ಸಿದ್ದರಾಮಯ್ಯ ಮನೆಗೆ ಜಾತಿ ಗಣತಿ ಸಿಬ್ಬಂದಿ 
ರಾಜ್ಯ

ಸಿದ್ದರಾಮಯ್ಯ ಮನೆಗೆ ಜಾತಿ ಗಣತಿ ಸಿಬ್ಬಂದಿ; ಸಮೀಕ್ಷೆ ಬಗ್ಗೆ CM ಹೇಳಿದ್ದೇನು?

ಇದು ಯಾವುದೇ ಒಂದು ಜಾತಿಗೆ ಸೀಮಿತವಾದ ಸಮೀಕ್ಷೆಯಲ್ಲ. ರಾಜ್ಯದ ಪ್ರತಿಯೊಬ್ಬರ ಜೀವನದ ಮೇಲೆ ಬೆಳಕು ಚೆಲ್ಲುವ ಒಂದು ವೈಜ್ಞಾನಿಕ ಪ್ರಯತ್ನ. ನಿಮ್ಮ ವೈಯಕ್ತಿಕ ಮಾಹಿತಿ ದುರ್ಬಳಕೆ ಖಂಡಿತಾ ಆಗದು. ಚಿಂತೆ ಬಿಟ್ಟು, ಧೈರ್ಯವಾಗಿ ಸಿಬ್ಬಂದಿಗಳ ಜೊತೆ ಮಾಹಿತಿ ಹಂಚಿಕೊಳ್ಳಿ.

ಬೆಂಗಳೂರು: ನಮ್ಮ ಸರ್ಕಾರವು ಹಿಂದುಳಿದ ವರ್ಗಗಳ ಆಯೋಗದ ಮೂಲಕ ನಡೆಸುತ್ತಿರುವ ಸಾಮಾಜಿಕ ಹಾಗೂ ಶೈಕ್ಷಣಿಕ ಸಮೀಕ್ಷೆಗಾಗಿ ನನ್ನ ಮನೆಗೆ ಭೇಟಿ ನೀಡಿದ ಸಿಬ್ಬಂದಿಗಳಿಗೆ ಮಾಹಿತಿ ನೀಡಿ, ನನ್ನ ಕರ್ತವ್ಯವನ್ನು ಯಶಸ್ವಿಯಾಗಿ ಪೂರೈಸಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಗುರುವಾರ ಹೇಳಿದ್ದಾರೆ.

ಅಸಮಾನತೆ, ಬಡತನವನ್ನು ನಿವಾರಣೆ ಮಾಡಿ ಸಮಸಮಾಜ ನಿರ್ಮಾಣ ಮಾಡುವ ಉದ್ದೇಶದೊಂದಿಗೆ ನಮ್ಮ ಸರ್ಕಾರವು ಈ ಸಮೀಕ್ಷೆಯನ್ನು ಕೈಗೊಂಡಿದೆ ಎಂದು ಸಿದ್ದರಾಮಯ್ಯ ಅವರು ಗಣತಿ ಸಿಬ್ಬಂದಿ ತಮ್ಮ ಮನೆಗೆ ಭೇಟಿ ನೀಡಿದ ನಂತರ ಎಕ್ಸ್ ನಲ್ಲಿ ಪೋಸ್ಟ್ ಮಾಡಿದ್ದಾರೆ.

ಪ್ರತಿಯೊಬ್ಬರೂ ಈ ಸಮೀಕ್ಷೆಯಲ್ಲಿ ತಪ್ಪದೇ ಪಾಲ್ಗೊಂಡು, ತಮ್ಮ ಮಾಹಿತಿಯನ್ನು ಪ್ರಾಮಾಣಿಕವಾಗಿ ನೀಡಬೇಕು. ಆಗ ಮಾತ್ರ ಸಮಾಜದ ವಾಸ್ತವ ಸ್ಥಿತಿಗತಿಯ ಬಗೆಗೆ ನಿಖರ ಮಾಹಿತಿ ದೊರೆತು, ಆರ್ಥಿಕವಾಗಿ, ಸಾಮಾಜಿಕವಾಗಿ ಹಾಗೂ ಶೈಕ್ಷಣಿಕವಾಗಿ ಹಿಂದುಳಿದ ಜನರನ್ನು ಗುರುತಿಸಿ, ಅವರ ಪ್ರಗತಿಗೆ ಕಲ್ಯಾಣ ಕಾರ್ಯಕ್ರಮಗಳನ್ನು ರೂಪಿಸಲು ಸಾಧ್ಯ ಎಂದು ಸಿಎಂ ಹೇಳಿದ್ದಾರೆ.

ಇದು ಯಾವುದೇ ಒಂದು ಜಾತಿಗೆ ಸೀಮಿತವಾದ ಸಮೀಕ್ಷೆಯಲ್ಲ. ರಾಜ್ಯದ ಪ್ರತಿಯೊಬ್ಬರ ಜೀವನದ ಮೇಲೆ ಬೆಳಕು ಚೆಲ್ಲುವ ಒಂದು ವೈಜ್ಞಾನಿಕ ಪ್ರಯತ್ನ. ಸಮೀಕ್ಷೆಯಲ್ಲಿ ಮಾಹಿತಿ ನೀಡುವುದರಿಂದ ನಿಮ್ಮ ವೈಯಕ್ತಿಕ ಮಾಹಿತಿ ದುರ್ಬಳಕೆ ಖಂಡಿತಾ ಆಗದು. ಚಿಂತೆ ಬಿಟ್ಟು, ಧೈರ್ಯವಾಗಿ ಸಿಬ್ಬಂದಿಗಳ ಜೊತೆ ಮಾಹಿತಿ ಹಂಚಿಕೊಳ್ಳಿ ಎಂದು ಸಿಎಂ ಸಿದ್ದರಾಮಯ್ಯ ಅವರು ಕರೆ ನೀಡಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಅನ್ನಭಾಗ್ಯ ಯೋಜನೆ; ಹೆಚ್ಚುವರಿ 5 ಕೆ.ಜಿ ಅಕ್ಕಿ ಬದಲು ಇಂದಿರಾ ಕಿಟ್ ನೀಡಲು ಸರ್ಕಾರ ಮುಂದು..!

Shakthi Scheme Record-'ಶಕ್ತಿ ಯೋಜನೆ'ಗೆ ಸಿಕ್ಕಿತು ವಿಶ್ವ ಮನ್ನಣೆ: ಲಂಡನ್ ಬುಕ್ ಆಫ್ ರೆಕಾರ್ಡ್ಸ್ ನಲ್ಲಿ ದಾಖಲೆ

ಬಿಜೆಪಿ ನಾಯಕರು ಯಾರೂ ನನ್ನನ್ನು ಜೈಲಿಗೆ ಹೋಗು ಎಂದು ಹೇಳಿಲ್ಲ: ಪ್ರಶ್ನಿಸಿದರೆ ಸದನದಲ್ಲಿ ಅಧಿಕಾರಿಯ ಹೆಸರು ಹೇಳುವೆ; ಡಿಕೆಶಿ ಸ್ಪಷ್ಟನೆ

ಹೆಬ್ಬಾಳ ಕ್ಷೇತ್ರದಲ್ಲೂ ಮತ ಕಳವು: ಸಚಿವ ಭೈರತಿ ಸುರೇಶ್ ಆರೋಪ

ನೆಹರೂ ಕಾಲದಿಂದ ಬಡವರಿಗೆ ಉಚಿತ ಆಹಾರ ವಿತರಣೆ: ಟೀಕೆ ಮಾಡಿದವರಿಂದಲೇ ನಮ್ಮ 'ಗ್ಯಾರಂಟಿ' ನಕಲು; ಡಿ.ಕೆ ಶಿವಕುಮಾರ್

SCROLL FOR NEXT