ಬೆಂಗಳೂರು 
ರಾಜ್ಯ

Bengaluru's Diwali: 'ಬೆಳಕಿನ ಚಿತ್ತಾರ'ದಲ್ಲಿ ಝಗಮಗಿಸಿದ ಬೆಂಗಳೂರು; ಸ್ಟನ್ನಿಂಗ್ ವಿಡಿಯೋ; ಬೆರಗಾದ ನಿರ್ಮಲಾ ಸೀತಾರಾಮನ್!

ಈ ವೀಡಿಯೊ ಸಾಮಾಜಿಕ ಮಾಧ್ಯಮ ಬಳಕೆದಾರರನ್ನು ಮಾತ್ರವಲ್ಲದೇ ಕೇಂದ್ರ ಹಣಕಾಸು ಮತ್ತು ಕಾರ್ಪೊರೇಟ್ ವ್ಯವಹಾರಗಳ ಸಚಿವೆ ನಿರ್ಮಲಾ ಸೀತಾರಾಮನ್ ಅವರನ್ನು ಆಕರ್ಷಿಸಿದೆ.

ಬೆಂಗಳೂರು: ರಾಜ್ಯ ರಾಜಧಾನಿಯಲ್ಲಿ 'ಬೆಳಕಿನ ಹಬ್ಬ' ದೀಪಾವಳಿ ಆಚರಣೆಯ ಕುರಿತು ಬೆಂಗಳೂರಿನ ಶ್ರೀಹರಿ ಕಾರನಾಥ್ ಸೆರೆಹಿಡಿದಿರುವ ಅತ್ಯಾಕರ್ಷಕ ವೀಡಿಯೊವೊಂದು ಸಾಮಾಜಿಕ ಮಾಧ್ಯಮದಲ್ಲಿ ಸಖತ್ ವೈರಲ್ ಆಗಿದೆ.

ಕರ್ನಾಟಕ ಪ್ರವಾಸೋದ್ಯಮಕ್ಕೆ ಸಂಬಂಧಿಸಿದ DGCA-ಪ್ರಮಾಣೀಕೃತ ಡ್ರೋನ್ ಪೈಲಟ್ ಆಗಿರುವ ಕಾರನಾಥ್, ಪಟಾಕಿಗಳಿಂದ ಆಗಸದಲ್ಲಿ ಮೂಡಿದ ಚಿತ್ತಾರಗಳು, ವಿದ್ಯುತ್ ದೀಪಗಳಿಂದ ಝಗಮಗಿಸಿದ ಬೆಂಗಳೂರನ್ನು ಡ್ರೋನ್ ಹೈಪರ್‌ಲ್ಯಾಪ್ಸ್ (Drone Hyperlapse)ಯಿಂದ ಸೆರೆ ಹಿಡಿದ ವಿಡಿಯೋವನ್ನು ಸಾಮಾಜಿಕ ಜಾಲತಾಣ ಎಕ್ಸ್ ನಲ್ಲಿ ಹಂಚಿಕೊಂಡಿದ್ದಾರೆ.

ಈ ವೀಡಿಯೊ ಸಾಮಾಜಿಕ ಮಾಧ್ಯಮ ಬಳಕೆದಾರರನ್ನು ಮಾತ್ರವಲ್ಲದೇ ಕೇಂದ್ರ ಹಣಕಾಸು ಮತ್ತು ಕಾರ್ಪೊರೇಟ್ ವ್ಯವಹಾರಗಳ ಸಚಿವೆ ನಿರ್ಮಲಾ ಸೀತಾರಾಮನ್ ಅವರನ್ನು ಆಕರ್ಷಿಸಿದೆ.

ಈ ವಿಡಿಯೋವನ್ನು ಸಾಮಾಜಿಕ ಜಾಲತಾಣ ಎಕ್ಸ್ ನಲ್ಲಿ ಹಂಚಿಕೊಂಡಿರುವ ನಿರ್ಮಲಾ ಸೀತಾರಾಮನ್, ಇದು ಅತ್ಯಾದ್ಬುತವಾಗಿ ಮೂಡಿಬಂದಿದೆ. ಕ್ಯಾನ್ವಾಸ್ ಕಲಾತ್ಮಕವಾಗಿದೆ. ಉತ್ತಮ ಪ್ರಯತ್ನ" ಎಂದು ಸೀತಾರಾಮನ್ ಬರೆದುಕೊಂಡಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಪ್ರದೋಶ್ ಮಾಫಿ ಸಾಕ್ಷಿ ಅರ್ಜಿ ಅಂಗೀಕರಿಸಿದ ಕೋರ್ಟ್; 'ದಾಸ'ನಿಗೆ ಬಿಗ್ ಶಾಕ್!

'ಕಾವೇರಿ' ವಿಚಾರದಲ್ಲಿ ಕರ್ನಾಟಕಕ್ಕೆ ಮತ್ತೆ ಶಾಕ್: ತಮಿಳುನಾಡಿಗೆ ನೀರು ಬಿಡಬೇಕೆಂಬ CWRC ಆದೇಶ ಎತ್ತಿಹಿಡಿದ CWMA

ಬೆಂಗಳೂರು: ಸಿಗ್ನಲ್‌ನಲ್ಲಿ ನಿಂತಿದ್ದ ಬೈಕ್‌ಗೆ ವೇಗವಾಗಿ ಬಂದ ಕಾರು ಡಿಕ್ಕಿ, ಹೇರ್ ಸ್ಟೈಲಿಸ್ಟ್ ಸಾವು; Video

BPSC ಪರೀಕ್ಷೆ ವಿವಾದ: ಬಿಹಾರ ಸಿಎಂ ನಿವಾಸದ ಬಳಿ ಬ್ಯಾರಿಕೇಡ್ ಮುರಿದ ವಿದ್ಯಾರ್ಥಿಗಳು, ಜಲಫಿರಂಗಿಗೆ ಜಗ್ಗದೆ ರೇನ್ ಡ್ಯಾನ್ಸ್ ಮಾಡಿ ಪ್ರತಿಭಟನೆ!

'ಕಾಂಗ್ರೆಸ್ ಸರ್ಕಾರದ ವೈಫಲ್ಯ' ವಿರೋಧಿಸಿ ಸೆಪ್ಟೆಂಬರ್ 1 ರಿಂದ 10ರವರೆಗೆ ರಾಯಚೂರಿನಿಂದ ಬಳ್ಳಾರಿಗೆ BJP-JDS ಪಾದಯಾತ್ರೆ!