ಶೀಘ್ರದಲ್ಲೇ ಬಿಡುಗಡೆ ಮಾಡಲಿದೆ ಎಂದು ಹೇಳಿದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

IPL 2026: ಗುಜರಾತ್ ವಿರುದ್ಧ ಭರ್ಜರಿ ಗೆಲುವು; ಸತತ 2ನೇ ಬಾರಿ ಫೈನಲ್ಸ್ ಪ್ರವೇಶಿಸಿದ RCB

IPL 2026: 33 ಎಸೆತ, 9 ಸಿಕ್ಸರ್, ಒಂದೇ ಒಂದು ಡಾಟ್.. Rajat Patidar ಸ್ಫೋಟಕ ಬ್ಯಾಟಿಂಗ್ ಗೆ ಕೊಹ್ಲಿ ಸೇರಿ ಕ್ರೀಡಾಂಗಣವೇ ದಂಗು!

ಈ ವಾರವೇ ಸಿದ್ದರಾಮಯ್ಯ ರಾಜೀನಾಮೆ ಸಾಧ್ಯತೆ; ಆಪ್ತರ ಬಳಿ CM ಹೇಳಿದ್ದೇನು?: ಮೇ.27 ರಂದು ರಾಜ್ಯಕ್ಕೆ ಹೈಕಮಾಂಡ್ ನಾಯಕರು

IPL 2026 Qualifier 1: GT ವಿರುದ್ದ ಸ್ಫೋಟಕ ಬ್ಯಾಟಿಂಗ್, ಇತಿಹಾಸ ಬರೆದ RCB

IPL 2026 Qualifier 1: ಐಪಿಎಲ್ ಅಷ್ಟೇ ಅಲ್ಲ.. ಜಾಗತಿಕ ಟಿ20 ಕ್ರಿಕೆಟ್ ನಲ್ಲೂ RCB ಐತಿಹಾಸಿಕ ದಾಖಲೆ, ರೆಕಾರ್ಡ್ ಗಳ ಪಟ್ಟಿ!

SCROLL FOR NEXT