ವಿಎಸ್ ಉಗ್ರಪ್ಪ 
ರಾಜ್ಯ

CM ಗೆ ಮುಜುಗರ ಆಗುವ ರೀತಿ ಮಾತನಾಡಬಾರದಿತ್ತು: ವಿಎಸ್ ಉಗ್ರಪ್ಪ ಹೇಳಿಕೆಗೆ ಚುನಾವಣಾ ಆಯುಕ್ತ ಸಂಗ್ರೇಶಿ ಬೇಸರ

ಸಿದ್ದರಾಮಯ್ಯ ಸಾಮಾಜಿಕ ನ್ಯಾಯಕ್ಕಾಗಿ ಬಡಿದಾಡುತ್ತಿದ್ದಾರೆ‌. ಅವರು ಇನ್ನೊಬ್ಬರ ಅನ್ನ ಕಸಿದುಕೊಳ್ಳುವುದಿಲ್ಲ. ಅವರು ಒಂದು ಜನಾಂಗಕ್ಕೆ ಸೀಮಿತರಲ್ಲ. ಪಕ್ಷ ಅಥವಾ ಬೇರೆ ವೇದಿಕೆಗಳಲ್ಲಿ ಮೀಸಲಾತಿ ಬಗ್ಗೆ ಪ್ರಶ್ನಿಸಬಹುದಿತ್ತು.

ಕೊಪ್ಪಳ: ಸಾಮಾಜಿಕ ನ್ಯಾಯದ ತಳಹದಿಯಿಂದ ಬಂದ ಮಾಜಿ ಸಂಸದ ವಿ.ಎಸ್.ಉಗ್ರಪ್ಪ ಮುಖ್ಯಮಂತ್ರಿ ಸಿದ್ದರಾಮಯ್ಯ ಜೊತೆಗಾರರು. ಆದರೂ ಸರ್ಕಾರಿ ಕಾರ್ಯಕ್ರಮದಲ್ಲಿ ನಮ್ಮ ತಟ್ಟೆಯಲ್ಲಿನ ಅನ್ನ ಕಸಿದುಕೊಳ್ಳಬೇಡಿ ಎಂದಿದ್ದು ಸರಿಯಲ್ಲ ಎಂದು ರಾಜ್ಯ ಚುನಾವಣಾ ಆಯುಕ್ತ ಜಿ.ಎಸ್. ಸಂಗ್ರೇಶಿ ಬೇಸರ ವ್ಯಕ್ತಪಡಿಸಿದರು.

ಭಾನುವಾರ ನಗರದಲ್ಲಿ ಸುದ್ದಿಗಾರರ ಜೊತೆ ಮಾತನಾಡಿ ಸಾಮಾಜಿಕ ನ್ಯಾಯಕ್ಕಾಗಿ ಜೀವನ ಮುಡಿಪಾಗಿಟ್ಟ ಸಿದ್ದರಾಮಯ್ಯ ಅವರಿಗೆ ಮುಜುಗರ ಆಗುವ ರೀತಿಯಲ್ಲಿ ಉಗ್ರಪ್ಪ ಮಾತನಾಡಬಾರದಿತ್ತು. ಸಿದ್ದರಾಮಯ್ಯ ಸಾಮಾಜಿಕ ನ್ಯಾಯಕ್ಕಾಗಿ ಬಡಿದಾಡುತ್ತಿದ್ದಾರೆ‌.

ಅವರು ಇನ್ನೊಬ್ಬರ ಅನ್ನ ಕಸಿದುಕೊಳ್ಳುವುದಿಲ್ಲ. ಅವರು ಒಂದು ಜನಾಂಗಕ್ಕೆ ಸೀಮಿತರಲ್ಲ. ಪಕ್ಷ ಅಥವಾ ಬೇರೆ ವೇದಿಕೆಗಳಲ್ಲಿ ಮೀಸಲಾತಿ ಬಗ್ಗೆ ಪ್ರಶ್ನಿಸಬಹುದಿತ್ತು. ಇದು ನನ್ನ ವೈಯಕ್ತಿಕ ಅಭಿಪ್ರಾಯವಷ್ಟೇ. ಪ್ರಜ್ಞಾವಂತರು ಇದನ್ನು ಒಪ್ಪುವುದಿಲ್ಲ. ನನಗೆ ಗೊತ್ತಿರುವ ಮಾಹಿತಿ ಹೇಳಬೇಕು.‌ ಇಲ್ಲದಿದ್ದರೆ ನನ್ನದೂ ತಪ್ಪಾಗುತ್ತದೆ ಎಂದರು.

ರಾಜ್ಯ ಹಿಂದುಳಿದ ವರ್ಗಗಳ ಆಯೋಗ ನಡೆಸುತ್ತಿರುವ ಸಮೀಕ್ಷೆಯಿಂದ ಎಲ್ಲ ಸಮುದಾಯಗಳ ಜನರ ಮಾಹಿತಿ ಗೊತ್ತಾಗುತ್ತದೆ. ಅವರಿಗೆ ಕಲ್ಯಾಣ ಯೋಜನೆ ರೂಪಿಸಲು ಸಮೀಕ್ಷೆಯಿಂದ ಲಭಿಸುವ ದತ್ತಾಂಶಗಳು ಅನುಕೂಲವಾಗುತ್ತವೆ ಎಂದು ಹೇಳಿದರು.

ಸುಪ್ರೀಂ ಕೋರ್ಟ್ ಆದೇಶದಂತೆ ಮತದಾರರ ಪಟ್ಟಿ ಪರಿಷ್ಕರಣೆ ಮಾಡಬೇಕಿದ್ದು, ನವೆಂಬರ್‌ನಿಂದ ಕೆಲಸ ಆರಂಭಿಸುತ್ತೇವೆ. ಕೇಂದ್ರ ಚುನಾವಣಾ ಆಯೋಗ ನಾವು ಮಾಡಿದ ಬಳಿಕ ಪಟ್ಟಿ ಪರಿಷ್ಕರಿಸಲಿ ಎಂದು ಪತ್ರ ಬರೆದಿದ್ದೇನೆ. ಅವರೂ ಸ್ಥಳೀಯ ಸಂಸ್ಥೆ ಚುನಾವಣೆ ಇರುವೆಡೆ ಪರಿಷ್ಕರಣೆ ಮಾಡುವುದಿಲ್ಲವೆಂದು ತಿಳಿಸಿದ್ದಾರೆ‌ ಎಂದು ಮಾಹಿತಿ ನೀಡಿದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

'ಮತಗಳ್ಳತನ' ನಡೆದಿರುವುದನ್ನು ಅಧ್ಯಕ್ಷೆ ದ್ರೌಪದಿ ಮುರ್ಮು ನಿರಾಕರಿಸಲಿಲ್ಲ, ನನಗೆ ಆಶ್ಚರ್ಯವಾಯಿತು: ರಾಹುಲ್ ಗಾಂಧಿ

19ನೇ ಓವರ್‌ನಲ್ಲೇ 250 ರನ್ ಚೇಸ್: ಟಿ20 ಕ್ರಿಕೆಟ್‌ನಲ್ಲಿ ಭಾರತವನ್ನು ಸೋಲಿಸಿ ದಾಖಲೆ ಬರೆದ ವಿಂಡೀಸ್

CJP Protest: ಭಾರತದ ಯುವಕರು ದೆಹಲಿಗೆ ತಲುಪುವುದನ್ನು ತಡೆಯಲು ಯಾರಿಂದಲೂ ಸಾಧ್ಯವಿಲ್ಲ: ಚಿರಾಗ್ ಪಾಸ್ವಾನ್

24 ಗಂಟೆ ಇಂಟರ್ನೆಟ್ ಕಟ್, 57 ಮೆಟ್ರೋ ನಿಲ್ದಾಣ ಬಂದ್: ಸಿಜೆಪಿ ಪ್ರತಿಭಟನೆಗೂ ಮುನ್ನ ದೆಹಲಿ ಹೈ ಅಲರ್ಟ್

ನಂದಿಗ್ರಾಮದಲ್ಲಿ 1.22 ಲಕ್ಷ ಮತ, ಅಸ್ಸಾಂನಲ್ಲಿ BJPಗೆ ಗೆಲುವು; 2 ಕ್ಷೇತ್ರ ಗೆದ್ದ TVK: ಕಾಂಗ್ರೆಸ್, ದೀದಿಗೆ ಮುಖಭಂಗ!