ಕರಾವಳಿ ಜನ ಬುದ್ಧಿವಂತರು, ಇಲ್ಲಿಗೆ ಪ್ರತ್ಯೇಕ ಪ್ರವಾಸೋದ್ಯಮ ನೀತಿ ರೂಪಿಸಲು ಬದ್ಧ: ಡಿ.ಕೆ ಶಿವಕುಮಾರ್
ಆರೋಗ್ಯ ಕ್ಷೇತ್ರ ಸೇರಿದಂತೆ ಎಲ್ಲಾ ಕ್ಷೇತ್ರಗಳಲ್ಲಿ ಕರಾವಳಿ ಭಾಗದ ಜನತೆ ಮುಂದಿದ್ದಾರೆ. ಕರ್ನಾಟಕದ ಕರಾವಳಿ ಭಾಗ, ದಕ್ಷಿಣ ಕನ್ನಡದ ಜನ ವಿದ್ಯಾವಂತರು, ಬುದ್ಧಿವಂತರು, ಪ್ರಜ್ಞಾವಂತರು.
ಇಡೀ ದೇಶಕ್ಕೆ ಕರ್ನಾಟಕದ ಮೂಲಕ ಸಂಸ್ಕೃತಿ ಹಾಗೂ ಶಿಕ್ಷಣ ಕೊಟ್ಟವರು, ಧಾರ್ಮಿಕ ಶಕ್ತಿ ಕೊಟ್ಟವರು, ಬ್ಯಾಂಕ್ ವ್ಯವಸ್ಥೆ ಕೊಟ್ಟವರು ಕರಾವಳಿ ಜನ ಎಂದು ಉಪ ಮುಖ್ಯಮಂತ್ರಿ ಡಿ ಕೆ ಶಿವಕುಮಾರ್ ಹೇಳಿದ್ದಾರೆ.
ಆರೋಗ್ಯ ಕ್ಷೇತ್ರ ಸೇರಿದಂತೆ ಎಲ್ಲಾ ಕ್ಷೇತ್ರಗಳಲ್ಲಿ ಕರಾವಳಿ ಭಾಗದ ಜನತೆ ಮುಂದಿದ್ದಾರೆ. ಕರ್ನಾಟಕದ ಕರಾವಳಿ ಭಾಗ, ದಕ್ಷಿಣ ಕನ್ನಡದ ಜನ ವಿದ್ಯಾವಂತರು, ಬುದ್ಧಿವಂತರು, ಪ್ರಜ್ಞಾವಂತರು. ನಿಮ್ಮ ಜೊತೆ ಸರ್ಕಾರವಿದೆ. ಮಂಗಳೂರು, ಉಡುಪಿ ಸೇರಿದಂತೆ ಕರಾವಳಿ ಭಾಗದ ಜನ ಉದ್ಯೋಗಕ್ಕಾಗಿ ವಲಸೆ ಹೋಗದಂತೆ ಪ್ರತ್ಯೇಕ ಪ್ರವಾಸೋದ್ಯಮ ನೀತಿ ರೂಪಿಸಲು ನಾವು ಬದ್ಧರಾಗಿದ್ದೇವೆ ಎಂದು ಭರವಸೆ ನೀಡಿದ್ದಾರೆ.
ಕರಾವಳಿ ಜನತೆ ಉದ್ಯೋಗಕ್ಕಾಗಿ ಬೇರೆಡೆ ಹೋಗುವುದನ್ನು ತಪ್ಪಿಸಿ ಅಲ್ಲೇ ಉದ್ಯೋಗ ಸೃಷ್ಟಿಯಾಗುವಂತೆ ಮಾಡಬೇಕಿದೆ ಎಂದು ಡಿ ಕೆ ಶಿವಕುಮಾರ್ ಈ ಹಿಂದೆ ಕೂಡ ಸಾಕಷ್ಟು ಬಾರಿ ಹೇಳಿದ್ದರು.
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.