ಬೆಂಗಳೂರು: ರಾಷ್ಟ್ರೀಯ ಸ್ವಯಂಸೇವಾ ಸಂಘ (RSS) ಸೇರಿದಂತೆ ಇತರೆ ಖಾಸಗಿ ಸಂಘ ಸಂಸ್ಥೆಗಳು, ಸಂಘಟನೆಗಳು ಸರ್ಕಾರಿ ಜಾಗದಲ್ಲಿ ಹಾಗೂ ಸಾರ್ವಜನಿಕ ಆಸ್ತಿಗಳನ್ನು ಬಳಸುವುದಕ್ಕೆ ಪೂರ್ವಾನುಮತಿ ಕಡ್ಡಾಯವಾಗಿದ್ದು ಈ ಕುರಿತು ರಾಜ್ಯ ಸರ್ಕಾರದಿಂದ ಅಧಿಕೃತ ಆದೇಶ ಹೊರಡಿಸಲಾಗಿದೆ. ಸಂಪುಟದ ತೀರ್ಮಾನದಂತೆ ರಾಜ್ಯ ಸರ್ಕಾರ ಅಧಿಕೃತ ಆದೇಶ ಹೊರಡಿಸಲಾಗಿದೆ. ಇಂದಿನಿಂದಲೇ ರಾಜ್ಯ ಸರ್ಕಾರದ ಆದೇಶ ಜಾರಿಯಾಗಲಿದೆ.
ಯಾವುದೇ ಸಂಘಟನೆಯಾಗಲೀ ಇಂದಿನಿಂದಲೇ ಸರ್ಕಾರಿ ಶಾಲಾ-ಕಾಲೇಜುಗಳು, ಅನುದಾನಿತ ಶಾಲೆಗಳು, ಉನ್ನತ ಶಿಕ್ಷಣ ಇಲಾಖೆ, ಸಾಕ್ಷರತಾ ಇಲಾಖೆ ಹಾಗೂ ವೈದ್ಯಕೀಯ ಶಿಕ್ಷಣ ಇಲಾಖೆ ಅನುಮತಿ ಪಡೆಯಬೇಕು. ಉದ್ಯಾನವನ, ಮೈದಾನಗಳು ಇತರೆ ತೆರೆದ ಸ್ಥಳಗಳ ಬಗ್ಗೆ ಗ್ರಾಮೀಣ ಅಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ, ನಗರಾಭಿವೃದ್ಧಿ ಇಲಾಖೆ ಅನುಮತಿ ಪಡೆಯಬೇಕು. ರಸ್ತೆಗಳು, ಸರ್ಕಾರದ ಇತರೆ ಆಸ್ತಿಗೆ ಸಂಬಂಧಿಸಿದಂತೆ ಜಿಲ್ಲಾಧಿಕಾರಿ, ಕಮಿಷನರ್, ಅಧೀಕ್ಷಕರ ಒಪ್ಪಿಗೆ ಪಡೆಯಬೇಕು ಎಂದು ಹೇಳಲಾಗಿದೆ.