ಬೆಂಗಳೂರು: ಸಾಮಾಜಿಕ-ಆರ್ಥಿಕ ಮತ್ತು ಶೈಕ್ಷಣಿಕ ಸಮೀಕ್ಷೆಯಲ್ಲಿ ಭಾಗವಹಿಸಿಲ್ಲ ಎಂಬ ಆರೋಪವನ್ನು ಗ್ರೇಟರ್ ಬೆಂಗಳೂರು ಪ್ರಾಧಿಕಾರ (ಜಿಬಿಎ) ವಿಶೇಷ ಆಯುಕ್ತ ಮುನೀಶ್ ಮೌದ್ಗಿಲ್ ಅವರು ನಿರಾಕರಿಸಿದ್ದಾರೆ.
ಗ್ರೇಟರ್ ಬೆಂಗಳೂರು ಪ್ರಾಧಿಕಾರದ ಕಂದಾಯ ವಿಭಾಗದ ವಿಶೇಷ ಆಯುಕ್ತ ಮುನೀಶ್ ಮೌದ್ಗಿಲ್ ಅವರ ಮನೆಗೆ ಸಮೀಕ್ಷೆಗೆಂದು ತೆರಳಿದ್ದ ಸಿಬ್ಬಂದಿ ಗಣತಿ ಮಾಡದೆ ಹಿಂದಿರುಗಿದ್ದಾರೆ.
ಮನೆಯ ಕಾಲಿಂಗ್ ಬೆಲ್ ಮಾಡಿದಾಗ ಯಾರೂ ಮನೆಯ ಬಾಗಿಲು ತೆರೆಯಲಿಲ್ಲ. . ಒಟ್ಟು ಮೂರು ಬಾರಿ ಮನಿಶ್ ಮೌದ್ಗಿಲ್ ಮನೆಗೆ ಸಮೀಕ್ಷೆಗೆಂದು ತೆರಳಿದ್ದರೂ ಮಾಹಿತಿ ಸಂಗ್ರಹಿಸಲು ಸಾಧ್ಯವಾಗಿಲ್ಲ ಅಧಿಕಾರಿಗಳಿಗೆ ಸಿಬ್ಬಂದಿ ತಿಳಿಸಿದ್ದಾರೆ.
ಇದಕ್ಕೆ ನೋಡಲ್ ಅಧಿಕಾರಿ, ಗಣತಿದಾರರಿಗೆ ಸಮೀಕ್ಷೆ ಅಪ್ಲಿಕೇಶನ್‌ನಲ್ಲಿ ನಿರಾಕರಣೆ ಆಯ್ಕೆಯನ್ನು ಬಳಸಲು ಮತ್ತು ಅದಕ್ಕೆ ಅನುಗುಣವಾಗಿ ಅದನ್ನು ಸಮೀಕ್ಷೆಯನ್ನು ಕೊನೆಗೊಳಿಸಿ ಎಂದು ನಿರ್ದೇಶಿಸಿದ್ದಾರೆಂದು ಹೇಳಲಾಗುತ್ತಿದೆ.
ಈ ಆರೋಪಕ್ಕೆ ಪ್ರತಿಕ್ರಿಯೆ ನೀಡಿರುವ ಮೌದ್ಗಿಲ್ ಅವರು, ಆನ್'ಲೈನ್ ಸಮೀಕ್ಷೆಯಲ್ಲಿ ಮಾಹಿತಿಗಳನ್ನು ಭರ್ತಿ ಮಾಡಲಾಗಿದೆ. ಆದರೆ, ಕೆಲವರು ಸುಳ್ಳುಗಳನ್ನು ಪ್ರಚಾರ ಮಾಡುತ್ತಿದ್ದಾರೆಂದು ಆರೋಪಿಸಿದ್ದಾರೆ.
‘ನಾನು ಬೆಳಿಗ್ಗೆ 8 ಗಂಟೆಗೆ ಮನೆಯಿಂದ ಹೊರಟರೆ ವಾಪಸ್ ಬರುವುದು ರಾತ್ರಿ 10 ಗಂಟೆಯಾಗುತ್ತದೆ. ಒಂದು ಬಾರಿ ಅವರು ಬಂದಾಗ ನನ್ನ ಪತ್ನಿ ಮನೆಯಲ್ಲಿ ಇರಲಿಲ್ಲ. ನಾಳೆ ಬರಲು ಹೇಳಿದ್ದೆ ಅಷ್ಟೇ. ಅವರು ಸುಮ್ಮನೆ ಪ್ರಚಾರ ಮಾಡುತ್ತಿದ್ದಾರೆ.
‘ಗುರುವಾರ ಸಂಜೆ ಆನ್‌ಲೈನ್‌ನಲ್ಲಿ ಸಮೀಕ್ಷೆಯನ್ನು ಪೂರ್ಣಗೊಳಿಸಿದ್ದೇನೆ. ಸಮೀಕ್ಷೆಗೆ ಗೈರಾಗಿರುವ ಸುಮಾರು ಎರಡು ಸಾವಿರ ಮಂದಿಯ ಮೇಲೆ ಶಿಸ್ತು ಕ್ರಮವಾಗುತ್ತಿದೆ. ಅದು ಆಗಬಾರದು. ಸುಖಾಸುಮ್ಮನೆ ಇಂತಹ ವಿಚಾರಗಳನ್ನು ಪ್ರಚಾರ ಮಾಡುತ್ತಿದ್ದಾರೆ’ ಎಂದರು.