ಉಡುಪಿ: ಕಾರ್ಕಳದ ಮಾಜಿ ಶಾಸಕ ದಿ. ಗೋಪಾಲ ಭಂಡಾರಿಯವರ ಪುತ್ರ ಸುದೀಪ್ ಭಂಡಾರಿ (48) ಆತ್ಮಹತ್ಯೆ ಶರಣಾಗಿದ್ದಾರೆ. ಸುದೀಪ್ ಭಂಡಾರಿ ಸೋಮವಾರ ರಾತ್ರಿ ಬ್ರಹ್ಮಾವರ ಸಮೀಪದ ಬಾರ್ಕೂರು ಬಳಿ ರೈಲು ಹಳಿಗೆ ತಲೆಕೊಟ್ಟು ಆತ್ಮಹತ್ಯೆಗೆ ಶರಣಾಗಿದ್ದಾರೆ.
ಮೃತ ಸುದೀಪ್ ಭಂಡಾರಿ ಹೆಬ್ರಿಯಲ್ಲಿ ವೈನ್ ಶಾಪ್ ನಡೆಸಿಕೊಂಡಿದ್ದು, ಅತ್ಯಂತ ಸರಳ ವ್ಯಕ್ತಿತ್ವದವರಾಗಿದ್ದರು ಎನ್ನಲಾಗಿದೆ. ಮೃತರು ತಾಯಿ, ಪತ್ನಿ, ಇಬ್ಬರು ಮಕ್ಕಳು, ಒಬ್ಬ ಸಹೋದರ ಮತ್ತು ಒಬ್ಬ ಸಹೋದರಿಯನ್ನು ಅಗಲಿದ್ದಾರೆ.
ಬ್ರಹ್ಮಾವರ ಪೊಲೀಸ್ ಠಾಣೆಯ ಅಧಿಕಾರಿಗಳು ಸ್ಥಳಕ್ಕೆ ಧಾವಿಸಿ ಶ್ರೀ ಭಂಡಾರಿಯವರ ಸಾವಿನ ಸುತ್ತಲಿನ ಸಂದರ್ಭಗಳ ಬಗ್ಗೆ ಸಮಗ್ರ ತನಿಖೆಯನ್ನು ಪ್ರಾರಂಭಿಸಿದ್ದಾರೆ.
ಆದರೆ ಸುದೀಪ್ ಈ ರೀತಿ ಆತ್ಮಹತ್ಯೆ ಮಾಡಿಕೊಳ್ಳಲು ನಿಖರ ಕಾರಣ ತಿಳಿದು ಬಂದಿಲ್ಲ. ಹೆಬ್ರಿ ತಾಲೂಕು ನಿವಾಸಿಯಾಗಿರುವ ಸುದೀಪ್, ಆರ್ಥಿಕ ಮುಗ್ಗಟ್ಟಿನಿಂದ ಆತ್ಮಹತ್ಯೆ ಮಾಡಿಕೊಂಡಿರುವ ಸಾಧ್ಯತೆ ಇದೆ ಎನ್ನಲಾಗಿದೆ. ಈ ಸಂಬಂಧ ಬ್ರಹ್ಮಾವರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.