ಬೆಂಗಳೂರು: ನಾಡಿನಾದ್ಯಂತ ಇಂದು ದೀಪಾವಳಿ ಹಬ್ಬದ ಸಡಗರ, ಸಂಭ್ರಮ ಮನೆಮಾಡಿರುವಂತೆಯೇ ನಗರದ ಪ್ರತಿಷ್ಠಿತ ಮಾಲ್ ಗಳಲ್ಲಿ ಒಂದಾದ ಮಾಗಡಿ ರಸ್ತೆಯ ಜಿಟಿ ಮಾಲ್ ನಿಂದ ಬಿದ್ದು ಯುವಕನೋರ್ವ ಮೃತಪಟ್ಟಿದ್ದಾನೆ.
GTವರ್ಲ್ಡ್ ಮಾಲ್ ನ ಮೂರನೇ ಅಂತಸ್ಥಿನಿಂದ ಬಿದ್ದು ಯುವಕ ಸಾವನ್ನಪ್ಪಿದ್ದಾನೆ. ಘಟನೆಯ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ.
ಮೃತ ಯುವಕನ ಗುರುತು ಇನ್ನೂ ಪತ್ತೆಯಾಗಿಲ್ಲ. ಸ್ಥಳಕ್ಕೆ ಮಾಗಡಿ ರಸ್ತೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
ಯುವಕ ಆಯತಪ್ಪಿ ಬಿದ್ದಿರುವುದೋ ಅಥವಾ ಆತ್ಮಹತ್ಯೆಯೇ ಎಂಬುದರ ಬಗ್ಗೆ ಪೊಲೀಸರು ತನಿಖೆ ನಡೆಸುತ್ತಿದ್ದಾರೆ.