ಸಂಗ್ರಹ ಚಿತ್ರ 
ರಾಜ್ಯ

ವಿಜಯಪುರದಲ್ಲಿ ಕಂಪಿಸಿದ ಭೂಮಿ; ರಿಕ್ಟರ್ ಮಾಪಕದಲ್ಲಿ 2.9 ತೀವ್ರತೆ ದಾಖಲು

'ಭೂಕಂಪದ ತೀವ್ರತೆ ಕಡಿಮೆಯಾಗಿದ್ದು, ಭೂಕಂಪನದ ಕೇಂದ್ರಬಿಂದುದಿಂದ 50-60 ಕಿ.ಮೀ. ದೂರದವರೆಗೆ ಕಂಪನದ ಅನುಭವ ಆಗಿರಬಹುದು ಎಂದು ಅದು ಹೇಳಿದೆ.

ವಿಜಯಪುರ: ವಿಜಯಪುರ ಜಿಲ್ಲೆಯಲ್ಲಿ ಬುಧವಾರ 2.9 ತೀವ್ರತೆಯ ಭೂಕಂಪ ದಾಖಲಾಗಿದೆ. ಕಡಿಮೆ ತೀವ್ರತೆ ಇರುವುದರಿಂದ ಜನರು ಭಯಭೀತರಾಗುವ ಅಗತ್ಯವಿಲ್ಲ ಎಂದು ಕರ್ನಾಟಕ ರಾಜ್ಯ ನೈಸರ್ಗಿಕ ವಿಕೋಪ ಉಸ್ತುವಾರಿ ಕೇಂದ್ರವು (ಕೆಎಸ್‌ಎನ್‌ಡಿಎಂಸಿ) ತಿಳಿಸಿದೆ.

ಬೆಳಿಗ್ಗೆ 07.43ಕ್ಕೆ ಭೂಕಂಪ ಸಂಭವಿಸಿದ್ದು, ವಿಜಯಪುರ ಜಿಲ್ಲೆಯ ಬಸವನ ಬಾಗೇವಾಡಿ ತಾಲ್ಲೂಕಿನ ಯರನಾಳ್ ಗ್ರಾಮ ಪಂಚಾಯಿತಿಯ ಹತ್ತರ್ಕಿಹಾಳ್ ಗ್ರಾಮದ ವಾಯುವ್ಯಕ್ಕೆ 2.5 ಕಿ.ಮೀ ದೂರದಲ್ಲಿ ಮತ್ತು 05 ಕಿ.ಮೀ ಆಳದಲ್ಲಿ ಭೂಕಂಪದ ಕೇಂದ್ರಬಿಂದು ಪತ್ತೆಯಾಗಿದೆ ಎಂದು ಕೆಎಸ್‌ಎನ್‌ಡಿಎಂಸಿ ಹೇಳಿಕೆಯಲ್ಲಿ ತಿಳಿಸಿದೆ.

'ಭೂಕಂಪದ ತೀವ್ರತೆ ಕಡಿಮೆಯಾಗಿದ್ದು, ಭೂಕಂಪನದ ಕೇಂದ್ರಬಿಂದುದಿಂದ 50-60 ಕಿ.ಮೀ. ದೂರದವರೆಗೆ ಕಂಪನದ ಅನುಭವ ಆಗಿರಬಹುದು ಎಂದು ಅದು ಹೇಳಿದೆ.

ಈ ರೀತಿಯ ಭೂಕಂಪವು ಸ್ಥಳೀಯ ಸಮುದಾಯಕ್ಕೆ ಯಾವುದೇ ಹಾನಿಯನ್ನುಂಟು ಮಾಡುವುದಿಲ್ಲ. ಏಕೆಂದರೆ, ತೀವ್ರತೆ ಕಡಿಮೆ ಇರುತ್ತದೆ. ಆದರೆ, ಭೂಮಿ ಕಂಪಿಸಿದ ಅನುಭವವಾಗಬಹುದು. ಭೂಕಂಪದ ಕೇಂದ್ರಬಿಂದುವು ಭೂಕಂಪನ ವಲಯ III ರಲ್ಲಿ ಬರುತ್ತದೆ ಮತ್ತು ಟೆಕ್ಟೋನಿಕ್ ನಕ್ಷೆಯ ಪ್ರಕಾರ, ಈ ಪ್ರದೇಶವು ಯಾವುದೇ ರಚನಾತ್ಮಕ ಸ್ಥಗಿತಗಳಿಂದ ಮುಕ್ತವಾಗಿದೆ ಎಂದು ಅದು ಹೇಳಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಬಿಹಾರದ ಲಖಿಸರಾಯಿ ದೇವಾಲಯದ ಬಳಿ ಭೀಕರ ಕಾಲ್ತುಳಿತ: 7 ಭಕ್ತರ ಸಾವು, ಹಲವರಿಗೆ ಗಾಯ

ಬೆಂಗಳೂರಿನ ಕ್ಲಾರೆನ್ಸ್ ಶಾಲೆಯಲ್ಲಿ H1N1 ಫ್ಲೂ ಆತಂಕ: ಇಬ್ಬರಲ್ಲಿ ಸೋಂಕು ದೃಢ, 500ಕ್ಕೂ ಹೆಚ್ಚು ವಿದ್ಯಾರ್ಥಿಗಳು ಗೈರು, ಕಬಾಬ್ ಅಂಗಡಿಗಳ ತೆರವಿಗೆ ಆಗ್ರಹ!

'ನಾನು ನಲ್ಸಾರ್ ಆಹ್ವಾನವನ್ನೇ ಸ್ವೀಕರಿಸಿಲ್ಲ; ಅಲ್ಲಿಗೆ ಹೋಗುವ ಪ್ರಶ್ನೆಯೇ ಇಲ್ಲ': CJI ಸೂರ್ಯಕಾಂತ್ ಸ್ಪಷ್ಟನೆ

ಚಾಮರಾಜನಗರ ಶೂಟೌಟ್‌ ಕೇಸ್: ‘ಮೃತರು ರೈತರೇ ಹೊರತು ಬೇಟೆಗಾರರಲ್ಲ’; ಮೂವರು ತಮಿಳರ ಹತ್ಯೆಗೆ ಸಿಎಂ ವಿಜಯ್ ತೀವ್ರ ಖಂಡನೆ, ಉನ್ನತ ಮಟ್ಟದ ತನಿಖೆಗೆ ಆಗ್ರಹ..!

ಪರೀಕ್ಷೆ ಅಕ್ರಮ; ಜಾರ್ಖಂಡ್ ಸಿಎಂ ಸೊರೇನ್, ರಾಹುಲ್ ಗಾಂಧಿ, ತೇಜಸ್ವಿ ಯಾದವ್ ಪ್ರತಿಕೃತಿ ದಹಿಸಿ JPSC-JSSC ಆಕಾಂಕ್ಷಿಗಳ ಪ್ರತಿಭಟನೆ