ಸಾಂದರ್ಭಿಕ ಚಿತ್ರ  
ರಾಜ್ಯ

Karnataka weather: ಕರಾವಳಿ ಭಾಗದಲ್ಲಿ ಹೆಚ್ಚಿನ ಮಳೆ ನಿರೀಕ್ಷೆ, 20 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್

ದಕ್ಷಿಣ ಕನ್ನಡ, ಉತ್ತರ ಕನ್ನಡ ಮತ್ತು ಉಡುಪಿಯಲ್ಲಿ ಗುಡುಗು ಸಹಿತ ಮಳೆಯಾಗಲಿದೆ. ಬೆಳ್ತಂಗಡಿ, ಪುತ್ತೂರು, ಸುಳ್ಯ, ಕುಂದಾಪುರ ಮತ್ತು ಕಾರ್ಕಳದಲ್ಲಿ ಮಳೆ ತುಸು ಹೆಚ್ಚಾಗುವ ನಿರೀಕ್ಷೆ ಇದೆ.

ಬೆಂಗಳೂರು: ಚಳಿಗಾಲ ಋತುವಿಗೆ ಹತ್ತಿರ ಬಂದರೂ ರಾಜ್ಯದಲ್ಲಿ ಮಳೆ ಕಡಿಮೆಯಾಗಿಲ್ಲ. ಕರ್ನಾಟದಲ್ಲಿ ಇಂದು ಭಾರಿ ಮಳೆಯಾಗುವ (Weather Forecast) ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ 20 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್​ ಘೋಷಿಸಿದೆ.

ಉತ್ತರ ಒಳನಾಡು ಭಾಗದಲ್ಲಿ ಸಣ್ಣ ಪ್ರಮಾಣದಲ್ಲಿ, ಬೆಂಗಳೂರು ಸೇರಿದಂತೆ ದಕ್ಷಿಣ ಒಳನಾಡು ಪ್ರದೇಶದಲ್ಲಿ ಸಾಧಾರಣ ಮಳೆ, ಕರಾವಳಿ ಮತ್ತು ಘಟ್ಟ ಪ್ರದೇಶಗಳಲ್ಲಿ ಭಾರೀ ಮಳೆಯಾಗುವ ಸೂಚನೆಯನ್ನು ಹವಾಮಾನ ಇಲಾಖೆ ನೀಡಿದೆ.

ಮಳೆ ಬೀಳುವ ಜಿಲ್ಲೆಗಳು

ದಕ್ಷಿಣ ಕನ್ನಡ, ಉತ್ತರ ಕನ್ನಡ ಮತ್ತು ಉಡುಪಿಯಲ್ಲಿ ಗುಡುಗು ಸಹಿತ ಮಳೆಯಾಗಲಿದೆ. ಬೆಳ್ತಂಗಡಿ, ಪುತ್ತೂರು, ಸುಳ್ಯ, ಕುಂದಾಪುರ ಮತ್ತು ಕಾರ್ಕಳದಲ್ಲಿ ಮಳೆ ತುಸು ಹೆಚ್ಚಾಗುವ ನಿರೀಕ್ಷೆ ಇದೆ. ಹವಾಮಾನ ವೈಪರೀತ್ಯದ ಕಾರಣ ಸಮುದ್ರಕ್ಕೆ ಇಳಿಯದಂತೆ ಮೀನುಗಾರರಿಗೆ ಸೂಚಿಸಲಾಗಿದೆ.

ದಕ್ಷಿಣ ಒಳನಾಡು ಪ್ರದೇಶದ ಜಿಲ್ಲೆಗಳಾದ ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ರಾಮನಗರ, ಕೋಲಾರ, ಚಿಕ್ಕಬಳ್ಳಾಪುರ, ಮಂಡ್ಯ, ಮೈಸೂರು, ಚಾಮರಾಜನಗರ, ಕೊಡಗು, ತುಮಕೂರು, ಹಾಸನ, ಚಿಕ್ಕಮಗಳೂರು, ಚಿತ್ರದುರ್ಗ ಮತ್ತು ಶಿವಮೊಗ್ಗದಲ್ಲಿ ಸಾಧಾರಣ ಮಳೆಯನ್ನು ನಿರೀಕ್ಷಿಸಲಾಗಿದೆ.ಉತ್ತರ ಒಳನಾಡು ಜಿಲ್ಲೆಗಳಾದ ಬೆಳಗಾವಿ, ಬೀದರ್, ವಿಜಯಪುರ, ಬಾಗಲಕೋಟೆ, ಹಾವೇರಿ, ಗದಗ, ಧಾರವಾಡ, ಕಲಬುರಗಿ, ಕೊಪ್ಪಳ, ಬಳ್ಳಾರಿ, ರಾಯಚೂರು, ಯಾದಗಿರಿ ಮತ್ತು ವಿಜಯನಗರದಲ್ಲಿ ಸಣ್ಣ ಪ್ರಮಾಣದ ಮಳೆ ಅಥವಾ ಮೋಡ ಕವಿದ ವಾತಾವರಣ ಇರಲಿದೆ.

ಬೆಂಗಳೂರಲ್ಲಿ ಗುಡುಗು ಸಹಿತ ಮಳೆಯ ಮುನ್ಸೂಚನೆ

ರಾಜಧಾನಿ ಬೆಂಗಳೂರಿನಲ್ಲಿ ಕೂಡ ಕಳೆದ ಹಲವು ದಿನಗಳಿಂದ ಬೆಳಗಿನ ಹೊತ್ತು ಮೋಡ ಕವಿದ ವಾತಾವರಣ ರಾತ್ರಿ ವೇಳೆ ಮಳೆಯಾಗುತ್ತಿದೆ. ಬೆಂಗಳೂರಿನ ಕೆಲವು ಭಾಗಗಳಲ್ಲಿ ಗುಡುಗು ಸಹಿತ ಮಳೆಯಾಗಲಿದೆ. ಶೇ.80ರಿಂದ 100ರಷ್ಟು ಮಳೆಯಾಗುವ ನಿರೀಕ್ಷೆ ಇದ್ದು, ಗಾಳಿಯ ವೇಗ ಗಂಟೆಗೆ 14-20 ಕಿ.ಮೀ. ಇರಲಿದೆ. ನಗರದ ಗರಿಷ್ಠ ತಾಪಮಾನ 26 ಡಿಗ್ರಿ ಸೆಲ್ಸಿಯಸ್​ ಇರಲಿದ್ದು, ಕನಿಷ್ಠ 22-26 ಡಿಗ್ರಿ ಸೆಲ್ಸಿಯಸ್​ ತಲುಪಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಏನೇ ಶಾಂತಿ ಒಪ್ಪಂದವಾದ್ರೂ ನಾವು ಅಮೆರಿಕವನ್ನ ನಂಬಲ್ಲ: ಡೊನಾಲ್ಡ್ ಟ್ರಂಪ್ ಗೆ ಶಾಕ್ ಕೊಟ್ಟ Iran

2 ಕೋಟಿ ಇನ್ಷುರೆನ್ಸ್ ಹಣಕ್ಕಾಗಿ ಮಾಜಿ ಯೋಧನ ಕೊಲೆ: FSL ವರದಿಯನ್ನೇ ತಿರುಚಿದ ಖತರ್ನಾಕ್ ಗ್ಯಾಂಗ್, ಪತ್ನಿ, ಆಕೆಯ ಲವರ್ ಸೇರಿ 9 ಮಂದಿ ಬಂಧನ

ಹೇಡಿತನದ ಕೃತ್ಯ: ಜೈಪುರದಲ್ಲಿ ಕಾಕ್ರೋಚ್ ಜನತಾ ಪಾರ್ಟಿ ಸಂಸ್ಥಾಪಕ Abhijeet Dipkeಗೆ ಕಪಾಳ ಮೋಕ್ಷ, ಹಲ್ಲೆ! Video

ಮುದುಕ ಗಂಡನ ಜೊತೆ ಖುಷಿಯಾಗಿದ್ದೀರಾ? ಅಭಿಮಾನಿಗೆ ಖಡಕ್ ತಿರುಗೇಟು ಕೊಟ್ಟ Bollywood ನಟ ಅರ್ಬಾಜ್ ಖಾನ್ ಪತ್ನಿ

Women's T20 World Cup 2026: ಪರಸ್ಪರ ಜುಟ್ಟು ಹಿಡಿದ ಭಾರತ-ಪಾಕ್ ಆಟಗಾರ್ತಿಯರು; 'ಜಗಳ' Video ವೈರಲ್; ಅಸಲಿಯತ್ತೇನು?

SCROLL FOR NEXT