ಬೆಂಗಳೂರಿನ ಚಾಮರಾಜಪೇಟೆಯಲ್ಲಿರುವ ಆರ್‌ಎಸ್‌ಎಸ್ ಕಚೇರಿಯ ಮುಂದೆ ಶುಕ್ರವಾರ ಸಚಿವ ಪ್ರಿಯಾಂಕ್ ಖರ್ಗೆ ಅವರಿಗೆ ಬೆಂಬಲ ಸೂಚಿಸಲು ಎನ್‌ಎಸ್‌ಯುಐ ಸದಸ್ಯರು ಆರ್‌ಎಸ್‌ಎಸ್ ವಿರುದ್ಧ ಪ್ರತಿಭಟನೆ ನಡೆಸಿದರು. 
ರಾಜ್ಯ

RSS ಕಚೇರಿ ಮುಂದೆ ಯುವ ಕಾಂಗ್ರೆಸ್ ಪ್ರತಿಭಟನೆ: ಕ್ರಮಕ್ಕೆ BJP ಆಗ್ರಹ

ಆರ್‌ಎಸ್‌ಎಸ್‌ ರಾಜ್ಯ ಕಚೇರಿ ಕೇಶವ ಕೃಪಾಕ್ಕೆ ಮುತ್ತಿಗೆ ಹಾಕಲು ಯುವ ಕಾಂಗ್ರೆಸ್ ಮತ್ತು ಎನ್‌ಎಸ್‌ಐಯು ಸದಸ್ಯರು ಯತ್ನಿಸಿದ್ದಾರೆ.

ಬೆಂಗಳೂರು: ಆರ್‌ಎಸ್‌ಎಸ್‌ ರಾಜ್ಯ ಕಚೇರಿ ಕೇಶವ ಕೃಪಾಕ್ಕೆ ಮುತ್ತಿಗೆ ಹಾಕಲು ಯುವ ಕಾಂಗ್ರೆಸ್‌ ಘಟಕದ ಕಾರ್ಯಕರ್ತರು ಯತ್ನಿಸಿದ್ದು, ಕ್ರಮ ಕೈಗೊಳ್ಳುವಲ್ಲಿ ಪೊಲೀಸರು ವಿಫಲರಾಗಿದ್ದಾರೆಂದು ಆರೋಪಿಸಿ, ರಾಜ್ಯ ಬಿಜೆಪಿ ನಾಯಕರು ನಗರ ಪೊಲೀಸ್ ಆಯುಕ್ತ ಸೀಮಂತ್ ಸಿಂಗ್ ಅವರಿಗೆ ಶುಕ್ರವಾರ ದೂರು ನೀಡಿದ್ದಾರೆ.

ಬಿಜೆಪಿ ರಾಜ್ಯ ಪ್ರಧಾನ ಕಾರ್ಯದರ್ಶಿ ವಿ ಸುನಿಲ್ ಕುಮಾರ್ ನೇತೃತ್ವದ ನಿಯೋಗ ಪೊಲೀಸ್ ಆಯುಕ್ತ ಸೀಮಂತ್ ಸಿಂಗ್ ಅವರನ್ನು ಭೇಟಿ ಮಾಡಿ, ದೂರು ಸಲ್ಲಿಸಿದೆ.

ಆರ್‌ಎಸ್‌ಎಸ್‌ ರಾಜ್ಯ ಕಚೇರಿ ಕೇಶವ ಕೃಪಾಕ್ಕೆ ಮುತ್ತಿಗೆ ಹಾಕಲು ಯುವ ಕಾಂಗ್ರೆಸ್ ಮತ್ತು ಎನ್‌ಎಸ್‌ಐಯು ಸದಸ್ಯರು ಯತ್ನಿಸಿದ್ದಾರೆ. ಯಾವುದೇ ವಿಚಾರದ ಬಗ್ಗೆ ಮಾಧ್ಯಮಗಳಲ್ಲಿ ಚರ್ಚೆ ನಡೆಸಲಿ, ಯಾವುದೇ ಪ್ರತಿಭಟನೆ ನಡೆಸುವ ಮೊದಲು ಪೊಲೀಸರ ಅನುಮತಿ ಪಡೆಯಬೇಕಿದೆ. ಆದರೆ, ಅನುಮತಿ ಇಲ್ಲದೆ ಇಲ್ಲಿ ಪ್ರತಿಭಟನೆ ನಡೆಸಲಾಗಿದೆ. ಇಂತಹ ಘಟನೆಗಳು ನಡೆಯದಂತೆ ಪೊಲೀಸರು ಕ್ರಮ ಕೈಗೊಳ್ಳಬೇಕು, ಪ್ರಸ್ತುತ ಘಟನೆ ಬಗ್ಗೆ ಪೊಲೀಸರು ಎಫ್ಐಆರ್ ದಾಖಲಿಸಬೇಕು. ಅಲ್ಲದೆ, ಪ್ರತಿಭಟನೆ ನಡೆಸಲು ಸ್ಥಳಾವಕಾಶ ನೀಡಿದ ಅಧಿಕಾರಿಗಳನ್ನು ಅಮಾನತುಗೊಳಿಸಬೇಕು ಎಂದು ಆಗ್ರಹಿಸಿದ್ದಾರೆ.

ಆರ್‌ಎಸ್‌ಎಸ್ ಕಚೇರಿ ಮುಂದೆ ಇಂದು ನಡೆದ ಪ್ರತಿಭಟನೆ ಸರ್ಕಾರಿ ಪ್ರಾಯೋಜಿತ ಪ್ರತಿಭಟನೆಯಾಗಿದೆ. ಪೊಲೀಸರು ಈ ಬಗ್ಗೆ ಕ್ರಮ ಕೈಗೊಳ್ಳದಿದ್ದರೆ, ಎಲ್ಲಾ 33 ಸಚಿವರ ನಿವಾಸಗಳ ಮುಂದೆ ಬಿಜೆಪಿ ಪ್ರತಿಭಟನೆ ನಡೆಸಲಿದೆ ಎಂದು ಎಚ್ಚರಿಸಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಭಾರತದ ಚುನಾವಣಾ ವ್ಯವಸ್ಥೆಯ ವಿಶ್ವಾಸಾರ್ಹತೆ ಬಗ್ಗೆ ಜಾಗತಿಕವಾಗಿ ಅತ್ಯುತ್ತಮ ಸ್ಪಷ್ಟ ಅಭಿಪ್ರಾಯ- ಟ್ರಂಪ್ ಹೇಳಿಕೆ ಬೆನ್ನಲ್ಲೇ MEA ಪ್ರತಿಕ್ರಿಯೆ!

ಮಾಜಿ ಸಚಿವ ಬಿ. ಸಿ. ನಾಗೇಶ್ ನಿಧನ: ನಾಳೆ ತಿಪಟೂರಿನಲ್ಲಿ ಅಂತ್ಯಕ್ರಿಯೆ!

ಬೆಂಗಳೂರು ದಕ್ಷಿಣ ಜಿಲ್ಲೆಯಲ್ಲಿ ನಕಲಿ ಔಷಧಿ ಮರುಪ್ಯಾಕಿಂಗ್ ಬೃಹತ್ ಜಾಲ ಪತ್ತೆ: 5 ಕೋಟಿ ರೂ. ಮೌಲ್ಯದ ವಸ್ತುಗಳು ವಶಕ್ಕೆ!

ಪಸಿಂದು ಗೋಲ್ಡನ್ ಡಕೌಟ್: ಆಡಿದ 2ನೇ ಪಂದ್ಯದಲ್ಲೇ ಕುಂಬ್ಳೆ ದಾಖಲೆ ಸರಿಗಟ್ಟಿದ Team India ಯುವ ಸ್ಪಿನ್ನರ್ ಮಾನವ್ ಸುತಾರ್!

ದೇವೇಗೌಡರ ಕೂಸನ್ನು ಹಾದಿ ತಪ್ಪಿಸಿ ಯಾರಪ್ಪನಿಗೆ ಕೊಡಲು ಹೊರಟಿದ್ದೀರಿ ಮಿಸ್ಟರ್ ಡಿ.ಕೆ. ಶಿವಕುಮಾರ್? ತಾಕತ್ ಇದ್ರೆ ಚರ್ಚೆಗೆ ಬನ್ನಿ, ಕುಮಾರಸ್ವಾಮಿ ಸವಾಲು!