ಮಹೇಶ್ ವಾಳ್ವೇಕರ್ 
ರಾಜ್ಯ

ಮಹೇಶ್ ವಾಳ್ವೇಕರ್ ಸೇರಿ ಮೂವರು ರಾಜ್ಯ ಮಾಹಿತಿ ಆಯುಕ್ತರಾಗಿ ಪ್ರಮಾಣ ವಚನ ಸ್ವೀಕಾರ

ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಅವರು ನೂತನವಾಗಿ ನೇಮಕವಾಗಿರುವ ರಾಜ್ಯ ಮಾಹಿತಿ ಆಯುಕ್ತರುಗಳಿಗೆ ಅಧಿಕಾರ ಪ್ರಮಾಣ ವಚನ ಬೋಧಿಸಿದರು.

ಬೆಂಗಳೂರು: ರಾಜ್ಯ ಮಾಹಿತಿ ಆಯುಕ್ತರಾಗಿ ನೇಮಕಗೊಂಡಿರುವ ಡಾ.ರಿಚರ್ಡ್ ವಿನ್ಸೆಂಟ್‌ ಡಿಸೋಜ, ಬಿ.ವೆಂಕಟ್ ಸಿಂಗ್ ಹಾಗೂ ಡಾ.ಮಹೇಶ್ ವಾಳ್ವೇಕರ್ ಅವರು ಗುರುವಾರ ಅಧಿಕಾರ ಪ್ರಮಾಣ ವಚನ ಸ್ವೀಕರಿಸಿದರು.

ಇಂದು ರಾಜಭವನದ ಬ್ಯಾಂಕ್ವೆಟ್ ‌ಸಭಾಂಗಣದಲ್ಲಿ ನಡೆದ ಸರಳ ಸಮಾರಂಭದಲ್ಲಿ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಅವರು ನೂತನವಾಗಿ ನೇಮಕವಾಗಿರುವ ರಾಜ್ಯ ಮಾಹಿತಿ ಆಯುಕ್ತರುಗಳಿಗೆ ಅಧಿಕಾರ ಪ್ರಮಾಣ ವಚನ ಬೋಧಿಸಿದರು.

ಬೆಂಗಳೂರು ಪೀಠಕ್ಕೆ ನೂತನವಾಗಿ ನೇಮಕವಾಗಿರುವ ರಾಜ್ಯ ಮಾಹಿತಿ ಅಯುಕ್ತರುಗಳಾದ ಡಾ.ರಿಚರ್ಡ್ ವಿನ್ಸೆಂಟ್‌ ಡಿಸೋಜ ಹಾಗೂ ಡಾ. ಮಹೇಶ್ ವಾಳ್ವೇಕರ್ ಅವರು ದೇವರ ಹೆಸರಿನಲ್ಲಿ ಅಧಿಕಾರ ಪ್ರಮಾಣ ವಚನ ಸ್ವೀಕರಿಸಿದರು.

ಇನ್ನೂ ಕಲಬುರಗಿ ಪೀಠಕ್ಕೆ ನೇಮಕವಾಗಿರುವ ಬಿ. ವೆಂಕಟ್ ಸಿಂಗ್ ಅವರು ದೇವರು ಮತ್ತು ಸಂವಿಧಾನದ ಹೆಸರಿನಲ್ಲಿ ಅಧಿಕಾರ ಪ್ರಮಾಣ ವಚನ ಸ್ವೀಕರಿಸಿದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

TMCಗೆ ಸೆಡ್ಡು ಹೊಡೆದ ಬಂಡಾಯ ಸಂಸದರಿಗೆ ಶಾಕ್‌: 20 ಮಂದಿಗೆ ಲೋಕಸಭಾ ಸಚಿವಾಲಯ ನೋಟಿಸ್‌, 7 ದಿನಗಳೊಳಗೆ ಉತ್ತರಿಸುವಂತೆ ಸೂಚನೆ..!

ಬಿಜೆಪಿ ಸಂಸದೀಯ ಮಂಡಳಿಯಲ್ಲಿ ಮಹತ್ತರ ಬದಲಾವಣೆ ಸಾಧ್ಯತೆ; ನಾಲ್ವರು ಮುಖ್ಯಮಂತ್ರಿಗಳಿಗೆ ಸ್ಥಾನ?

ಇರಾನ್‌ ತೈಲ ವಹಿವಾಟಿಗೆ ಅಮೆರಿಕಾ ಬ್ರೇಕ್: ಭಾರತದ 4 ಕಂಪನಿಗಳು ಕಪ್ಪುಪಟ್ಟಿಗೆ, 3 ಪ್ರಜೆಗಳ ಮೇಲೂ ನಿರ್ಬಂಧ..!

"ಮದುವೆ ಅಂದ್ರೆ ಗುಲಾಮಗಿರಿಯಲ್ಲ, ಮನೆಗೆಲಸ ಮಾಡು-ಅತ್ತೆ-ಮಾವನ ನೋಡ್ಕೋ ಅನ್ನೋಕೆ ಗಂಡನಿಗೆ ಹಕ್ಕಿಲ್ಲ": ಹೈಕೋರ್ಟ್ ಮಹತ್ವದ ತೀರ್ಪು..!

ಬಿಡದಿ ಟೌನ್‌ಶಿಪ್‌ ಯೋಜನೆ: ರೈತರ ಭೂಮಿ ಕಸಿಯಲ್ಲ, denotification ಮಾಡಲ್ಲ- ಸಿಎಂ ಡಿಕೆ. ಶಿವಕುಮಾರ್ ಸ್ಪಷ್ಟನೆ