ಡಿಸಿಎಂ ಡಿಕೆ.ಶಿವಕುಮಾರ್ ಅವರನ್ನು ಭೇಟಿ ಮಾಡಿದ ಕಿರಣ್ ಮಜುಂದಾರ್ ಶಾ. 
ರಾಜ್ಯ

ಬೆಂಗಳೂರು ಮೂಲಸೌಕರ್ಯ ವಿಚಾರ: ವಾಕ್ಸಮರ ಮರೆತು ಕುಟುಂಬ ಕಾರ್ಯಕ್ರಮಕ್ಕೆ CM-DCMಗೆ ಕಿರಣ್ ಶಾ ಆಹ್ವಾನ

ಬೆಂಗಳೂರು ರಸ್ತೆ ಗುಂಡಿ ಸಮಸ್ಯೆ, ಮೂಲಸೌಕರ್ಯ ವಿಚಾರಕ್ಕೆ ರಾಜ್ಯ ಸರ್ಕಾರವನ್ನು ಟೀಕಿಸಿದ್ದ ಬಯೋಕಾನ್ ಕಂಪನಿ ಮುಖ್ಯಸ್ಥೆ ಕಿರಣ್ ಮಜುಂದಾರ್ ಶಾ ಅವರು ಮಂಗಳವಾರ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಉಪ ಮುಖ್ಯಮಂತ್ರಿ ಡಿಕೆ.ಶಿವಕುಮಾರ್ ಅವರನ್ನು ಭೇಟಿ ಮಾಡಿದರು.

ಬೆಂಗಳೂರು: ಬೆಂಗಳೂರು ರಸ್ತೆ ಗುಂಡಿ ಸಮಸ್ಯೆ, ಮೂಲಸೌಕರ್ಯ ವಿಚಾರಕ್ಕೆ ರಾಜ್ಯ ಸರ್ಕಾರವನ್ನು ಟೀಕಿಸಿದ್ದ ಬಯೋಕಾನ್ ಕಂಪನಿ ಮುಖ್ಯಸ್ಥೆ ಕಿರಣ್ ಮಜುಂದಾರ್ ಶಾ ಅವರು ಮಂಗಳವಾರ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಉಪ ಮುಖ್ಯಮಂತ್ರಿ ಡಿಕೆ.ಶಿವಕುಮಾರ್ ಅವರನ್ನು ಭೇಟಿ ಮಾಡಿದರು.

ಕಿರಣ್ ಶಾ ಹಾಗೂ ಉದ್ಯಮಿ ಮೋಹನ್ ದಾಸ್ ಪೈ ಸತತವಾಗಿ ಬೆಂಗಳೂರಿನ ಸಮಸ್ಯೆಗಳ ಕುರಿತು ರಾಜ್ಯ ಸರ್ಕಾರವನ್ನು ಟೀಕಿಸುತ್ತಿದ್ದು, ಇದಕ್ಕೆ ಸರ್ಕಾರದ ಪ್ರತಿನಿಧಿಗಳೂ ತಿರುಗೇಟು ನೀಡಿದ್ದರು.

ಈ ಬೆನ್ನಲ್ಲೇ ಕಿರಣ್ ಶಾ ಅವರು ಸಿಎಂ ಹಾಗೂ ಡಿಎಂರನ್ನು ಭೇಟಿ ಮಾಡಿದ್ದು, ಸೋದರಳಿಯನ ಮದುವೆಗೆ ಆಹ್ವಾನಿಸಿ ದೀಪಾವಳಿ ಹಬ್ಬದ ಶುಭಾಶಯಗಳನ್ನು ತಿಳಿಸಿದ್ದಾರೆಂದು ಮೂಲಗಳಿಂದ ತಿಳಿದುಬಂದಿದೆ.

ಮೊದಲಿಗೆ ಮುಖ್ಯಮಂತ್ರಿಗಳನ್ನು ಅವರ ಅಧಿಕೃತ ನಿವಾಸದಲ್ಲಿ ಕಿರಣ್ ಶಾ ಅವರು ಭೇಟಿ ಮಾಡಿದರು. ಈ ಸಂದರ್ಭದಲ್ಲಿ ವಿಧಾನಪರಿತ್ತಿನ ಅಧ್ಯಕ್ಷ ಬಸವರಾಜ್ ಎಸ್ ಹೊರಟ್ಟಿ ಕೂಡ ಹಾಜರಿದ್ದರು.

ಸಿದ್ದರಾಮಯ್ಯ ಅವರೊಂದಿಗಿನ ಸಭೆ ತ್ವರಿತವಾಗಿದ್ದರೂ, ಸದಾಶಿವನಗರದ ನಿವಾಸದಲ್ಲಿ ಡಿಕೆ.ಶಿವಕುಮಾರ್ ಅವರನ್ನು ಬೇಟಿ ಮಾಡಿದ ಅವರು, ಹೆಚ್ಚಿನ ಸಮಯ ಕಳೆದರು ಎಂದು ತಿಳಿದುಬಂದಿದೆ.

ಸಭೆಯ ನಂತರ ಡಿಕೆ.ಶಿವಕುಮಾರ್ ಅವರು ಎಕ್ಸ್ ನಲ್ಲಿ ಪೋಸ್ಟ್ ಮಾಡಿದ್ದು, ಇಂದು ನನ್ನ ನಿವಾಸದಲ್ಲಿ ಉದ್ಯಮಿ ಮತ್ತು ಬಯೋಕಾನ್ ಸಂಸ್ಥಾಪಕಿ ಕಿರಣ್ ಶಾ ಅವರನ್ನು ಭೇಟಿಯಾಗಲು ಸಂತೋಷವಾಯಿತು. ಬೆಂಗಳೂರಿನ ಬೆಳವಣಿಗೆ, ನಾವೀನ್ಯತೆ ಮತ್ತು ಕರ್ನಾಟಕದ ಬೆಳವಣಿಗೆಯ ಮುಂದಿನ ಹಾದಿಯ ಕುರಿತು ನಾವು ಉತ್ತಮ ಚರ್ಚೆ ನಡೆಸಿದ್ದೆವು ಎಂದು ಹೇಳಿದ್ದಾರೆ.

ಡಿಕೆ.ಶಿವಕುಮಾರ್ ಅವರ ಭೇಟಿ ಬಳಿಕ ಕಿರಣ್ ಶಾ ಅವರು, ಕೈಗಾರಿಕಾ ಸಚಿವ ಎಂಬಿ ಪಾಟೀಲ್ ಅವರನ್ನು ಭೇಟಿ ಮಾಡಿ ಆಹ್ವಾನ ನೀಡಿದರು.

ಭೇಟಿ ಕುರಿತು ಮಾತನಾಡಿರುವ ಎಂಬಿ.ಪಾಟೀಲ್ ಅವರು, ನಗರದಲ್ಲಿ ಹೆಚ್ಚುತ್ತಿರುವ ಮೂಲಸೌಕರ್ಯ ಅಗತ್ಯಗಳನ್ನು ಪರಿಹರಿಸುವುದು, ಅದರ ನಾವೀನ್ಯತೆ ಪರಿಸರ ವ್ಯವಸ್ಥೆಯನ್ನು ಬಲಪಡಿಸುವುದು. ತಂತ್ರಜ್ಞಾನ ಮತ್ತು ಸಂಶೋಧನೆಯ ಮೂಲಕ ಕರ್ನಾಟಕದ ಬೆಳವಣಿಗೆಯನ್ನು ಮುನ್ನಡೆಸುವ ಕುರಿತು ಅವರು ಸಂಕ್ಷಿಪ್ತವಾಗಿ ಅಭಿಪ್ರಾಯಗಳನ್ನು ವಿನಿಮಯ ಮಾಡಿಕೊಂಡರು ಎಂದು ಹೇಳಿದ್ದಾರೆ.

ನಂತರ ಕಿರಣ್ ಶಾ ಅವರು, ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಮತ್ತು ಕೇಂದ್ರ ಸಚಿವ ಎಚ್‌ಡಿ ಕುಮಾರಸ್ವಾಮಿ ಸೇರಿದಂತೆ ಇತರ ನಾಯಕರನ್ನೂ ಕೂಡ ಭೇಟಿಯಾದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ವರ್ಷಾಂತ್ಯದ ವೇಳೆಗೆ ಭಾರತ ರಷ್ಯಾದ ತೈಲ ಆಮದನ್ನು 'ಹಂತ ಹಂತವಾಗಿ ನಿಲ್ಲಿಸಲಿದೆ ': ಪುನರುಚ್ಛರಿಸಿದ ಟ್ರಂಪ್

ತಂದೆ ರಾಜಕೀಯ ಜೀವನ ಮುಗಿಯಿತು; ಯತೀಂದ್ರ ಹೇಳಿಕೆಯಿಂದ ಸಂಚಲನ, ರಾಜಕೀಯ ಜೀವನದ ಕೊನೆಗಾಲದಲ್ಲೂ ಡಿಕೆಶಿಗೆ ಚೆಕ್‌ಮೇಟ್ ನೀಡಲು ಸಿದ್ದು ಟೀಮ್ ಮುಂದು..!

ಬ್ಯುಸಿನೆಸ್ ಕಾರಿಡಾರ್'ಗಾಗಿ ಭೂಮಿ ಕಳೆದುಕೊಂಡವರಿಗೆ 3 ಪಟ್ಟು ಪರಿಹಾರ: ರಾಜ್ಯ ಸರ್ಕಾರ

'ಮಹಾತ್ಮ ಗಾಂಧಿ ಕೂತ ಸ್ಥಾನದಲ್ಲಿ ಇಂದು ಖರ್ಗೆ ಕೂತಿದ್ದಾರೆ: ಅಡ್ವಾಣಿ ಸಾಧ್ಯವಿಲ್ಲ ಎಂದಿದ್ದನ್ನು ಖರ್ಗೆ ಮಾಡಿ ತೋರಿಸಿದ್ದಾರೆ'

ವಂಚನೆ ಪ್ರಕರಣದಲ್ಲಿ ದೋಷಿಯಾಗಿದ್ದ RJD ಮಾಜಿ ಶಾಸಕ ಅನಿಲ್ ಸಹಾನಿ BJP ಸೇರ್ಪಡೆ

SCROLL FOR NEXT