BMRCL ವ್ಯವಸ್ಥಾಪಕ ನಿರ್ದೇಶಕ ಮಹೇಶ್ವರ್ ರಾವ್ 
ರಾಜ್ಯ

ನಗರದ 100 ರಸ್ತೆಗಳ ಗುರುತಿಸಿ, ಸಮಗ್ರ ಅಭಿವೃದ್ಧಿಗೆ ಕ್ರಮ: GBA ಆಯುಕ್ತ ಮಹೇಶ್ವರ್ ರಾವ್

ನಗರದಲ್ಲಿ ರಸ್ತೆಗಳನ್ನು ಸುಸ್ಥಿತಿಯಲ್ಲಿಡುವುದು ನಮ್ಮ ಕರ್ತವ್ಯವಾಗಿದ್ದು, ಈ ನಿಟ್ಟಿನಲ್ಲಿ 5 ನಗರ ಪಾಲಿಕೆಗಳಲ್ಲಿ ವಲಯಕ್ಕೆ 10 ರಸ್ತೆಗಳಂತೆ 10 ವಲಯಗಳಿಗೆ ಪ್ರಮುಖ 100 ರಸ್ತೆಗಳನ್ನು ಗುರುತಿಸಬೇಕು.

ಬೆಂಗಳೂರು: ಗ್ರೇಟರ್ ಬೆಂಗಳೂರು ಪ್ರಾಧಿಕಾರದ (ಜಿಬಿಎ) ವ್ಯಾಪ್ತಿಯಲ್ಲಿ ಪ್ರಮುಖ 100 ರಸ್ತೆಗಳನ್ನು ಗುರುತಿಸಿ ಸಮಗ್ರ ಅಭಿವೃದ್ಧಿಗೆ ಕ್ರಮ ಕೈಗೊಳ್ಳುವ ಸಲುವಾಗಿ ಯೋಜನೆ ರೂಪಿಸಲಾಗುವುದು ಎಂದು ಪ್ರಾಧಿಕಾರದ ಮುಖ್ಯ ಆಯುಕ್ತ ಮಹೇಶ್ವರ್ ರಾವ್ ಅವರು ಗುರುವಾರ ಹೇಳಿದ್ದಾರೆ.

ನಗರದ ರಸ್ತೆ, ಪಾದಚಾರಿ ಮಾರ್ಗ ಮತ್ತು ಸ್ವಚ್ಛತಾ ಕಾರ್ಯಗಳ ಕುರಿತು ಪ್ರಮುಖ ಅಧಿಕಾರಿಗಳೊಂದಿಗೆ ಪರಿಶೀಲನಾ ಸಭೆ ನಡೆಸಿದ ಅವರು, ನಗರದ ರಸ್ತೆಗಳನ್ನು ಉತ್ತಮ ಸ್ಥಿತಿಯಲ್ಲಿ ನಿರ್ವಹಿಸುವುದು ಸಾಮೂಹಿಕ ಜವಾಬ್ದಾರಿ ಎಂದು ಒತ್ತಿ ಹೇಳಿದರು.

ನಗರದಲ್ಲಿ ರಸ್ತೆಗಳನ್ನು ಸುಸ್ಥಿತಿಯಲ್ಲಿಡುವುದು ನಮ್ಮ ಕರ್ತವ್ಯವಾಗಿದ್ದು, ಈ ನಿಟ್ಟಿನಲ್ಲಿ 5 ನಗರ ಪಾಲಿಕೆಗಳಲ್ಲಿ ವಲಯಕ್ಕೆ 10 ರಸ್ತೆಗಳಂತೆ 10 ವಲಯಗಳಿಗೆ ಪ್ರಮುಖ 100 ರಸ್ತೆಗಳನ್ನು ಗುರುತಿಸಬೇಕು. ಆ ರಸ್ತೆಗಳನ್ನು ಸಮಗ್ರ ಅಭಿವೃದ್ಧಿಗೆ ಯೋಜನೆ ರೂಪಿಸಲಾಗುತ್ತದೆ ಎಂದು ಹೇಳಿದರು.

ನಾಗರಿಕರ ಅಭಿಪ್ರಾಯದ ಆಧಾರದ ಮೇಲೆ ರಸ್ತೆಗಳನ್ನು ಗುರುತಿಸಿ, ರಸ್ತೆ ಗುಂಡಿಗಳು, ಪಾದಚಾರಿ ಮಾರ್ಗಗಳ ಸ್ಥಿತಿ, ಬಸ್ ನಿಲ್ದಾಣಗಳ ಸ್ಥಿತಿ, ಬೀದಿ ದೀಪಗಳು, ವಾಹನ ಸಂಚಾರದ ದಟ್ಟಣೆ, ರಸ್ತೆಗಳಲ್ಲಿ ನೀರು ನಿಲ್ಲುವುದು, ಕಸ ಸುರಿಯುವ ಸ್ಥಳಗಳು ಸೇರಿದಂತೆ ಹಲವು ಅಂಶಗಳನ್ನು ಪರಿಗಣಿಸಿ ಅವುಗಳನ್ನು ನಿವಾರಣೆ ಮಾಡಬೇಕು. ಈ ಸಂಬಂಧ ಸಮಗ್ರ ನಿರ್ವಹಣೆಯ ಹೊಣೆಗಾರಿಕೆಯನ್ನು ವಲಯ ಮುಖ್ಯ ಎಂಜಿನಿಯರ್‍ಗಳಿಗೆ ವಹಿಸಿಕೊಳ್ಳಬೇಕು ಎಂದು ಅವರು ಸೂಚನೆ ನೀಡಿದರು.

ನಗರ ಪಾಲಿಕೆಗಳ ವ್ಯಾಪ್ತಿಯಲ್ಲಿ ರಸ್ತೆಗಳನ್ನು ದುರಸ್ತಿ ಕಾರ್ಯ ನಡೆಸಲಾಗಿರುತ್ತದೆ. ಆ ಬಳಿಕ ವಿವಿಧ ಸಂಸ್ಥೆಗಳು ಅದನ್ನು ಅಗೆದು ರಸ್ತೆ ಹಾಳು ಮಾಡುತ್ತಾರೆ. ಈ ಸಂಬಂಧ ಜಲಮಂಡಳಿ, ಬೆಸ್ಕಾಂ ಸೇರಿದಂತೆ ಯಾವುದೇ ಇಲಾಖೆಯಾಗಲಿ ಪ್ರಮುಖ ರಸ್ತೆಗಳಲ್ಲಿ ಕೆಲಸ ಕೈಗೊಳ್ಳುವ ಮೊದಲು ಜಿಬಿಎಯಿಂದ ಕಡ್ಡಾಯವಾಗಿ ಅನುಮತಿ ಪಡೆಯಬೇಕು ಎಂದು ನಿರ್ದೇಶನ ನೀಡಿದರು.

ಯೋಜನೆಗಳ ಮೇಲ್ವಿಚಾರಣೆಗಾಗಿ ಯೋಜನಾ ವಿಭಾಗದ ಮುಖ್ಯ ಅಭಿಯಂತರರ ಅಧ್ಯಕ್ಷತೆಯಲ್ಲಿ ವಾರಕ್ಕೊಮ್ಮೆ ಸಭೆ ನಡೆಸಬೇಕು. ಅಭಿವೃದ್ಧಿ ಕಾರ್ಯದ ವೇಳೆ ಮೊದಲಿಗೆ ತಾತ್ಕಾಲಿಕ ಪರಿಹಾರ ಕ್ರಮಗಳನ್ನು ಕೈಗೊಂಡು, ಪದೇ ಪದೇ ಉಂಟಾಗುವ ಸಮಸ್ಯೆಗಳ ಮೂಲ ಕಾರಣಗಳಿಗೆ ದೀರ್ಘಕಾಲಿಕ ಪರಿಹಾರ ಕ್ರಮಗಳನ್ನು ಕೈಗೊಳ್ಳಬೇಕು ಎಂದು ಸೂಚನೆ ನೀಡಿದರು.

ಜಿಬಿಎ ವ್ಯಾಪ್ತಿಯಲ್ಲಿರುವ ಮೇಲ್ಸೇತುವೆಗಳಿಗೆ ಮಳೆನೀರು ಹರಿದು ಹೋಗುಲು ಪೈಪ್‍ಗಳನ್ನು ಅಳವಡಿಸಿದ್ದು, ಆ ಪೈಪ್‍ಗಳು ಹಾಳಾಗಿ ಬೀಳುವ ಮಳೆ ನೀರು ನೇರವಾಗಿ ರಸ್ತೆ ಮೇಲೆ ಬಿದ್ದು, ರಸ್ತೆಯು ಶೀಘ್ರವೇ ಹಾಳಾಗುತ್ತಿದೆ. ಈ ನಿಟ್ಟಿನಲ್ಲಿ ಮೇಲ್ಸೇತುವೆಗಳಿಗೆ ಅಳವಡಿಸಿರುವ ಪೈಪ್ ಗಳು ಹಾಳಾಗಿರುವುದನ್ನು ಗುರುತಿಸಿ ಅವುಗಳನ್ನು ಬದಲಾಯಿಸಬೇಕು ಎಂದು ಸೂಚನೆ ನೀಡಿದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಲಾಲು ನಿವಾಸದ ಹೊರಗೆ ಹೈಡ್ರಾಮ: 'ನನ್ನ ಕಥೆ ಮುಗಿಯಿತು' ಬಟ್ಟೆ ಹರಿದುಕೊಂಡು ಗೋಳಾಡಿದ RJD ಟಿಕೆಟ್ ಆಕಾಂಕ್ಷಿ! Video

ದೊಡ್ಡವರ ಮನೆಗೆ ಹೋಗಬಾರದಿತ್ತು: ಶಾರುಖ್ ಖಾನ್ ಮನೆ ಪಾರ್ಟಿಯಲ್ಲಿ ಆದ ಕಹಿ ಅನುಭವ ಬಿಚ್ಚಿಟ್ಟ ನಟ ಗುಲ್ಶನ್ ದೇವಯ್ಯ!

"ನನಗೆ ಬೇಕಿರುವುದು ಅದೊಂದೆ...": ರಷ್ಯಾ-ಯುಕ್ರೇನ್ ಯುದ್ಧ ಕೊನೆಗೊಳಿಸಲು ಟ್ರಂಪ್ ಗೆ ಪುತಿನ್ ಷರತ್ತು; ಈಡೇರುತ್ತಾ 11 ವರ್ಷಗಳ ಗುರಿ?

ಬೆಳಗಾವಿ 'ಡಿಸಿಸಿ ಬ್ಯಾಂಕ್' ಚುನಾವಣೆ: ಮತಗಟ್ಟೆ ಬಳಿ ಜಾರಕಿಹೊಳಿ- ಸವದಿ ಬಣಗಳ ನಡುವೆ ಮಾರಾಮಾರಿ!

Belagavi: 'ದನ' ಕಾಯುತ್ತಿದ್ದವರು ಈಗ 260 ದೇಶಿಯ ಭತ್ತದ ತಳಿಗಳ ಸಂರಕ್ಷಕ! ಹಲವು ಪ್ರಶಸ್ತಿ, ಪುರಸ್ಕಾರಗಳು, ಮೌನ ಕ್ರಾಂತಿಯ ರೈತ ಶಂಕರ್!

SCROLL FOR NEXT