ಯತೀಂದ್ರ ಸಿದ್ದರಾಮಯ್ಯ 
ರಾಜಕೀಯ

ತಾಲಿಬಾನ್, RSS ಒಂದೇ 'ಮೈಂಡ್ ಸೆಟ್': ಯತೀಂದ್ರ ಸಿದ್ದರಾಮಯ್ಯ ಕಿಡಿ!

ಶಾಲೆಗಳಲ್ಲಿ, ಕಾಲೇಜುಗಳಲ್ಲಿ, ಪಾರ್ಕ್‌ಗಳಲ್ಲಿ ಸುಮ್ಮನೆ ಸಭೆಗಳನ್ನ ಮಾಡುವುದು, ಅವರ ವಿಷಪೂರಿತವಾದ ಸಿದ್ಧಾಂತಗಳನ್ನ ಹರಡುವ ಕೆಲಸಗಳನ್ನ ಮಾಡಬಾರದು

ರಾಯಚೂರು: ರಾಜ್ಯದಲ್ಲಿನ ಸರ್ಕಾರಿ ಸಂಸ್ಥೆಗಳಲ್ಲಿ ಆರ್ ಎಸ್ ಎಸ್ ಚಟುವಟಿಕೆಗಳಿಗೆ ಬ್ರೇಕ್ ಹಾಕಬೇಕು ಎಂಬ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಚಿವ ಪ್ರಿಯಾಂಕ್ ಖರ್ಗೆ ಅವರ ಹೇಳಿಕೆ ಕುರಿತು ರಾಜ್ಯದಲ್ಲಿ ತೀವ್ರ ಚರ್ಚೆ ನಡೆಯುತ್ತಿರುವಂತೆಯೇ ಆರ್ ಎಸ್ ಎಸ್ , ತಾಲಿಬಾನಿಗಳ ಮೈಂಡ್ ಸೆಟ್ ಒಂದೇ ಯಾಗಿದೆ ಎಂದು ಸಿದ್ದರಾಮಯ್ಯ ಅವರ ಪುತ್ರ ಡಾ. ಯತೀಂದ್ರ ಸಿದ್ದರಾಮಯ್ಯ ಕಿಡಿಕಾರಿದ್ದಾರೆ.

ರಾಯಚೂರಿನಲ್ಲಿ ನಿನ್ನೆ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸಾರ್ವಜನಿಕ ಸ್ಥಳಗಳಲ್ಲಿ ಏನೇ ಬೈಠಕ್ ಮಾಡಬೇಕೆಂದರೂ ಪೂರ್ವಾನುಮತಿ ಪಡೆಯಬೇಕು. ಆರ್‌ಎಸ್‌ಎಸ್‌ನವರು (RSS)ಯಾವುದೇ ಪೂರ್ವಾನುಮತಿಯಿಲ್ಲದೆ ಕಾರ್ಯಕ್ರಮ ಮಾಡ್ತಾರೆ.ಯಾರೂ ಹೇಳುವವರಿಲ್ಲ ಕೇಳುವವರಿಲ್ಲ ಅಂತ ಇಷ್ಟು ದಿನ ಮಾಡಿಕೊಂಡು ಬಂದುಬಿಟ್ಟಿದ್ದಾರೆ. ಹಾಗಾಗಿ ಅದಕ್ಕೆ ಕಡಿವಾಣ ಹಾಕಬೇಕು ಎಂದರು.

ಸರ್ಕಾರಿ ಸ್ಥಳಗಳಲ್ಲಿ ಆರ್‌ಎಸ್‌ಎಸ್ ಕಾರ್ಯಕ್ರಮ ನಡೆಸುವುದಕ್ಕೆ ತೀವ್ರ ಆಕ್ಷೇಪ ವಿಚಾರಕ್ಕೆ ಪ್ರತಿಕ್ರಿಯಿಸಿದ ಅವರು, ಶಾಲೆಗಳಲ್ಲಿ, ಕಾಲೇಜುಗಳಲ್ಲಿ, ಪಾರ್ಕ್‌ಗಳಲ್ಲಿ ಸುಮ್ಮನೆ ಸಭೆಗಳನ್ನ ಮಾಡುವುದು, ಅವರ ವಿಷಪೂರಿತವಾದ ಸಿದ್ಧಾಂತಗಳನ್ನ ಹರಡುವ ಕೆಲಸಗಳನ್ನ ಮಾಡಬಾರದು ಎಂದು ಹೇಳಿದರು.

ಆರ್ ಎಸ್ ಎಸ್ ನವರು ಸುಮ್ನೆ ಮಾಮೂಲಾಗಿ ಕಾರ್ಯಕ್ರಮಗಳನ್ನ ಮಾಡಲ್ಲ. ಹಾಗಾಗಿ ಅದಕ್ಕೆ ಕಡಿವಾಣ ಹಾಕಬೇಕು. ಅನುಮತಿ ಪಡೆದು ಕಾರ್ಯಕ್ರಮ ಮಾಡಲಿ ಎಂದು ತಿಳಿಸಿದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಧಾರವಾಡ ರಂಗಾಯಣ ನಿರ್ದೇಶಕ, ಹಾಸ್ಯ ಚಿತ್ರನಟ ರಾಜು ತಾಳಿಕೋಟಿ ನಿಧನ

ಟ್ರಂಪ್ 'ಶ್ರೇಷ್ಠ ಸ್ನೇಹಿತ' ಎಂದ ನೆತನ್ಯಾಹು, ಅಮೆರಿಕ ಅಧ್ಯಕ್ಷರಿಗೆ ಇಸ್ರೇಲ್ ಸಂಸತ್ ನಲ್ಲಿ standing ovation ಸ್ವಾಗತ!

ಯತ್ನಾಳ್-ಪ್ರತಾಪ್ ಸಿಂಹ ವಿರುದ್ಧ ಕಟು ಟೀಕೆ: ಕೈ ಶಾಸಕ ಪ್ರದೀಪ್ ಈಶ್ವರ್ ಗೆ ಜನರಿಂದಲೇ ತರಾಟೆ; "ಕಾಮೆಂಟ್ಸ್ ನೋಡಿದರೆ ಹುಚ್ಚ ಆಗೋದು ಗ್ಯಾರೆಂಟಿ"- ಪ್ರತಾಪ್ ಟಾಂಗ್

RSS ವಿರುದ್ಧ ಲೈಂಗಿಕ ಕಿರುಕುಳ ಆರೋಪ ಮಾಡಿ ಸಾವಿಗೆ ಶರಣಾದ ಕೇರಳದ ಸಾಫ್ಟ್‌ವೇರ್ ಎಂಜಿನಿಯರ್; ಪ್ರಿಯಾಂಕಾ ಆಕ್ರೋಶ!

RSS ಒಂದು 'ರಹಸ್ಯ ಸಂಘಟನೆ', ರಿಜಿಸ್ಟರ್ ಆಗಿಲ್ಲ; ಆದ್ರೂ ನೂರಾರು ಕೋಟಿ ಎಲ್ಲಿಂದ ಬರುತ್ತದೆ?

SCROLL FOR NEXT