ನಟ ದರ್ಶನ್  
ರಾಜ್ಯ

ನಟ ದರ್ಶನ್ ಗೆ ಮತ್ತೆ ಬೆನ್ನುನೋವು: ಚಿಕಿತ್ಸೆಗೆ ಅನುಮತಿ ನೀಡುವಂತೆ ಮನವಿ

ಕಳೆದೊಂದು ವಾರದಿಂದ ದರ್ಶನ್ ಗೆ ಬೆನ್ನುನೋವು ಹೆಚ್ಚಾಗಿದ್ದು, ಕುಂಟುತ್ತಲೇ ನಡೆಯುತ್ತಿದ್ದಾರೆ. ಹೀಗಾಗಿ, ಚಿಕಿತ್ಸೆ ಕೊಡಿಸಿ ಎಂದು ದರ್ಶನ್ ಮನವಿ ಮಾಡಿದ್ದಾರೆ.

ಬೆನ್ನು ನೋವು ಕಾರಣ ನೀಡಿ ಆಪರೇಷನ್ ಮಾಡಿಸಿಕೊಳ್ಳಲು ಷರತ್ತುಬದ್ಧ ಮಧ್ಯಂತರ ಜಾಮೀನು ಪಡೆದಿದ್ದ ನಟ ದರ್ಶನ್ ಡೆವಿಲ್ ಸಿನಿಮಾ ಶೂಟಿಂಗ್ ನ ಒತ್ತಡದಲ್ಲಿಯೇ ಕಳೆದುಹೋದರು. ಸಿನಿಮಾ ಶೂಟ್​ನಲ್ಲಿ ಬ್ಯುಸಿ ಆದ ಅವರು ಸರ್ಜರಿ ಮಾಡಿಸಿಕೊಳ್ಳಲೇ ಇಲ್ಲ. ಆರು ತಿಂಗಳು ಹೊರಗಿದ್ದ ದರ್ಶನ್ ಮತ್ತೆ ಜೈಲುಪಾಲಾಗಿ ಸದ್ಯ ಪರಪ್ಪನ ಅಗ್ರಹಾರ ಜೈಲಿನಲ್ಲಿ ಸೆರೆವಾಸ ಅನುಭವಿಸುತ್ತಿದ್ದಾರೆ.

ಇತ್ತೀಚೆಗೆ ಮಲಗಲು ಹಾಸಿಗೆ, ತಲೆದಿಂಬು ಬೇಕೆಂದು ಮನವಿ ಮಾಡಿಕೊಂಡಿದ್ದ ದರ್ಶನ್ ಅವರಿಗೆ ಮತ್ತೆ ಬೆನ್ನು ನೋವು ಕಾಣಿಸಿಕೊಂಡಿದೆಯಂತೆ. ಜೈಲಾಧಿಕಾರಿಗಳಿಗೆ ಪತ್ರ ಬರೆದು ಚಿಕಿತ್ಸೆಗೆ ಮನವಿ ಮಾಡಿದ್ದಾರೆ ಎಂದು ಮೂಲಗಳಿಂದ ತಿಳಿದುಬಂದಿದೆ.

ಕಳೆದೊಂದು ವಾರದಿಂದ ದರ್ಶನ್ ಗೆ ಬೆನ್ನುನೋವು ಹೆಚ್ಚಾಗಿದ್ದು, ಕುಂಟುತ್ತಲೇ ನಡೆಯುತ್ತಿದ್ದಾರೆ. ಹೀಗಾಗಿ, ಚಿಕಿತ್ಸೆ ಕೊಡಿಸಿ ಎಂದು ದರ್ಶನ್ ಮನವಿ ಮಾಡಿದ್ದಾರೆ.

ಅವರ ಮನವಿ ಮೇರೆಗೆ ಸಿವಿ ರಾಮನ್ ಆಸ್ಪತ್ರೆಗೆ ಆರೋಗ್ಯ ತಪಾಸಣೆಗೆ ಜೈಲಾಧಿಕಾರಿಗಳು ಪತ್ರ ಬರೆದಿದ್ದರು. ತಪಾಸಣೆ ವೇಳೆ ಫಿಜಿಯೋಥೆರಫಿ ಅವಶ್ಯಕತೆ ಇದೆ ಎಂದು ವೈದ್ಯರು ಸೂಚಿಸಿದ್ದಾರೆ. ಸದ್ಯ ವಾರಕ್ಕೆ ಎರಡು ಬಾರಿ ಮಾತ್ರ ಫಿಸಿಯೋ ಥೆರಪಿ ಮಾಡಲು ವೈದ್ಯರು ಮುಂದಾಗಿದ್ದಾರೆ.

ದರ್ಶನ್ ಅವರಿಗೆ ಕೆಲವು ವರ್ಷಗಳ ಹಿಂದೆ ಮೈಸೂರು ಬಳಿ ಕಾರು ಅಪಘಾತದಲ್ಲಿ ಕೈ ಫ್ರಾಕ್ಚರ್ ಆಗಿ ಸರ್ಜರಿ ಮಾಡಿ ಕೈಯೊಳಗೆ ರಾಡ್ ಹಾಕಿದ್ದರು. ಇದೀಗ ಅದರ ನೋವು ಕೂಡ ಕಾಣಿಸಿಕೊಂಡಿದ್ದು ಬೆರಳುಗಳು ಮರಗಟ್ಟುತ್ತಿವೆ.

ದರ್ಶನ್ ಗೆ ಇನ್ನೂ ಜೈಲಿನಲ್ಲಿ ಮಲಗಲು ಹಾಸಿಗೆ-ದಿಂಬು ಸೌಲಭ್ಯ ನೀಡಿಲ್ಲ. ಈಗ ಅವರು ನೆಲದ ಮೇಲೆ ಮಲಗುತ್ತಿರುವುದರಿಂದ ಶೀತಕ್ಕೆ ಬೆನ್ನು ನೋವು ಮತ್ತೆ ಹೆಚ್ಚಾಗಿರಬಹುದು. ಹೀಗಾಗಿ ಮೊಣಕೈ ನೋವಿಗೂ ಅವರಿಗೆ ಚಿಕಿತ್ಸೆ ನೀಡಬೇಕಾಗಿದೆ.

ಕಾರಾಗೃಹಕ್ಕೆ ಭೇಟಿ ನೀಡಿ ಪರಿಶೀಲನೆ

ನಟ ದರ್ಶನ್ ಅವರ ಮನವಿ ಹಿನ್ನೆಲೆಯಲ್ಲಿ ಬೆಂಗಳೂರು ನಗರ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ನ್ಯಾ.ಬಿ. ವರದರಾಜು ಅವರು ಪರಪ್ಪನ ಅಗ್ರಹಾರ ಕೇಂದ್ರ ಕಾರಾಗೃಹಕ್ಕೆ ಭೇಟಿ ನೀಡಿ ಪರಿಶೀಲಿಸಿದರು. ನಿನ್ನೆ ಮಧ್ಯಾಹ್ನ 12 ಗಂಟೆಗೆ ಕಾರಾಗೃಹಕ್ಕೆ ಭೇಟಿ ನೀಡಿದ್ದ ಅವರು ನಟ ದರ್ಶನ್ ಅವರ ಸೆಲ್‌ಗೆ ತೆರಳಿ ತಪಾಸಣೆ ನಡೆಸಿದ್ದಾರೆ. ಈ ವೇಳೆ ಅವರಿಗೆ ಕಾರಾಗೃಹ ನಿಯಾಮಾವಳಿ ಅನುಸಾರ ಕಲ್ಪಿಸಿರುವ ಸೌಲಭ್ಯಗಳ ಕುರಿತು ಮಾಹಿತಿ ಪಡೆದಿದ್ದಾರೆ. ಅಲ್ಲದೆ, ದರ್ಶನ್ ಅವರಿಂದ ಕೂಡ ವಿಚಾರಣೆ ನಡೆಸಿ ಹೇಳಿಕೆ ಪಡೆದಿದ್ದಾರೆ ಎಂದು ತಿಳಿದು ಬಂದಿದೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಗೋವಾ ನೈಟ್ ಕ್ಲಬ್​ನಲ್ಲಿ ಭೀಕರ ಅಗ್ನಿ ದುರಂತ: ಪ್ರವಾಸಿಗರು ಸೇರಿ 25 ಮಂದಿ ಸಜೀವ ದಹನ, ತನಿಖೆಗೆ ಆದೇಶ

ಕಾಂಗ್ರೆಸ್ ಕುರ್ಚಿ ಕದನ: ಸೋನಿಯಾ ಗಾಂಧಿ ನೇತೃತ್ವದ ಮಹತ್ವದ ಸಭೆ, ತೆಗೆದುಕೊಂಡ ನಿರ್ಧಾರವೇನು..?

ಗೋವಾ ನೈಟ್ ಕ್ಲಬ್​ ಅಗ್ನಿ ದುರಂತ: ಪ್ರಧಾನಿ ಮೋದಿ, ರಾಷ್ಟ್ರಪತಿ ತೀವ್ರ ಸಂತಾಪ, ಮೃತರ ಕುಟುಂಬಕ್ಕೆ ತಲಾ 2 ಲಕ್ಷ ರೂ. ಪರಿಹಾರ ಘೋಷಣೆ

ಎಸ್‌ಸಿ-ಎಸ್‌ಟಿ ಕೋಟಾ ಹೆಚ್ಚಳಕ್ಕೆ ಪ್ರಧಾನಿ ಸಹಾಯ ಕೋರುವಂತೆ ಮುಖ್ಯಮಂತ್ರಿ ಸಿದ್ದರಾಮಯ್ಯಗೆ ಉಗ್ರಪ್ಪ ಒತ್ತಾಯ

ಮುಂದಿನ ವರ್ಷದಿಂದ 1 ರಿಂದ 12ನೇ ತರಗತಿ ವಿದ್ಯಾರ್ಥಿಗಳಿಗೆ ಉಚಿತ ಪಠ್ಯ ಪುಸ್ತಕ: ಮಧು ಬಂಗಾರಪ್ಪ

SCROLL FOR NEXT