ಬೆಂಗಳೂರಿನ ರಸ್ತೆಗುಂಡಿ  
ರಾಜ್ಯ

ಬೆಂಗಳೂರಿನ ರಸ್ತೆಗುಂಡಿ, ಕಸದ ಸಮಸ್ಯೆ ಬಗ್ಗೆ ಕಿರಣ್ ಮಜುಂದಾರ್ ಶಾಗೆ ಚೀನಾ ಉದ್ಯಮಿ ಪ್ರಶ್ನೆ? ಪ್ರಿಯಾಂಕ್​ ಖರ್ಗೆ, ಎಂ.ಬಿ.ಪಾಟೀಲ್ ಪ್ರತಿಕ್ರಿಯೆ ಹೀಗಿದೆ...

ಕಿರಣ್ ಮಜುಂದಾರ್ ಅವರ ಈ ಪೋಸ್ಟ್​ ವಿಚಾರದ ಬಗ್ಗೆ ಐಟಿ ಬಿಟಿ ಸಚಿವ ಪ್ರಿಯಾಂಕ್​ ಖರ್ಗೆ ಪ್ರತಿಕ್ರಿಯಿಸಿದ್ದು, ಬೆಂಗಳೂರಿಗೆ ಉದ್ಯಮಿಗಳದ್ದು ಅವರದ್ದೇ ಆದ ಕೊಡುಗೆ ಇದೆ. ಸಮಸ್ಯೆಗಳ ಬಗ್ಗೆ ಅವರು ಕರೆ ಮಾಡಿ ನಮ್ಮ ಜೊತೆ ಮಾತನಾಡಬಹುದು ಎಂದಿದ್ದಾರೆ.

ಬೆಂಗಳೂರು: ರಾಜಧಾನಿ ಬೆಂಗಳೂರಿನ ರಸ್ತೆ ಗುಂಡಿಗಳ ಬಗ್ಗೆ ಉದ್ಯಮಿಗಳು ಈ ಹಿಂದೆ ಸರ್ಕಾರ ವಿರುದ್ಧ ಆರೋಪ ಮಾಡಿದ್ದುಂಟು. ಕಂಪೆನಿಯೊಂದು ಬೆಂಗಳೂರು ತೊರೆಯುವ ಎಚ್ಚರಿಕೆಯನ್ನೂ ಕೊಟ್ಟಿದ್ದರು. ಇದೀಗ ಬೆಂಗಳೂರಿನಲ್ಲಿ ರಸ್ತೆಗುಂಡಿಗಳನ್ನು ಮುಚ್ಚುವ ಕೆಲಸ ನಡೆಯುತ್ತಿದೆ. ಇಷ್ಟೆಲ್ಲ ಆದರೂ ನಗರದ ರಸ್ತೆಗುಂಡಿ ಸಮಸ್ಯೆ ಮುಂದುವರಿದಿದ್ದು, ಈ ಬಗ್ಗೆ ಬಯೋಕಾನ್​ ಮುಖ್ಯಸ್ಥೆ ಕಿರಣ್ ಮಜುಂದಾರ್ ಶಾ ಮಾಡಿರುವ ಎಕ್ಸ್ ಪೋಸ್ಟ್ ವೈರಲ್ ಆಗಿದೆ.

ಕಿರಣ್ ಮಜುಂದಾರ್ ಶಾ ಪೋಸ್ಟ್ ನಲ್ಲಿ ಏನಿದೆ?

ಬಯೋಕಾನ್​ ಪಾರ್ಕ್​ಗೆ ಚೀನಾದಿಂದ ಬಂದಿದ್ದ ಉದ್ಯಮಿಯೊಬ್ಬರು ಬೆಂಗಳೂರು ನಗರದ ರಸ್ತೆಗಳು ಇಷ್ಟೊಂದು ಹಾಳಾಗಿವೆ? ಕಂಡ‌ ಕಂಡಲ್ಲಿ‌ ಕಸದ ರಾಶಿ ಯಾಕಿದೆ? ಇಲ್ಲಿನ ಸರ್ಕಾರ ಹೂಡಿಕೆದಾರರಿಗೆ ಬೆಂಬಲ ನೀಡುತ್ತಿಲ್ಲವೇ ಎಂದು ನನ್ನನ್ನು ಪ್ರಶ್ನಿಸಿದ್ದಾರೆ ಎಂದು ಮಜುಂದಾರ್ ಶಾ ಹೇಳಿದ್ದಾರೆ.ಪೋಸ್ಟ್​​ ನ್ನು ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿ.ಕೆ. ಶಿವಕುಮಾರ್​ ಮತ್ತು ಸಚಿವ ಪ್ರಿಯಾಂಕ್ ಖರ್ಗೆಗೆ ಟ್ಯಾಗ್ ಮಾಡಿದ್ದಾರೆ.

ಕಿರಣ್ ಮಜುಂದಾರ್ ಅವರ ಈ ಪೋಸ್ಟ್​ ವಿಚಾರದ ಬಗ್ಗೆ ಐಟಿ ಬಿಟಿ ಸಚಿವ ಪ್ರಿಯಾಂಕ್​ ಖರ್ಗೆ ಪ್ರತಿಕ್ರಿಯಿಸಿದ್ದು, ಬೆಂಗಳೂರಿಗೆ ಉದ್ಯಮಿಗಳದ್ದು ಅವರದ್ದೇ ಆದ ಕೊಡುಗೆ ಇದೆ. ಸಮಸ್ಯೆಗಳ ಬಗ್ಗೆ ಅವರು ಕರೆ ಮಾಡಿ ನಮ್ಮ ಜೊತೆ ಮಾತನಾಡಬಹುದು. ಎಲ್ಲರೂ ಅವರವರ ಪಾತ್ರ ನಿರ್ವಹಿಸಿದ್ರೆ ರಾಜ್ಯಕ್ಕೆ ಒಳ್ಳೇದು. ಕಸ ಹಾಕೋರು ಯಾರು? ಮೇಲಿಂದ ಬಂದು ಬೀಳುತ್ತಾ? ಹೀಗಾಗಿ ನಾಗರಿಕರು ತಮ್ಮ ಜವಾಬ್ದಾರಿ ಅರಿತುಕೊಂಡು ಸಹಾಕಾರ ನೀಡಬೇಕು ಎಂದಿದ್ದಾರೆ. ಅನ್ಯ ರಾಜ್ಯದವರು ಉದ್ಯಮಿಗಳಿಗೆ ಆಹ್ವಾನ ಕೊಡೋದು ಸಹಜ. ಆಂಧ್ರ ಐಟಿ ಮಿನಿಸ್ಟರ್ ಅಂತೂ ರಣಹದ್ದಿನಂತೆ ಕಾಯುತ್ತಿರುತ್ತಾರೆ. ಅಭಿವೃದ್ಧಿ ಬಗ್ಗೆ ಪ್ರತಿಪಕ್ಷ ಸಲಹೆ ಕೊಡಲ್ಲ, ಆ ನಿರೀಕ್ಷೆಯೂ ನಮಗಿಲ್ಲ ಎಂದು ಹೇಳಿದ್ದಾರೆ.

"ಅವರು ಬೆಂಗಳೂರಿನ ಯಾವ ಭಾಗವನ್ನು ನೋಡಿದ್ದಾರೆಂದು ನನಗೆ ಖಚಿತವಿಲ್ಲ. ಕೆಲಸ ಪ್ರಗತಿಯಲ್ಲಿದೆ. ನಾವು ತ್ವರಿತ ಗತಿಯಲ್ಲಿ ಬೆಳೆಯುತ್ತಿದ್ದೇವೆ ಮತ್ತು ಮೂಲಸೌಕರ್ಯ ಸುಧಾರಣೆಗೆ ಅಗತ್ಯವಿರುವ ಎಲ್ಲವನ್ನೂ ನಾವು ಮಾಡುತ್ತಿದ್ದೇವೆ" ಎಂದು ಖರ್ಗೆ ಹೇಳಿದರು.

ಎಂ.ಬಿ.ಪಾಟೀಲ್ ಪ್ರತಿಕ್ರಿಯೆ

ಇದಕ್ಕೆ ಪ್ರತಿಕ್ರಿಯಿಸಿರುವ ಬೃಹತ್ ಕೈಗಾರಿಕೆ ಸಚಿವ ಎಂ.ಬಿ.ಪಾಟೀಲ್, ಬೆಂಗಳೂರಿಗೆ ಕಿರಣ್ ಮಜುಂದಾರ್ ಅವರ ಕೊಡುಗೆ ಇದೆ. ಹಾಗೆಯೇ ಬೆಂಗಳೂರು ‌ಕೂಡ ಕಿರಣ್ ಮಜುಂದಾರ್​ಗೆ ಎಲ್ಲವೂ ಕೊಟ್ಟಿದೆ. ಮಳೆ ಆದ ಮೇಲೆ ಎಲ್ಲಾ ಕಡೆ ಹಾನಿಯಾಗಿ ಇಡೀ ರಾಜ್ಯದಲ್ಲಿ ಸಮಸ್ಯೆ ಆಗಿದೆ. ಮಳೆ ಬರುವಾಗ ರಸ್ತೆ ಗುಂಡಿ ಮುಚ್ಚುವುದಕ್ಕೆ ಆಗಲ್ಲ. ಹೀಗಿದ್ದರೂ ಗುಂಡಿಗಳನ್ನು ಮುಚ್ಚುತ್ತಿದ್ದೇವೆ. ಬೆಂಗಳೂರಿಗೆ ಬರುವವರ ಸಂಖ್ಯೆ ಹೆಚ್ಚಾಗಿದೆಯೇ ವಿನಃ ಬೆಂಗಳೂರಿನಿಂದ ಹೋಗುವವರ ಸಂಖ್ಯೆ ಕಡಿಮೆ ಇದೆ ಎಂದು ಹೇಳಿದ್ದಾರೆ.

"ಕೆಲಸ ನಡೆಯುತ್ತಿರುವಾಗ, ಅದನ್ನು ಮತ್ತೆ ಟ್ವೀಟ್ ಮಾಡುವುದು ಒಳ್ಳೆಯ ಅಭಿರುಚಿಯಲ್ಲ" ಎಂದು ಸಚಿವರು ಒತ್ತಿ ಹೇಳಿದರು.

ಶಾ ವಿರುದ್ಧ ವಾಗ್ದಾಳಿ ನಡೆಸಿದ ಪಾಟೀಲ್, "ಕಿರಣ್ ಮಜುಂದಾರ್-ಶಾ ಭಯಪಡುವ ಅಗತ್ಯವಿಲ್ಲ. ಅವರು ತಮ್ಮ ಪ್ರದೇಶದಲ್ಲಿ ಸಿಎಸ್ಆರ್ ಅಡಿಯಲ್ಲಿ ಕೆಲವು ಕೆಲಸಗಳನ್ನು ತೆಗೆದುಕೊಳ್ಳಲಿ" ಎಂದು ಪಾಟೀಲ್ ಸಲಹೆ ನೀಡಿದರು ಮತ್ತು ಗುಂಡಿಗಳ ಅವ್ಯವಸ್ಥೆಗೆ ಹಿಂದಿನ ಬಿಜೆಪಿ ಸರ್ಕಾರವನ್ನು ದೂಷಿಸಿದರು. ಕರ್ನಾಟಕದ ನಿವಾಸಿಗಳಲ್ಲಿ ಕೇವಲ ಶೇಕಡಾ 5 ರಷ್ಟು ಜನರು ಅವಕಾಶಗಳಿಗಾಗಿ ಇತರ ಭಾರತೀಯ ರಾಜ್ಯಗಳಿಗೆ ಹೋಗುತ್ತಾರೆ. ಗುಜರಾತ್, ಯುಪಿ ಮತ್ತು ಇತರ ರಾಜ್ಯಗಳ ಜನರು ತಮ್ಮ ಐಟಿ ಉದ್ಯೋಗಗಳಿಂದಾಗಿ ಬೆಂಗಳೂರಿಗೆ ವಲಸೆ ಬಂದು ಫ್ಲಾಟ್‌ಗಳು ಮತ್ತು ಕಾರುಗಳೊಂದಿಗೆ ಇಲ್ಲಿ ನೆಲೆಸುತ್ತಿರುವುದರಿಂದ ಬೆಂಗಳೂರಿನ ಮೇಲೆ ಒತ್ತಡ ಹೆಚ್ಚುತ್ತಿದೆ, ಆದರೆ ಕರ್ನಾಟಕವು ತನ್ನ ಜವಾಬ್ದಾರಿಯಿಂದ ಹಿಂದೆ ಸರಿಯುತ್ತಿಲ್ಲ ಎಂದು ಸಚಿವರು ಹೇಳಿದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಇಂದಿನಿಂದ ಚಳಿಗಾಲದ ಸಂಸತ್ ಅಧಿವೇಶನ: SIR ಕುರಿತ ಚರ್ಚೆಗೆ ವಿಪಕ್ಷಗಳಿಂದ ಪಟ್ಟು, ಸ್ಪಷ್ಟನೆ ನೀಡದ ಸರ್ಕಾರ

ಕುರ್ಚಿ ಕದನ: ಕಾಂಗ್ರೆಸ್ ಸಂಸದೀಯ ಸಭೆಯಲ್ಲಿ ನಡೆದ ಚರ್ಚೆ ಏನು?

' ನನ್ನ ರಾಜಕೀಯ ನೇರವಾದದ್ದು, ಯಾರ ಬೆನ್ನಿಗೂ ಚೂರಿ ಹಾಕಲ್ಲ, ನನ್ನ ಇತಿಮಿತಿ ತಿಳಿದಿದೆ- DKS ಸೈಲೆಂಟ್ ಗುಟ್ಟೇನು?

ಆತ್ಮ ನಿರ್ಭರತೆಯೆಡೆಗೆ ಮಹತ್ವದ ಮೈಲಿಗಲ್ಲು; ಕರ್ನಾಟಕ ಮೂಲದ ಸ್ಟಾರ್ಟ್ ಅಪ್ ನಿಂದ ಮೊದಲ ದೇಶೀಯ ರಕ್ಷಣಾ AI ತಂತ್ರಜ್ಞಾನ ಅಭಿವೃದ್ಧಿ!

ಶಿವಮೊಗ್ಗ: ಪಠ್ಯ ಪುಸ್ತಕಗಳಲ್ಲಿ 'ಭಗವದ್ಗೀತೆ' ಸೇರಿಸಲು ಕೇಂದ್ರಕ್ಕೆ ಎಚ್.ಡಿ. ಕುಮಾರಸ್ವಾಮಿ ಒತ್ತಾಯ!

SCROLL FOR NEXT