ಕೊಪ್ಪಳ ಜಿಲ್ಲೆಯ ಮೇತಗಲ್ ಗ್ರಾಮದಲ್ಲಿ ಕೃಷಿ ಸಂಸ್ಕರಣೆಗಾಗಿ ರೈತರ ತರಬೇತಿ ಮತ್ತು ಸಾಮಾನ್ಯ ಸೌಲಭ್ಯ ಕೇಂದ್ರವನ್ನು ಉದ್ಘಾಟಿಸಿದ ನಂತರ ಶ್ರೀಮತಿ ನಿರ್ಮಲಾ ಸೀತಾರಾಮನ್ ಅವರು ಸಭಿಕರನ್ನುದ್ದೇಶಿಸಿ ಮಾತನಾಡಿದರು. 
ರಾಜ್ಯ

ಲಾಭದಾಯಕ ಕೃಷಿಗಾಗಿ PMFME, PMDDKY ಬಳಸಿಕೊಳ್ಳಿ: ರೈತರಿಗೆ ಸೀತಾರಾಮನ್ ಕರೆ

ನಿರ್ಮಲಾ ಸೀತಾರಾಮನ್ ಅವರ ಸಂಸದರ ಸ್ಥಳೀಯ ಪ್ರದೇಶ ಅಭಿವೃದ್ಧಿ(MPLAD) ನಿಧಿಯನ್ನು ಬಳಸಿಕೊಂಡು ರೈತರ ತರಬೇತಿ ಮತ್ತು ಸಾಮಾನ್ಯ ಸೌಲಭ್ಯ ಕೇಂದ್ರ ಸ್ಥಾಪಿಸಲಾಗಿದೆ.

ಕೊಪ್ಪಳ: ಕೃಷಿಯನ್ನು ಲಾಭದಾಯಕ ಉದ್ಯಮವನ್ನಾಗಿ ಪರಿವರ್ತಿಸಲು ಪ್ರಧಾನ ಮಂತ್ರಿ ಸೂಕ್ಷ್ಮ ಆಹಾರ ಸಂಸ್ಕರಣಾ ಉದ್ಯಮಗಳ ಔಪಚಾರಿಕೀಕರಣ(PMFME) ಮತ್ತು ಪ್ರಧಾನ ಮಂತ್ರಿ ಧನ್ ಧಾನ್ಯ ಕೃಷಿ ಯೋಜನೆ(PMDDKY) ಗಳನ್ನು ರೈತರು ಸಂಪೂರ್ಣವಾಗಿ ಬಳಸಿಕೊಳ್ಳಬೇಕೆಂದು ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರು ಬುಧವಾರ ರೈತರಿಗೆ ಕರೆ ನೀಡಿದ್ದಾರೆ.

ಇಂದು ಕೊಪ್ಪಳ ಜಿಲ್ಲೆಯಲ್ಲಿ ರೈತರ ತರಬೇತಿ ಮತ್ತು ಸಾಮಾನ್ಯ ಸೌಲಭ್ಯ ಕೇಂದ್ರವನ್ನು ಉದ್ಘಾಟಿಸಿ ಮಾತನಾಡಿದ ಕೇಂದ್ರ ಸಚಿವೆ, ಹೊಸ ಪೀಳಿಗೆಯ GST ಸುಧಾರಣೆ ರೈತರಿಗೂ ಹೆಚ್ಚು ಲಾಭದಾಯಕವಾಗಿದೆ ಎಂದು ಹೇಳಿದರು.

ನಿರ್ಮಲಾ ಸೀತಾರಾಮನ್ ಅವರ ಸಂಸದರ ಸ್ಥಳೀಯ ಪ್ರದೇಶ ಅಭಿವೃದ್ಧಿ(MPLAD) ನಿಧಿಯನ್ನು ಬಳಸಿಕೊಂಡು ರೈತರ ತರಬೇತಿ ಮತ್ತು ಸಾಮಾನ್ಯ ಸೌಲಭ್ಯ ಕೇಂದ್ರ ಸ್ಥಾಪಿಸಲಾಗಿದೆ.

ಕೇಂದ್ರ ಸರ್ಕಾರ, ಹಣಕಾಸು ಮತ್ತು ತಾಂತ್ರಿಕ ಸಹಾಯವನ್ನು ಒದಗಿಸುತ್ತದೆ ಮತ್ತು ಯೋಜನೆಯ ಅಡಿಯಲ್ಲಿ ವ್ಯವಹಾರಗಳನ್ನು ನವೀಕರಿಸಲು ಸಹಾಯ ಮಾಡುತ್ತದೆ ಎಂದು ಅವರು ಹೇಳಿದರು.

ಗ್ರಾಮಗಳಲ್ಲಿ ಉದ್ಯೋಗಗಳನ್ನು ಸೃಷ್ಟಿಸಲು ಗ್ರಾಮೀಣ ಉದ್ಯಮಶೀಲತೆಯನ್ನು ಉತ್ತೇಜಿಸುವ ಗುರಿಯನ್ನು ಸರ್ಕಾರ ಹೊಂದಿದೆ ಎಂದು ಸೀತಾರಾಮನ್ ತಿಳಿಸಿದರು.

"ಪಿಎಂಡಿಡಿಕೆವೈ ಯೋಜನೆಗೆ 2025-26 ರಲ್ಲಿ 24,000 ಕೋಟಿ ರೂ.ಗಳನ್ನು ಬಜೆಟ್‌ನಲ್ಲಿ ಹಂಚಿಕೆ ಮಾಡಲಾಗಿದೆ. ಈ ಯೋಜನೆಯು ಕೃಷಿ ಉತ್ಪಾದಕತೆಯನ್ನು ಹೆಚ್ಚಿಸುವುದು, ಬೆಳೆ ವೈವಿಧ್ಯೀಕರಣವನ್ನು ಉತ್ತೇಜಿಸುವುದು ಮತ್ತು 100 ಕಡಿಮೆ ಕಾರ್ಯಕ್ಷಮತೆಯ ಕೃಷಿ ಜಿಲ್ಲೆಗಳಲ್ಲಿ ಜೀವನೋಪಾಯವನ್ನು ಸುಧಾರಿಸುವ ಗುರಿ ಹೊಂದಿದೆ ಎಂದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಕರ್ನಾಟಕ ಸಿವಿಲ್ ಸೇವಾ ಹುದ್ದೆಗಳಿಗೆ ನೇಮಕಾತಿ ವಯೋಮಿತಿ 5 ವರ್ಷ ಹೆಚ್ಚಳಕ್ಕೆ ಸಚಿವ ಸಂಪುಟ ಅಸ್ತು

ಐಷಾರಾಮಿ ರಿಯಲ್ ಎಸ್ಟೇಟ್ ಮೂಲಕ ಅಮೆರಿಕದಿಂದ 'ಹೊಸ ಗಾಜಾ' ಕಟ್ಟುವ ಭರವಸೆ!

ಖ್ಯಾತ ಗಾಯಕಿ ಎಸ್ ಜಾನಕಿಗೆ ಪುತ್ರ ಶೋಕ: ಹಠಾತ್ ಹೃದಯಾಘಾತದಿಂದ ಮುರಳಿ ಕೃಷ್ಣ ಸಾವು!

1997ರ ಮಂಗಳೂರು ಡಬಲ್ ಮರ್ಡರ್ ಪ್ರಕರಣ: 29 ವರ್ಷಗಳ ಬಳಿಕ ಕುಖ್ಯಾತ 'ದಂಡುಪಾಳ್ಯ ಗ್ಯಾಂಗ್' ಸದಸ್ಯನ ಬಂಧನ!

ಟ್ರಂಪ್ ರ 'ಶಾಂತಿ ಮಂಡಳಿ' ಸೇರಲು ಭಾರತ ನಕಾರ; ಪಾಕಿಸ್ತಾನ ಸಹಿ!

SCROLL FOR NEXT