ಅಪಘಾತ  
ರಾಜ್ಯ

ಹಾವೇರಿಯಲ್ಲಿ ಟ್ರ್ಯಾಕ್ಟರ್ ಟ್ರೈಲರ್-ಟಾಟಾ ಏಸ್ ವಾಹನ ಡಿಕ್ಕಿ: ಮೂವರು ಸ್ಥಳದಲ್ಲೇ ಸಾವು, 20 ಮಂದಿಗೆ ಗಾಯ

ಮೃತಪಟ್ಟವರನ್ನು ಚಮನಸಾಬ್ ಕೆರಿಮತ್ತಿಹಳ್ಳಿ (65 ವರ್ಷ), ಮಾಬುಸಾಬ್ ದೊಡ್ಡಗುಬ್ಬಿ (65 ವರ್ಷ), ನಿಂಗಮ್ಮ ಜಿಗಳೇರ್ (70ವ) ಎಂದು ಗುರುತಿಸಲಾಗಿದೆ.

ಹಾವೇರಿ: ರಸ್ತೆಬದಿ ನಿಂತಿದ್ದ ಟ್ರ್ಯಾಕ್ಟರ್ ಟ್ರೈಲರ್ ಗೆ ಟಾಟಾ ಏಸ್ ವಾಹನ ಡಿಕ್ಕಿ ಹೊಡೆದು ಮೂವರು ಸ್ಥಳದಲ್ಲಿಯೇ ಮೃತಪಟ್ಟು, 20 ಮಂದಿ ‌ಸಣ್ಣಪುಟ್ಟ ಗಾಯಗೊಂಡು ಆಸ್ಪತ್ರೆಗೆ ದಾಖಲಾಗಿರುವ ಘಟನೆ ಹಾವೇರಿ (Haveri) ಜಿಲ್ಲೆ ರಾಣೇಬೆನ್ನೂರು ತಾಲೂಕಿನ ಕಾಕೋಳ ಗ್ರಾಮದ ಬಳಿ‌ ರಾಷ್ಟ್ರೀಯ ಹೆದ್ದಾರಿ 48ರಲ್ಲಿ ನಡೆದಿದೆ.

ಮೃತಪಟ್ಟವರನ್ನು ಚಮನಸಾಬ್ ಕೆರಿಮತ್ತಿಹಳ್ಳಿ (65 ವರ್ಷ), ಮಾಬುಸಾಬ್ ದೊಡ್ಡಗುಬ್ಬಿ (65 ವರ್ಷ), ನಿಂಗಮ್ಮ ಜಿಗಳೇರ್ (70ವ) ಎಂದು ಗುರುತಿಸಲಾಗಿದೆ. ಮೃತರು ದಾವಣಗೆರೆ ಜಿಲ್ಲೆ ಮಲೇಬೆನ್ನೂರಿನ ನಿವಾಸಿಗಳಾಗಿದ್ದಾರೆ.

ಸದ್ಯ ಸ್ಥಳಕ್ಕೆ ರಾಣೇಬೆನ್ನೂರು ಗ್ರಾಮೀಣ ಪೊಲೀಸರು ಭೇಟಿ ಪರಿಶೀಲನೆ ನಡೆಸಿದ್ದು, ಅಂಬ್ಯುಲೆನ್ಸ್ ಮೂಲಕ ಗಾಯಾಳನ್ನು ರಾಣೇಬೆನ್ನೂರು ತಾಲೂಕು ಆಸ್ಪತ್ರೆಗೆ ಸಾಗಿಸಲಾಗಿದೆ. ಕಾರ್ಯಕ್ರಮ ಮುಗಿಸಿಕೊಂಡು ವಾಪಸ್ ಊರಿಗೆ ಹೋಗುತ್ತಿದ್ದ ವೇಳೆ ರಸ್ತೆ ಬದಿ ನಿಂತಿದ್ದ ಟ್ರಾಕ್ಟರ್ ಟ್ರೈಲರ್​​ ಗೆ ಟಾಟಾ ಏಸ್ ಡಿಕ್ಕಿ ಹೊಡೆದಿದೆ. ಟ್ರಾಕ್ಟರ್ ಟ್ರೈಲರ್​ ಹಿಂಬದಿ ಯಾವುದೇ ಲೈಟ್ ಇರುವುದಿಲ್ಲ. ಹೀಗಾಗಿ ಕತ್ತಲಲ್ಲಿ ಕಾಣಿಸಲಿಲ್ಲ. ಪರಿಣಾಮ ವೇಗವಾಗಿ ಬಂದ ಟಾಟಾ ಏಸ್ ರಸ್ತೆ ಬದಿ ನಿಲ್ಲಿಸಲಾಗಿದ್ದ ಟ್ರೈಲರ್ ಗೆ ಗುದ್ದಿದೆ ಎಂದು ತಿಳಿದುಬಂದಿದೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಟಾರ್ಗೆಟ್ RSS ಅಲ್ಲವೇ ಅಲ್ಲ, ಬಿಜೆಪಿಯವರಿಗೆ ರಾಜಕಾರಣ ಮಾಡುವುದು ಬಿಟ್ಟರೆ ಬೇರೇನೂ ಗೊತ್ತಿಲ್ಲ: ಸಿದ್ದರಾಮಯ್ಯ

'ಅವರು ಹಿಂದೆ ಸರಿಯುತ್ತಿದ್ದಾರೆ': ಭಾರತ ಇನ್ನು ಮುಂದೆ ರಷ್ಯಾದಿಂದ ತೈಲ ಖರೀದಿಸುವುದಿಲ್ಲ ಮತ್ತೆ ಹೇಳಿಕೆ ಕೊಟ್ಟ Donald Trump

ಪಾಕ್ 'ಬ್ರಹ್ಮೋಸ್'ನಿಂದ ತಪ್ಪಿಸಿಕೊಳ್ಳಲು ಸಾಧ್ಯವಿಲ್ಲ; ಆಪರೇಷನ್ ಸಿಂಧೂರ ಬರೀ ಟ್ರೇಲರ್

'IT-BT ಕಂಪನಿಗಳೊಂದಿಗೆ ಸಭೆ ನಡೆಸಿ ಸಮಸ್ಯೆ ಆಲಿಸುತ್ತೇವೆ: ರಸ್ತೆ ಅಭಿವೃದ್ಧಿ ಮಾಡುವುದಾದರೆ ಕಿರಣ್ ಮುಜುಂದಾರ್ ಗೆ ಅಗತ್ಯ ಸಹಕಾರ'

ಅಮೃತಸರ: ಗರೀಬ್ ರಥ ಎಕ್ಸ್‌ಪ್ರೆಸ್ ರೈಲಿನಲ್ಲಿ ಬೆಂಕಿ; ಹೊತ್ತಿ ಉರಿದ ಬೋಗಿಗಳು

SCROLL FOR NEXT