ಬೆಂಗಳೂರು: ಅನಾರೋಗ್ಯ ಹಿನ್ನೆಲೆ ಕಳೆದ ವಾರ ಆಸ್ಪತ್ರೆಗೆ ದಾಖಲಾಗಿದ್ದ ಮಾಜಿ ಪ್ರಧಾನಮಂತ್ರಿ ಹಾಗೂ ಜೆಡಿಎಸ್ ವರಿಷ್ಠ ಹೆಚ್‌ಡಿ ದೇವೇಗೌಡ ಅವರ ಆರೋಗ್ಯ ಇದೀಗ ಸ್ಥಿರವಾಗಿದ್ದು, ಸೋಮವಾರ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ.
ಕಳೆದ ಒಂದು ವಾರದಿಂದ ನಗರದ ಮಣಿಪಾಲ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ದೇವೇಗೌಡ ಅವರು, ವೈದ್ಯರ ಸಲಹೆ ಮೇರೆಗೆ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ.
ಜ್ವರ ಹಾಗೂ ಯೂರಿನ್ ಇನ್ಫೆಕ್ಷನ್ನಿಂದಾಗಿ ದೇವೇಗೌಡ ಅವರು, ಅಕ್ಟೋಬರ್ 6ರಂದು ಮಣಿಪಾಲ ಆಸ್ಪತ್ರೆಗೆ ದಾಖಲಾಗಿದ್ದರು. ಇದೀಗ ಆರೋಗ್ಯದಲ್ಲಿ ಚೇತರಿಕೆ ಕಂಡು ಬಂದಿದ್ದು, ವೈದ್ಯರ ಸಲಹೆಯಂತೆ ಮುಂದಿನ ಕೆಲವು ದಿನಗಳು ಮನೆಯಲ್ಲಿ ವಿಶ್ರಾಂತಿ ಪಡೆಯಲಿದ್ದಾರೆ.
ದೇವೇಗಡ ಅವರಿಗೆ ಆಸ್ಪತ್ರೆಯಲ್ಲಿ ತಜ್ಞ ವೈದ್ಯರ ತಂಡ ಚಿಕಿತ್ಸೆ ನೀಡಿದ್ದು, ಇದೀಗ ಅವರ ಆರೋಗ್ಯ ಸ್ಥಿರವಗಿದೆ. ಆಸ್ಪತ್ರೆಯಿಂದ ಬಿಡುಗಡೆಯಾಗುತ್ತಿದ್ದಾರೆ ಎಂದು ಮಣಿಪಾಲ ಆಸ್ಪತ್ರೆ ಅಧಿಕಾರಿಗಳು ತಿಳಿಸಿದ್ದಾರೆ.