ಯಾಮಿನಿ ಪ್ರಿಯ 
ರಾಜ್ಯ

ಬೆಂಗಳೂರು: ಪ್ರೀತಿಸಲು ನಿರಾಕರಣೆ; ಪರೀಕ್ಷೆ ಬರೆದು ಮನೆಗೆ ವಾಪಾಸಾಗುತ್ತಿದ್ದ ವಿದ್ಯಾರ್ಥಿನಿ ಕತ್ತು ಕೊಯ್ದು ಕೊಲೆ

ಗೋಪಾಲ್ ಅವರ ಪುತ್ರಿ ಪ್ರಿಯಾ ಅವರು ಬನಶಂಕರಿ ಮೂರನೇ ಹಂತದ ಖಾಸಗಿ ಕಾಲೇಜಿನಲ್ಲಿ ಬಿ.ಫಾರ್ಮಾ ಓದುತ್ತಿದ್ದರು. ಮನೆಯ ಪಕ್ಕದ ನಿವಾಸಿ ವಿಘ್ನೇಶ್ ಪರಿಚಯವಾಗಿದ್ದ. ಪ್ರೀತಿಸುವಂತೆ ಬಲವಂತ ಮಾಡುತ್ತಿದ್ದ.

ಬೆಂಗಳೂರು: ಪ್ರೀತಿಸಲು ನಿರಾಕರಿಸಿದ ಕಾರಣಕ್ಕೆ ವಿದ್ಯಾರ್ಥಿನಿಯ ಮುಖಕ್ಕೆ ಖಾರದ ಪುಡಿ ಎರಚಿ ಚಾಕುವಿನಿಂದ ಕತ್ತು ಕೊಯ್ದು ಕೊಲೆ ಮಾಡಿರುವ ಘಟನೆ ಶ್ರೀರಾಂಪುರ ಪೊಲೀಸ್ ಠಾಣಾ ವ್ಯಾಪ್ತಿಯ ರೈಲ್ವೆ ಹಳಿಯ ಬಳಿ ಗುರುವಾರ ಸಂಜೆ ನಡೆದಿದೆ.

ಶ್ರೀರಾಂಪುರ ಸಮೀಪದ ಸ್ವತಂತ್ರಪಾಳ್ಯ ನಿವಾಸಿ ಯಾಮಿನಿ ಪ್ರಿಯಾ (20) ಕೊಲೆಯಾದ ವಿದ್ಯಾರ್ಥಿನಿ. ಯಾಮಿನಿ‌ ಪ್ರಿಯಾ ಲವ್ ಮಾಡಲು ಒಪ್ಪದಿರುವುದಕ್ಕೆ ಕೊಲೆ ಮಾಡಿರುವ ಸಾಧ್ಯತೆಗಳಿದ್ದು, ವಿಘ್ನೇಶ್ ಕೊಲೆ ಮಾಡಿರುವ ಶಂಕೆ ವ್ಯಕ್ತವಾಗಿದೆ. ಈ ಸಂಬಂಧ ಪೊಲೀಸರು ತನಿಖೆ ನಡೆಸಿದ್ದಾರೆ.

ಗೋಪಾಲ್ ಅವರ ಪುತ್ರಿ ಪ್ರಿಯಾ ಅವರು ಬನಶಂಕರಿ ಮೂರನೇ ಹಂತದ ಖಾಸಗಿ ಕಾಲೇಜಿನಲ್ಲಿ ಬಿ.ಫಾರ್ಮಾ ಓದುತ್ತಿದ್ದರು. ಮನೆಯ ಪಕ್ಕದ ನಿವಾಸಿ ವಿಘ್ನೇಶ್ ಪರಿಚಯವಾಗಿದ್ದ. ಪ್ರೀತಿಸುವಂತೆ ಆರೋಪಿ ವಿಘ್ನೇಶ್ ಬಲವಂತ ಮಾಡುತ್ತಿದ್ದ. ಆದರೆ, ಪ್ರಿಯಾ ಅವರು ನಿರಾಕರಿಸಿದ್ದರು ಎಂದು ಮೂಲಗಳು ಹೇಳಿವೆ.

ಬಿ ಫಾರ್ಮ್ ವ್ಯಾಸಂಗ ಮಾಡುತ್ತಿದ್ದ ಪ್ರಿಯಾ, ಎಕ್ಸಾಮ್ ಇದೆ ಎಂದು ಇಂದು (ಅಕ್ಟೋಬರ್ 16) ಬೆಳಗ್ಗೆ ಏಳು ಗಂಟೆಗೆ ಮನೆಯಿಂದ ಕಾಲೇಜಿಗೆ ಹೋಗಿದ್ದು, ಮಧ್ಯಾಹ್ನ ಕಾಲೇಜ್ ಮುಗಿಸಿ ಮನೆಗೆ ವಾಪಸ್ಸಾಗುತ್ತಿದ್ದ ವೇಳೆ ಹಿಂದಿನಿಂದ ಬೈಕ್ ನಲ್ಲಿ ಬಂದ ದುಷ್ಕರ್ಮಿ, ಪ್ರಿಯಾಳ ಕತ್ತು ಕೊಯ್ದು ಪರಾರಿಯಾಗಿದ್ದಾನೆ.

ಸ್ಥಳಕ್ಕೆ ಶ್ರೀರಾಮ ಪುರ ಪೊಲೀಸರು ದೌಡಾಯಿಸಿ ಪರಿಶೀಲನೆ ನಡೆಸಿದ್ದು, ಲವ್ ವಿಚಾರಕ್ಕೆ ಈ ಕೊಲೆ ಮಾಡಿರುವ ಸಾಧ್ಯತೆಗಳಿವೆ ಎಂದು ಶಂಕೆ ವ್ಯಕ್ತಪಡಿಸಿದ್ದಾರೆ. ವಿಘ್ನೇಶ್ ಎಂಬಾತನ ಮೇಲೆ ಪೊಲೀಸರಿಗೆ ಅನುಮಾನ ಬಂದಿದ್ದು ತನಿಖೆ ನಡೆಸಿದ್ದಾರೆ.

ಯಾಮಿನಿ ಪ್ರಿಯಾ ಹಿಂದೆ ಬಿದ್ದು ಪ್ರೀತಿ ಮಾಡುವಂತೆ ಒತ್ತಾಯಿಸುತ್ತಿದ್ದ. ಒಮ್ಮೆ ಪ್ರಿಯಾಗೆ ಬಲವಂತವಾಗಿ ತಾಳಿ ಕೂಡ ಕಟ್ಟಿದ್ದ. ಪ್ರಿಯಾ ಅವರು ಆರೋಪಿಯ ವಿರುದ್ಧ ಪೊಲೀಸರಿಗೆ ದೂರು ನೀಡಿದ್ದರು. ಪ್ರಕರಣ ದಾಖಲಾಗಿತ್ತು ಎಂದು ಪೊಲೀಸರು ಹೇಳಿದರು.

ವಿಘ್ನೇಶ್ ಕಳೆದ ಹಲವು ತಿಂಗಳಿನಿಂದ ನನ್ನ ಮಗಳಿಗೆ ಹಿಂಸೆ ಕೊಡುತ್ತಿದ್ದ. ಹಿಂಬಾಲಿಸಿಕೊಂಡು ಬಂದು ಪ್ರೀತಿ ಮಾಡುವಂತೆ ಒತ್ತಾಯಿಸುತ್ತಿದ್ದ. ಈ ಸಂಬಂಧ ನಾವು ಪೊಲೀಸ್ ಠಾಣೆಗೆ ಹೋಗಿ ದೂರು ಕೊಟ್ಟಿದ್ದೆವು. 6 ತಿಂಗಳ ಹಿಂದೆ ಪೊಲೀಸರು ಆತನನ್ನು ಠಾಣೆಗೆ ಕರೆಸಿ ಮುಚ್ಚಳಿಕೆ ಬರೆಸಿಕೊಂಡಿದ್ದರು ಎಂದು ಪ್ರಿಯಾ ತಂದೆ ಗೋಪಾಲ್‌ ತಿಳಿಸಿದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಭಾರತ-ರಷ್ಯಾ ಆರ್ಥಿಕ ಬಾಂಧವ್ಯಕ್ಕೆ ಹೊಸ ಬಲ; ಪುಟಿನ್ ಭೇಟಿಯಾದ ಜೈಶಂಕರ್, ಪರಮಾಣು ಸಹಕಾರ ಸೇರಿ ಹಲವು ಅಂಶಗಳ ಕುರಿತು ಚರ್ಚೆ!

3 ದಿನ ಮೊದಲೇ ಮುಂಗಾರು ಅಧಿವೇಶನಕ್ಕೆ ತೆರೆ: 'ವಿರೋಧ ಪಕ್ಷಕ್ಕೆ ಹೆದರಿ ಅಧಿವೇಶನ ರದ್ದು'; ರಾಜ್ಯಪಾಲರಿಗೆ BJP ದೂರು!

Video: ಕುದಿಯುತ್ತಿದ್ದ ಬೆಲ್ಲದ ಪಾಕಕ್ಕೆ ಬಿದ್ದ ಯುವಕ; ಅಣ್ಣನ ಸಾಲ ತೀರಿಸಲು ಕೆಲಸಕ್ಕೆ ಹೋಗಿದ್ದವನ ದಾರುಣ ಅಂತ್ಯ

'ಕಿವಿಲಿ ಹೊಗೆ ಬರುವಂತಿದೆ': ಲಂಕಾ-ಭಾರತ ಟೆಸ್ಟ್ ಪಂದ್ಯದಲ್ಲಿ ಮತ್ತೊಂದು ವಿವಾದ, ಗ್ಲೌಸ್ ಕಿತ್ತೆಸೆದ ಬ್ಯಾಟರ್, ಆಗಿದ್ದೇನು?

ಬಿಜೆಪಿ MLC ಎನ್. ರವಿಕುಮಾರ್‌ ವಿರುದ್ಧ ಜಾಮೀನು ರಹಿತ ಬಂಧನ ವಾರಂಟ್