ಉದ್ಯಮಿ ಹರ್ಷ್‌ ಗೋಯೆಂಕಾ 
ರಾಜ್ಯ

ಕಿರಣ್ ಮಜುಂದಾರ್ ಶಾ ಕುರಿತು ಟೀಕೆ: DCM ಡಿ.ಕೆ ಶಿವಕುಮಾರ್ ವಿರುದ್ಧ ಉದ್ಯಮಿ ಹರ್ಷ್‌ ಗೋಯೆಂಕಾ ಕಿಡಿ

ನಮ್ಮ ರಾಜಕಾರಣಿಗಳ ಚರ್ಮ ಎಷ್ಟು ತೆಳುವಾಗಿದೆ ನೋಡಿ. ಕಿರಣ್‌ ಮಜುಂದಾರ್‌ ಶಾ ಅವರು ಬೆಂಗಳೂರಿನ ಮೂಲಸೌಲಭ್ಯ ಸಮಸ್ಯೆ ಕುರಿತು ಪ್ರಶ್ನಿಸಿದಾಗ ಅದನ್ನು ಸರಿಪಡಿಸುವ ಬದಲು ರಾಜಕಾರಣಕ್ಕೆ ಇಳಿದರು.

ಬೆಂಗಳೂರು: ಬೆಂಗಳೂರಿನ ಮೂಲಭೂತ ಸಮಸ್ಯೆ ಕುರಿತು ಧ್ವನಿ ಎತ್ತಿದ ಬಯೋಕಾನ್‌ ಮುಖ್ಯಸ್ಥೆ ಕಿರಣ್‌ ಮಜುಂದಾರ್‌ ಶಾ ಅವರನ್ನು ಟೀಕಿಸಿದ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್‌ ವಿರುದ್ಧ ಆರ್‌ಪಿಜಿ ಎಂಟರ್‌ಪ್ರೈಸಸ್‌ ಮುಖ್ಯಸ್ಥ, ಉದ್ಯಮಿ ಹರ್ಷ್‌ ಗೋಯೆಂಕಾ ಅವರು ತೀವ್ರವಾಗಿ ಕಿಡಿಕಾರಿದ್ದಾರೆ.

ಸಾಮಾಜಿಕ ಜಾಲತಾಣ ಎಕ್ಸ್ ನಲ್ಲಿ ಪೋಸ್ಟ್ ಮಾಡಿರುವ ಅವರು, ಸಮಸ್ಯೆಯನ್ನು ಬಗೆಹರಿಸುವ ಬದಲು ಆ ಕುರಿತು ಪ್ರಶ್ನೆ ಮಾಡುವವರ ಮೇಲೆ ದಾಳಿ ನಡೆಸಲಾಗುತ್ತದೆ ಎಂದು ಅಸಮಾದಾನ ವ್ಯಕ್ತಪಡಿಸಿದ್ದಾರೆ.

ನಮ್ಮ ರಾಜಕಾರಣಿಗಳ ಚರ್ಮ ಎಷ್ಟು ತೆಳುವಾಗಿದೆ ನೋಡಿ. ಕಿರಣ್‌ ಮಜುಂದಾರ್‌ ಶಾ ಅವರು ಬೆಂಗಳೂರಿನ ಮೂಲಸೌಲಭ್ಯ ಸಮಸ್ಯೆ ಕುರಿತು ಪ್ರಶ್ನಿಸಿದಾಗ ಅದನ್ನು ಸರಿಪಡಿಸುವ ಬದಲು ರಾಜಕಾರಣಕ್ಕೆ ಇಳಿದರು. ಈಗ ಧನಾತ್ಮಕ ಟ್ವೀಟ್‌ಗಳನ್ನು ಮಾಡುವಂತೆ ಆಕೆ ಮೇಲೆ ಒತ್ತಡ ಹಾಕುತ್ತಿದ್ದಾರೆ. ಸಮಸ್ಯೆಗಳನ್ನು ಬಗೆಹರಿಸುವ ಬದಲು ಆ ಕುರಿತು ಟೀಕೆ ಮಾಡುವವರ ಮೇಲೆ ದಾಳಿ ಮಾಡಿ ಎಂಬ ಭಾವನೆಯ ಮನಸ್ಥಿತಿ ಇದು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಬೆಂಗಳೂರಿನ ರಸ್ತೆ, ಮೂಲಸೌಲಭ್ಯ ವಿರುದ್ಧ ಧ್ವನಿ ಎತ್ತಿದ್ದ ಉದ್ಯಮಿಗಳಾದ ಕಿರಣ್‌ ಮಜುಂದಾರ್‌ ಶಾ, ಮೋಹನ್‌ ದಾಸ್‌ ಪೈ ವಿರುದ್ಧ ಡಿ.ಕೆ.ಶಿವಕುಮಾರ್‌ ತೀವ್ರ ಅಸಮಾಧಾನ ಹೊರಹಾಕಿದ್ದರು. ಬಿಜೆಪಿ ಸರ್ಕಾರ ಇದ್ದಾಗ ಯಾಕೆ ಈ ವಿಚಾರವಾಗಿ ಧ್ವನಿ ಎತ್ತಲಿಲ್ಲ ಎಂದು ಪ್ರಶ್ನಿಸಿದ್ದರು.

ಈ ಕುರಿತು ಸಾಮಾಜಿಕ ಜಾಲತಾಣದಲ್ಲಿ ಪ್ರತಿಕ್ರಿಯಿಸಿದ್ದ ಕಿರಣ್‌ ಮಜುಂದಾರ್‌ ಶಾ ಅವರು, ನಾನು ಬಿಜೆಪಿ-ಜೆಡಿಎಸ್‌ ಸಮ್ಮಿಶ್ರ ಸರ್ಕಾರದಲ್ಲೂ ಮೂಲಸೌಲಭ್ಯ ವಿಚಾರವಾಗಿ ಧ್ವನಿ ಎತ್ತಿದ್ದೆ ಎಂದು ಹೇಳಿಕೊಂಡಿದ್ದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಬಿಜೆಪಿ ಸಂಸದೀಯ ಮಂಡಳಿಯಲ್ಲಿ ಮಹತ್ತರ ಬದಲಾವಣೆ ಸಾಧ್ಯತೆ; ನಾಲ್ವರು ಮುಖ್ಯಮಂತ್ರಿಗಳಿಗೆ ಸ್ಥಾನ?

ಇರಾನ್‌ ತೈಲ ವಹಿವಾಟಿಗೆ ಅಮೆರಿಕಾ ಬ್ರೇಕ್: ಭಾರತದ 4 ಕಂಪನಿಗಳು ಕಪ್ಪುಪಟ್ಟಿಗೆ, 3 ಪ್ರಜೆಗಳ ಮೇಲೂ ನಿರ್ಬಂಧ..!

"ಮದುವೆ ಅಂದ್ರೆ ಗುಲಾಮಗಿರಿಯಲ್ಲ, ಮನೆಗೆಲಸ ಮಾಡು-ಅತ್ತೆ-ಮಾವನ ನೋಡ್ಕೋ ಅನ್ನೋಕೆ ಗಂಡನಿಗೆ ಹಕ್ಕಿಲ್ಲ": ಹೈಕೋರ್ಟ್ ಮಹತ್ವದ ತೀರ್ಪು..!

ಬಿಡದಿ ಟೌನ್‌ಶಿಪ್‌ ಯೋಜನೆ: ರೈತರ ಭೂಮಿ ಕಸಿಯಲ್ಲ, denotification ಮಾಡಲ್ಲ- ಸಿಎಂ ಡಿಕೆ. ಶಿವಕುಮಾರ್ ಸ್ಪಷ್ಟನೆ

Operation Sindoor; Kirana Hills ಪರಮಾಣು ನೆಲೆಗೆ ಅಪ್ಪಳಿಸಿದ ಭಾರತದ ಡ್ರೋನ್? ಬೆಚ್ಚಿಬಿದ್ದ ಪಾಕಿಸ್ತಾನ..! Indian Army ಹೇಳಿದ್ದೇನು?