ಪ್ರಿಯಾಂಕ್ ಖರ್ಗೆ 
ರಾಜ್ಯ

RSS ಚುಟುವಟಿಕೆ ನಿರ್ಬಂಧಕ್ಕೆ ಪತ್ರ: ಫೋನ್ ರಿಂಗಣಿಸುವುದು ನಿಂತಿಲ್ಲ, ಬೆದರಿಕೆ ಕರೆ ಬರುತ್ತಿವೆ; ಪ್ರಿಯಾಂಕ್ ಖರ್ಗೆ

ಸರ್ಕಾರಿ ಶಾಲೆಗಳು, ಕಾಲೇಜುಗಳು ಮತ್ತು ಸಾರ್ವಜನಿಕ ಸಂಸ್ಥೆಗಳಲ್ಲಿ ಆರ್‌ಎಸ್‌ಎಸ್ ಚಟುವಟಿಕೆಗಳನ್ನು ಪ್ರಶ್ನಿಸಲು ಮತ್ತು ತಡೆಯಲು ನಾನು ಧೈರ್ಯ ಮಾಡಿದ್ದರಿಂದ ನನ್ನ ಮತ್ತು ನನ್ನ ಕುಟುಂಬದ ವಿರುದ್ಧ ಬೆದರಿಕೆಗಳು, ಅತ್ಯಂತ ಕೆಟ್ಟ ನಿಂದನೆಗಳಿಂದ ತುಂಬಿಹೋಗಿವೆ.

ಬೆಂಗಳೂರು: ಸರ್ಕಾರಿ ಶಾಲೆ, ಕಾಲೇಜು ಹಾಗೂ ಇನ್ನಿತರ ಸ್ಥಳಗಳಲ್ಲಿ ಆರ್‌ಎಸ್‌ಎಸ್ ಚಟುವಟಿಕೆಗಳಿಗೆ ನಿರ್ಬಂಧ ಹೇರುವ ನಿಟ್ಟಿನಲ್ಲಿ ಮುಖ್ಯಮಂತ್ರಿಗಳಿಗೆ ಪತ್ರ ಬರೆದ ಬೆನ್ನಲ್ಲೇ ನನ್ನ ಫೋನ್ ರಿಂಗಣಿಸುವುದು ನಿಲ್ಲಿಸಿಲ್ಲ. ಬೆದರಿಕೆ ಕರೆಗಳು ಬರುತ್ತಿವೆ ಎಂದು ಸಚಿವ ಪ್ರಿಯಾಂಕ್ ಖರ್ಗೆಯವರು ಮಂಗಳವಾರ ಹೇಳಿದ್ದಾರೆ.

ಈ ಕುರಿತು ಸಾಮಾಜಿಕ ಜಾಲತಾಣ ಎಕ್ಸ್ ನಲ್ಲಿ ಪೋಸ್ಟ್ ಮಾಡಿರುವ ಅವರು, ಸರ್ಕಾರಿ ಶಾಲೆಗಳು, ಕಾಲೇಜುಗಳು ಮತ್ತು ಸಾರ್ವಜನಿಕ ಸಂಸ್ಥೆಗಳಲ್ಲಿ ಆರ್‌ಎಸ್‌ಎಸ್ ಚಟುವಟಿಕೆಗಳನ್ನು ಪ್ರಶ್ನಿಸಲು ಮತ್ತು ತಡೆಯಲು ನಾನು ಧೈರ್ಯ ಮಾಡಿದ್ದರಿಂದ ನನ್ನ ಮತ್ತು ನನ್ನ ಕುಟುಂಬದ ವಿರುದ್ಧ ಬೆದರಿಕೆಗಳು, ಅತ್ಯಂತ ಕೆಟ್ಟ ನಿಂದನೆಗಳಿಂದ ತುಂಬಿಹೋಗಿವೆ. ಆದರೆ,. ನಾನು ಇದರಿಂದ ವಿಚಲಿತನಾಗುವುದಿಲ್ಲ ಅಥವಾ ಆಶ್ಚರ್ಯಪಡುವುದಿಲ್ಲ ಎಂದು ತಿರುಗೇಟು ನೀಡಿದ್ದಾರೆ.

ಮಹಾತ್ಮ ಗಾಂಧಿ ಅಥವಾ ಬಾಬಾಸಾಹೇಬ್ ಅಂಬೇಡ್ಕರ್ ಅವರನ್ನೇ ಬಿಡದ ಆರ್‌ಎಸ್‌ಎಸ್, ನನ್ನನ್ನೇಕೆ ಬಿಡುತ್ತಾರೆ? ಬೆದರಿಕೆಗಳು ಮತ್ತು ವೈಯಕ್ತಿಕ ನಿಂದನೆಗಳು ನನ್ನನ್ನು ಮೌನಗೊಳಿಸುತ್ತವೆ ಎಂದು ಅವರು ಭಾವಿಸಿದರೆ, ಅದು ಅವರ ತಪ್ಪು ಭಾವನೆ. ಇದು ಕೇವಲ ಆರಂಭವಷ್ಟೇ ಎಂದು ಹೇಳಿದ್ದಾರೆ.

ಬುದ್ಧ, ಬಸವಣ್ಣ ಮತ್ತು ಬಾಬಾಸಾಹೇಬ್ ಅವರ ತತ್ವಗಳ ಮೇಲೆ ಸ್ಥಾಪಿತವಾದ ಸಮಾಜವನ್ನು ನಿರ್ಮಿಸಲು ಇದು ಸೂಕ್ತ ಸಮಯ. ಸಮಾನತೆ, ವಿವೇಚನೆ ಮತ್ತು ಕರುಣೆಯಲ್ಲಿ ಬೇರೂರಿರುವ ಸಮಾಜ ಕಟ್ಟಬೇಕಿದೆ. ಈ ದೇಶವನ್ನು ಅತ್ಯಂತ ಅಪಾಯಕಾರಿ ವೈರಸ್‌ಗಳಿಂದ ಶುದ್ಧೀಕರಿಸಬೇಕಿದೆ ಎಂದು ತಿಳಿಸಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಟೀಕೆ ಬದಲು ಸಾಮೂಹಿಕ ಪ್ರಯತ್ನ ಅಗತ್ಯ: ಕಿರಣ್​ ಮಜುಂದಾರ್​ಗೆ ಡಿಕೆ ಶಿವಕುಮಾರ್ ತಿರುಗೇಟು

ಅಯೋಧ್ಯೆ: ಅರ್ಚಕರ ಆಶೀರ್ವಾದ ಪಡೆದ ಮುಸ್ಕಾನ್ ಮಿಶ್ರಾರನ್ನು ರಾಷ್ಟ್ರೀಯ ಕಾರ್ಯದರ್ಶಿ ಸ್ಥಾನದಿಂದ ವಜಾಗೊಳಿಸಿದ ಅಖಿಲೇಶ್!

'ತುಂಬಾ ಚೆನ್ನಾಗಿದ್ದೀರಾ, ಸಿಗರೇಟ್ ಬಿಟ್ ಬಿಡಿ' ಎಂದ ಟರ್ಕಿ ಅಧ್ಯಕ್ಷ, ಜಾರ್ಜಿಯಾ ಮೆಲೋನಿ ಉತ್ತರಕ್ಕೆ ಬೇಸ್ತು! Video

ದೆಹಲಿಯಲ್ಲಿ ಹದಗೆಟ್ಟ ವಾಯು ಗುಣಮಟ್ಟ, GRAP-1 ಅಡಿಯಲ್ಲಿ ನಿರ್ಬಂಧ ಜಾರಿಗೆ

ಹರಿಯಾಣದಲ್ಲಿ ಮತ್ತೊಬ್ಬ ಪೊಲೀಸ್ ಅಧಿಕಾರಿ ಆತ್ಮಹತ್ಯೆ; ಮೃತ ಐಪಿಎಸ್ ಅಧಿಕಾರಿ ಭ್ರಷ್ಟಾಚಾರಿ!

SCROLL FOR NEXT