ಗುಂಡಿಗಳನ್ನು ಮುಚ್ಚುತ್ತಿರುವ ಚಿತ್ರ 
ರಾಜ್ಯ

ಬೆಂಗಳೂರು: ಗುಂಡಿಬಿದ್ದ, ಹದಗೆಟ್ಟ ರಸ್ತೆಗಳು; ತೆರಿಗೆ ಕಟ್ಟಲ್ಲ ಎಂದ ನಾಗರಿಕರು! ಡಿಸಿಎಂ ಡಿ.ಕೆ ಶಿವಕುಮಾರ್ ಹೇಳಿದ್ದು ಏನು?

ಬೆಂಗಳೂರು ನಗರದಲ್ಲಿ ಸುಗಮ ಸಂಚಾರಕ್ಕೆ ಆದ್ಯತೆ ನೀಡಿದ್ದು, ನಗರದ ವಿವಿಧೆಡೆ ರಸ್ತೆಗೆ ಡಾಂಬರೀಕರಣ ಹಾಗೂ ರಸ್ತೆ ಗುಂಡಿ ಮುಚ್ಚುವ ಕಾರ್ಯ ಚುರುಕಾಗಿ ಸಾಗಿದೆ.

ಬೆಂಗಳೂರು: ರಾಜಧಾನಿಯ ಗುಂಡಿಬಿದ್ದ, ಹದಗೆಟ್ಟ ರಸ್ತೆಗಳ ಬಗ್ಗೆ ತೀವ್ರ ಚರ್ಚೆಯಾಗುತ್ತಿರುವಂತೆಯೇ ನಾಗರಿಕರ ಗುಂಪೊಂದು ಆಸ್ತಿ ತೆರಿಗೆ ಕಟ್ಟುವುದಿಲ್ಲ ಎಂದು ಬೆದರಿಕೆ ಹಾಕಿದೆ.

ಈ ಕುರಿತು ಪ್ರತಿಕ್ರಿಯಿಸಿರುವ ಬೆಂಗಳೂರು ನಗರಾಭಿವೃದ್ಧಿ ಸಚಿವರು ಆಗಿರುವ ಉಪ ಮುಖ್ಯಮಂತ್ರಿ ಡಿಕೆ ಶಿವಕುಮಾರ್, ರಸ್ತೆ ಗುಂಡಿ ಮುಚ್ಚುವ ಕಾರ್ಯ ತ್ವರಿತಗತಿಯಲ್ಲಿ ನಡೆಯುತ್ತಿದೆ ಎಂದು ತಿಳಿಸಿದ್ದಾರೆ.

ಸಾಮಾಜಿಕ ಜಾಲತಾಣ ಎಕ್ಸ್ ನಲ್ಲಿ ಪೋಸ್ಟ್ ಮಾಡಿರುವ ಡಿಕೆ ಶಿವಕುಮಾರ್, ಸುಗಮ ಸಂಚಾರವೇ ಸರ್ಕಾರದ ಮೊದಲ ಆದ್ಯತೆಯಾಗಿದೆ. ಬೆಂಗಳೂರು ನಗರದಲ್ಲಿ ಸುಗಮ ಸಂಚಾರಕ್ಕೆ ಆದ್ಯತೆ ನೀಡಿದ್ದು, ನಗರದ ವಿವಿಧೆಡೆ ರಸ್ತೆಗೆ ಡಾಂಬರೀಕರಣ ಹಾಗೂ ರಸ್ತೆ ಗುಂಡಿ ಮುಚ್ಚುವ ಕಾರ್ಯ ಚುರುಕಾಗಿ ಸಾಗಿದೆ ಎಂದು ತಿಳಿಸಿದ್ದಾರೆ.

ಬಯೋಕಾನ್ ಮುಖ್ಯಸ್ಥೆ ಕಿರಣ್ ಮಜುಂದಾರ್-ಶಾ ಅವರು ನಗರದ ರಸ್ತೆಗಳು ಮತ್ತು ತ್ಯಾಜ್ಯ ಕುರಿತು ವಿದೇಶದ ಕಾರ್ಯನಿರ್ವಾಹಕರ ಟೀಕೆಗಳನ್ನು ಇತ್ತೀಚಿಗೆ ಸಾಮಾಜಿಕ ಜಾಲತಾಣ ಎಕ್ಸ್ ನಲ್ಲಿ ಹಂಚಿಕೊಂಡಿದ್ದರು. ಇದಾದ ನಂತರ ಇದೀಗ ನಾಗರಿಕರು ತೆರಿಗೆ ಕಟ್ಟಲ್ಲ ಎಂಬಂತಹ ಮಾತುಗಳನ್ನಾಡುತ್ತಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಭಯೋತ್ಪಾದಕ ದಾಳಿ ವಿಫಲಗೊಳಿಸಿದ ಭಾರತೀಯ ಪೈಲಟ್‌ಗೆ Israel ಅತ್ಯುನ್ನತ ಗೌರವ: ಸ್ವಾತಂತ್ರ್ಯ ದಿನಾಚರಣೆಗೆ ಪ್ರಧಾನಿ ಮೋದಿ, ಕ್ಯಾಪ್ಟನ್ ಸ್ಮಿತ್‌ಗೆ ಆಹ್ವಾನ..!

4 IAS ಅಧಿಕಾರಿಗಳ ವರ್ಗಾವಣೆ ಮಾಡಿ ಸರ್ಕಾರ ಆದೇಶ; ಯಾರಿಗೆಲ್ಲಾ ಬದಲಾವಣೆ

'ನನ್ನ ಲವರ್ ಜೊತೆನೇ ಹೋಗ್ತೀನಿ'; ಕೋರ್ಟ್ ನಲ್ಲಿ ಮಗಳ ಹೇಳಿಕೆಗೆ ಆಕ್ರೋಶ, ಯುವಕನ ತಂದೆಗೆ ಹಿಗ್ಗಾಮುಗ್ಗ ಜಾಡಿಸಿದ ತಾಯಿ!-Video

ಅಳಿವಿನಂಚಿನ ‘ಗೋಡಾವಣ’ಕ್ಕೆ ಮರುಜೀವ: ಜೈಸಲ್ಮೇರ್‌ನಲ್ಲಿ 2 Great Indian Bustards ಪಕ್ಷಿಗಳ ಬಿಡುಗಡೆ-Video

ಆಧಾರ ರಹಿತ ಆರೋಪ ಸರಿಯಲ್ಲ, ‘ದಾಖಲೆ ತೋರಿಸಿ, ಜಮೀನನ್ನೇ ನಿಮ್ಮ ಕುಟುಂಬಕ್ಕೆ ಕೊಡ್ತೀನಿ; HDK NICE ಆರೋಪಕ್ಕೆ ಸಚಿವ ಬಾಲಕೃಷ್ಣ ತಿರುಗೇಟು