ಸಾಂದರ್ಭಿಕ ಚಿತ್ರ 
ರಾಜ್ಯ

Bengaluru: 'ಪರೀಕ್ಷೆ ನೆಪದಲ್ಲಿ ಮುತ್ತಿಟ್ಟು, ಬಟ್ಟೆ ಬಿಚ್ಚಲು ಒತ್ತಾಯಿಸಿದ ಡಾಕ್ಟರ್'; ಯುವತಿ ದೂರು, ಬಂಧನ

ಬೆಂಗಳೂರಿನ ಅಶೋಕ್ ನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ವರದಿಯಾಗಿದ್ದು, ಅಕ್ಟೋಬರ್ 20ರಂದು 56 ವರ್ಷದ ಚರ್ಮ ರೋಗ ತಜ್ಞ ಡಾ. ಪ್ರವೀಣ್ ಎಂಬುವವರನ್ನು ಪೊಲೀಸರು ಬಂಧಿಸಿದ್ದಾರೆ.

ಬೆಂಗಳೂರು: ಚರ್ಮದ ಆರೋಗ್ಯ ಸಮಸ್ಯೆ ನಿಮಿತ್ತ ಕ್ಲಿನಿಕ್ ಗೆ ಬಂದಿದ್ದ ಯುವತಿಯೊಬ್ಬಳನ್ನು ಪರೀಕ್ಷೆ ನೆಪದಲ್ಲಿ ಮುತ್ತಿಟ್ಟು, ಬಟ್ಟೆ ಬಿಚ್ಚಲು ಒತ್ತಾಯಿಸಿದ ಆರೋಪದ ಮೇರೆಗೆ ಚರ್ಮರೋಗ ತಜ್ಞನನ್ನು ಪೊಲೀಸರು ಬಂಧಿಸಿದ್ದಾರೆ ಎಂದು ತಿಳಿದುಬಂದಿದೆ.

ಬೆಂಗಳೂರಿನ ಅಶೋಕ್ ನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ವರದಿಯಾಗಿದ್ದು, ಅಕ್ಟೋಬರ್ 20ರಂದು 56 ವರ್ಷದ ಚರ್ಮ ರೋಗ ತಜ್ಞ ಡಾ. ಪ್ರವೀಣ್ ಎಂಬುವವರನ್ನು ಪೊಲೀಸರು ಬಂಧಿಸಿದ್ದಾರೆ.

21 ವರ್ಷದ ಮಹಿಳೆಗೆ ಲೈಂಗಿಕ ಕಿರುಕುಳ ನೀಡಿದ ಆರೋಪದ ಮೇಲೆ ಬಂಧಿಸಲಾಗಿದೆ. ಡಾ. ಪ್ರವೀಣ್ ಅವರನ್ನು ಅಶೋಕ್ ನಗರ ಪೊಲೀಸರು ವಶಕ್ಕೆ ಪಡೆದು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದ್ದಾರೆ.

ಪೊಲೀಸ್ ಮೂಲಗಳ ಪ್ರಕಾರ ಅಕ್ಟೋಬರ್ 18, ಶನಿವಾರ ಸಂಜೆ ತಾನು ಕ್ಲಿನಿಕ್‌ಗೆ ಒಬ್ಬಂಟಿಯಾಗಿ ಭೇಟಿ ನೀಡಿದಾಗ ಈ ಘಟನೆ ನಡೆದಿದೆ ಎಂದು ಮಹಿಳೆ ದೂರಿನಲ್ಲಿ ಆರೋಪಿಸಿದ್ದಾರೆ. ಸಾಮಾನ್ಯವಾಗಿ ಕ್ಲಿನಿಕ್ ಗೆ ಬಂದಾಗೆ ಆಕೆಯೊಂದಿಗೆ ಆಕೆಯ ತಂದೆ ಕೂಡ ಬರುತ್ತಿದ್ದರು.

ಅಂದು ತನ್ನೊಟ್ಟಿಗೆ ಯಾರೂ ಬಂದಿರಲಿಲ್ಲ. ಪರಿಸ್ಥಿತಿಯ ಲಾಭ ಪಡೆದ ವೈದ್ಯ ಪ್ರವೀಣ್ ಲೈಂಗಿಕ ಕಿರುಕುಳ ನೀಡಿದ್ದಾರೆ ಎಂದು ಮಹಿಳೆ ಆರೋಪಿಸಿದ್ದಾರೆ.

ಪೊಲೀಸರಿಗೆ ನೀಡಿದ ದೂರಿನ ಪ್ರಕಾರ, ವೈದ್ಯರು ಪರಿಸ್ಥಿತಿಯ ಲಾಭ ಪಡೆದು ಚರ್ಮದ ಸೋಂಕನ್ನು ಪರೀಕ್ಷಿಸುವ ನೆಪದಲ್ಲಿ ಅನುಚಿತವಾಗಿ ಸ್ಪರ್ಶಿಸಿದ್ದಾರೆ. ಹಲವಾರು ಬಾರಿ ತನ್ನನ್ನು ತಬ್ಬಿಕೊಂಡು ಮುತ್ತಿಟ್ಟಿದ್ದಾರೆ ಹಾಗೂ ನನ್ನ ಜತೆಗೆ ಕೆಟ್ಟದಾಗಿ ನಡೆದುಕೊಂಡಿದ್ದಾರೆ.

ಪರೀಕ್ಷೆ ಮಾಡಬೇಕು ಎಂದು ವೈದ್ಯರು ತನ್ನ ಬಟ್ಟೆ ಬಿಚ್ಚುವಂತೆ ಒತ್ತಾಯಿಸಿದ್ದಾರೆ. ಖಾಸಗಿಯಾಗಿ ಸಮಯ ಕಳೆಯಲು ಹೋಟೆಲ್ ರೂಮ್​​ಗೆ ಬರುವಂತೆ ಹೇಳಿದರು ಎಂದು ಯುವತಿ ದೂರಿನಲ್ಲಿ ತಿಳಿಸಿದ್ದಾರೆ.

ವೈದ್ಯನ ವಿರುದ್ಧ ಪ್ರತಿಭಟನೆ

ಈ ಘಟನೆ ನಡೆದ ನಂತರ ಯುವತಿ ತನ್ನ ಮನೆಯವರಿಗೆ ತಿಳಿಸಿದ್ದು, ಯುವತಿಯ ಕುಟುಂಬದವರು, ಅಕ್ಕ-ಪಕ್ಕದ ನಿವಾಸಿಗಳೊಂದಿಗೆ ಕ್ಲಿನಿಕ್​​ಗೆ ಮುತ್ತಿಗೆ ಹಾಕಿ ಪ್ರತಿಭಟನೆ ಮಾಡಿದ್ದಾರೆ. ಪೊಲೀಸರು ಸ್ಥಳಕ್ಕೆ ಬಂದು ಪರಿಸ್ಥಿತಿಯನ್ನು ನಿಭಾಯಿಸಿದ್ದಾರೆ. ಹಾಗೂ ವೈದ್ಯರನ್ನು ಬಂಧಿಸಿದ್ದಾರೆ. ಆದರೆ ವೈದ್ಯರು ಈ ಆರೋಪವನ್ನು ನಿರಾಕರಿಸಿದ್ದಾರೆ. ನಾನು ಮಾಡಿದ ಚಿಕಿತ್ಸೆಯ ಕ್ರಮವನ್ನು ತಪ್ಪಾಗಿ ಅರ್ಥಮಾಡಿಕೊಂಡಿದ್ದಾರೆ ಎಂದು ಹೇಳಿದ್ದಾರೆ.

ಅಶೋಕ್ ನಗರ ಪೊಲೀಸ್ ಠಾಣೆಯಲ್ಲಿ ಭಾರತೀಯ ನ್ಯಾಯ ಸಂಹಿತಾ (ಬಿಎನ್‌ಎಸ್) ಸೆಕ್ಷನ್ 75 (ಲೈಂಗಿಕ ಕಿರುಕುಳ) ಮತ್ತು 79 (ಮಹಿಳೆಯ ನಮ್ರತೆಯನ್ನು ಅವಮಾನಿಸುವ ಉದ್ದೇಶದಿಂದ ಮಾತು, ಸನ್ನೆ ಅಥವಾ ಕೃತ್ಯ) ಅಡಿಯಲ್ಲಿ ಪ್ರಕರಣ ದಾಖಲಾಗಿದೆ. ಹಾಗೂ ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಹೆಚ್ಚಿನ ತನಿಖೆ ನಡೆಸಲಾಗುವುದು ಎಂದು ಪೊಲೀಸರು ಹೇಳಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

Amritsar: ಉಗ್ರರ ದಾಳಿ ಸಂಚು ವಿಫಲ; ISI ಜೊತೆಗೆ ನಂಟು ಹೊಂದಿದ್ದ ಇಬ್ಬರ ಬಂಧನ; ರಾಕೆಟ್ ಚಾಲಿತ ಗ್ರೆನೇಡ್ ವಶಕ್ಕೆ!

ವ್ಲಾಡಿಮಿರ್ ಕ್ರಾಮ್ನಿಕ್ ವಂಚನೆ ಆರೋಪ: ಗ್ರ್ಯಾಂಡ್ ಮಾಸ್ಟರ್ ಡೇನಿಯಲ್ ನರೋಡಿಟ್ಸ್ಕಿ ಆತ್ಮಹತ್ಯೆ; ನಿಹಾಲ್ ಸರಿನ್ ಆಕ್ರೋಶ!

ಮಾನ್ಯ ವೀಸಾ ಹೊಂದಿದ್ದರೂ ಹಿಂದಿ ವಿದ್ವಾಂಸೆ ಫ್ರಾನ್ಸೆಸ್ಕಾ ಓರ್ಸಿನಿಗೆ ಭಾರತ ಪ್ರವೇಶಕ್ಕೆ ನಿರಾಕರಣೆ!

ಸೊಸೆ ಜೊತೆ ತಂದೆ ಅಕ್ರಮ ಸಂಬಂಧ: ಮಗನ ಕೊಲೆ ಆರೋಪ; ತಂದೆ ಮಾಜಿ DGP ಮುಸ್ತಫಾ, ತಾಯಿ, ಪತ್ನಿ ವಿರುದ್ಧ FIR!

India 'Proxy war': ಪಾಕಿಸ್ತಾನದ ಆರೋಪಕ್ಕೆ ಅಪ್ಘಾನಿಸ್ತಾನ ತಿರುಗೇಟು! ಹೇಳಿದ್ದೇನು? Video

SCROLL FOR NEXT