ಆನ್‌ಲೈನ್ ವ್ಯವಸ್ಥೆಗೆ DCM ಚಾಲನೆ 
ರಾಜ್ಯ

ಬೆಂಗಳೂರಿಗರಿಗೆ ಗುಡ್​​ನ್ಯೂಸ್: ನವೆಂಬರ್ 1 ರಿಂದ A ಖಾತಾ ಅಭಿಯಾನ; ಆನ್‌ಲೈನ್ ವ್ಯವಸ್ಥೆಗೆ DCM ಚಾಲನೆ

ಇಂದು ವಿಧಾನಸೌಧದಲ್ಲಿ ಬೆಂಗಳೂರು ನಗರಾಭಿವೃದ್ಧಿ ಸಚಿವರೂ ಆಗಿರುವ ಉಪ ಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಅವರು, ಬಿ ಖಾತಾದಿಂದ ಎ-ಖಾತಾ ಪರಿವರ್ತನೆ ಮತ್ತು ಹೊಸ ನಿವೇಶನಗಳಿಗೆ ಎ-ಖಾತಾವನ್ನು ಆನ್‌ಲೈನ್‌ನಲ್ಲೇ ಪಡೆಯುವುದಕ್ಕೆ ಚಾಲನೆ ನೀಡಿದರು.

ಬೆಂಗಳೂರು: ರಾಜ್ಯ ಸರ್ಕಾರ ರಾಜಧಾನಿ ಬೆಂಗಳೂರಿನ ಜನತಗೆ ಭರ್ಜರಿ ದೀಪಾವಳಿಯ ಗಿಫ್ಟ್ ನೀಡಿದ್ದು, ಬಿ-ಖಾತಾದಿಂದ ಎ-ಖಾತಾ ಪರಿವರ್ತನೆ ಮತ್ತು ಹೊಸ ನಿವೇಶನಗಳಿಗೆ ಎ-ಖಾತಾ ಪಡೆಯಲು ಆನ್‌ಲೈನ್ ವ್ಯವಸ್ಥೆಗೆ ಬುಧವಾರ ಚಾಲನೆ ನೀಡಿದೆ.

ಇಂದು ವಿಧಾನಸೌಧದಲ್ಲಿ ಬೆಂಗಳೂರು ನಗರಾಭಿವೃದ್ಧಿ ಸಚಿವರೂ ಆಗಿರುವ ಉಪ ಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಅವರು, ಬಿ ಖಾತಾದಿಂದ ಎ-ಖಾತಾ ಪರಿವರ್ತನೆ ಮತ್ತು ಹೊಸ ನಿವೇಶನಗಳಿಗೆ ಎ-ಖಾತಾವನ್ನು ಆನ್‌ಲೈನ್‌ನಲ್ಲೇ ಪಡೆಯುವುದಕ್ಕೆ ಚಾಲನೆ ನೀಡಿದರು.

ಬಳಿಕ ಮಾತನಾಡಿದ ಡಿಸಿಎಂ, ಗ್ರೇಟರ್‌ ಬೆಂಗಳೂರು ಪ್ರಾಧಿಕಾರದ ಅಡಿಯಲ್ಲಿ ಬೆಂಗಳೂರಿನ ನಾಗರಿಕರಿಗೆ ಅನುಕೂಲವಾಗಲು ರಾಜ್ಯ ಸರ್ಕಾರ ಈ ಮಹತ್ವದ ನಿರ್ಧಾರವನ್ನು ಕೈಗೊಂಡಿದೆ ಎಂದರು.

ನವೆಂಬರ್ 1ರಿಂದ ಬಿ ಖಾತೆಗಳನ್ನು ಎ ಖಾತೆಗಳಾಗಿ ಬದಲಾವಣೆ ಮಾಡುವ ಅಭಿಯಾನ ಕೈಗೊಳ್ಳಲಾಗುವುದು. ಇದು ಬೆಂಗಳೂರಿನ 15 ಲಕ್ಷ ಆಸ್ತಿಗಳ ಮಾಲೀಕರಿಗೆ ಉಪಯೋಗವಾಗುತ್ತದೆ. ಇದೊಂದು ಕ್ರಾಂತಿಕಾರಕ ತೀರ್ಮಾನ.‌ ಆಸ್ತಿ ಶುದ್ಧೀಕರಣಕ್ಕೆ ನಾಂದಿ ಎಂದು ಹೇಳಿದರು.

ನವೆಂಬರ್ 1 ರಿಂದ ಪ್ರಾರಂಭವಾಗುವ ಈ ಅಭಿಯಾನ 100 ದಿನಗಳ ನಡೆಯಲಿದೆ. 500 ರೂಪಾಯಿ ಅರ್ಜಿ ಶುಲ್ಕವನ್ನು ಕಟ್ಟಿ ಆನ್ ಲೈನ್ ಮೂಲಕ ನೋಂದಣಿ ಮಾಡಿಸಿಕೊಂಡರೆ ಪಾಲಿಕೆ ಅಧಿಕಾರಿಗಳೇ ಮನೆ ಬಾಗಿಲಿಗೆ ಬಂದು ಸೇವೆ ನೀಡುತ್ತಾರೆ ಎಂದು ಡಿಕೆ ಶಿವಕುಮಾರ್ ಮಾಹಿತಿ ನೀಡಿದರು.

2 ಸಾವಿರ ಚ.ಮೀ. ವಿಸ್ತೀರ್ಣದ ಆಸ್ತಿಗಳು ಈ ಕಾರ್ಯಕ್ರಮದ ವ್ಯಾಪ್ತಿಗೆ ಬರುತ್ತವೆ. 2 ಸಾವಿರ ಚದರ ಮೀಟರ್‌ಗಿಂತ ಹೆಚ್ಚು ವಿಸ್ತೀರ್ಣದ ಆಸ್ತಿಗಳಿಗೆ ಕ್ಯಾಡ್ ಡ್ರಾಯಿಂಗ್ ಸೇರಿದಂತೆ ಇತರೇ ದಾಖಲೆಗಳನ್ನು ನೀಡಬೇಕಾಗುತ್ತದೆ ಎಂದರು.

ಆಸ್ತಿ ಮಾಲೀಕರು ಸದರಿ ಆಸ್ತಿಯ ಗೈಡೆನ್ಸ್ ದರದ ಶೇ.‌5 ರಷ್ಟನ್ನು ಶುಲ್ಕವಾಗಿ ಸರ್ಕಾರಕ್ಕೆ ಪಾವತಿಸಬೇಕಾಗುತ್ತದೆ. ಇಂತಹ ಬಡಾವಣೆಗಳಿಗೆ ವಿದ್ಯುತ್, ನೀರು, ಒಳಚರಂಡಿ ಸೇರಿದಂತೆ ಇತರೇ ಮೂಲಸೌಕರ್ಯ ವ್ಯವಸ್ಥೆಗಳನ್ನು ಮಾಡಬೇಕಾಗುತ್ತದೆ. ಈ ದೃಷ್ಟಿಯಿಂದ ಗೈಡೆನ್ಸ್ ದರದ ಶೇ.5 ರಷ್ಟು ‌ಮಾತ್ರ ಶುಲ್ಕ ವಿಧಿಸಲಾಗಿದೆ.‌ 100 ದಿನದ ನಂತರ ಹೆಚ್ಚುವರಿ ಶುಲ್ಕ ನಿಗದಿ ಮಾಡಲಾಗುತ್ತದೆ.‌ ಹೆಚ್ಚುವರಿ ಶುಲ್ಕದ ಪ್ರಮಾಣ ಆನಂತರ ತಿಳಿಸಲಾಗುವುದು ಎಂದು ತಿಳಿಸಿದರು.

ಪ್ರತಿ ಪಾಲಿಕೆಯು ಎರಡೆರಡು ಸ್ಥಳಗಳಲ್ಲಿ 'ಹೆಲ್ಪ್ ಡೆಸ್ಕ್' (ಕಚೇರಿ) ಗಳನ್ನು ತೆಗೆಯಲಾಗುವುದು. ಬೆಂಗಳೂರು ಒನ್ ಕೇಂದ್ರದಲ್ಲಿಯೂ ನೋಂದಣಿಯಾಗಲು ಅವಕಾಶ ಕಲ್ಪಿಸಲಾಗುವುದು. ಸಾರ್ವಜನಿಕರು ಯಾರೂ ಸಹ ಒಂದೇ ಒಂದು ರೂಪಾಯಿ ಲಂಚ ನೀಡುವಂತಿಲ್ಲ ಎಂದರು.

2000 ಚ.ಮೀ.ಗಳವರೆಗಿನ ನಿವೇಶನಗಳಿಗೆ ttps://bbmp.karnataka.gov.in/BtoAKhata ವೆಬ್‌ಸೈಟ್‌ನಲ್ಲಿ ಹಾಗೂ 2000 ಚ.ಮೀ.ಗೂ ಹೆಚ್ಚಿನ ನಿವೇಶನಗಳಿಗೆ ttps://bpas.bbmp.gov.in ವೆಬ್‌ಸೈಟ್‌ನಲ್ಲಿ ಅರ್ಜಿ ಸಲ್ಲಿಸಬಹುದು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

2030 ಕಾಮನ್ವೆಲ್ತ್ ಕ್ರೀಡಾಕೂಟ ಅಹಮದಾಬಾದ್‌ನಲ್ಲಿ ಆಯೋಜಿಸಲು ಶಿಫಾರಸು; ನವೆಂಬರ್ 26 ರಂದು ಅಂತಿಮ ನಿರ್ಧಾರ

ಕೆಮ್ಮಿನ ಸಿರಪ್ ದುರಂತ: ಮಧ್ಯಪ್ರದೇಶದಲ್ಲಿ 3 ವರ್ಷದ ಬಾಲಕಿ ಸಾವು, ಮಕ್ಕಳ ಸಾವಿನ ಸಂಖ್ಯೆ 24ಕ್ಕೆ ಏರಿಕೆ!

ಗಡಿಯಲ್ಲಿ ಮತ್ತೆ ಉದ್ವಿಗ್ನತೆ: ಅಫ್ಘಾನಿಸ್ತಾನದೊಂದಿಗೆ 48 ಗಂಟೆಗಳ ಕದನ ವಿರಾಮಕ್ಕೆ ಪಾಕಿಸ್ತಾನ ಒಪ್ಪಿಗೆ!

"ಎಲ್ಲದಕ್ಕೂ ಒಂದು ಮಿತಿ ಇದೆ": ಕಿರಣ್ ಮಜುಂದಾರ್ ಷಾ ವಿರುದ್ಧ DCM ಡಿ.ಕೆ ಶಿವಕುಮಾರ್ ಕಿಡಿ

ಜುಬೀನ್ ಪ್ರಕರಣ: ಆರೋಪಿಗಳನ್ನು ಜೈಲಿಗೆ ಕರೆದೊಯ್ಯುತ್ತಿದ್ದ ವಾಹನಗಳಿಗೆ ಪ್ರತಿಭಟನಾಕಾರರಿಂದ ಬೆಂಕಿ; ಪೊಲೀಸರು, ಪತ್ರಕರ್ತರು ಸೇರಿದಂತೆ ಹಲವರಿಗೆ ಗಾಯ

SCROLL FOR NEXT