ಮಳೆ 
ರಾಜ್ಯ

Karnataka Weather: ಬೆಂಗಳೂರಿನಲ್ಲಿ ಇಂದು ವರ್ಷಧಾರೆ; ಅಕ್ಟೋಬರ್ 29ರವರೆಗೆ ಮಳೆ ಸೂಚನೆ; 7 ಜಿಲ್ಲೆಗಳಿಗೆ ಆರೆಂಜ್ ಅಲರ್ಟ್

ಕರಾವಳಿಯಲ್ಲಿ ವರುಣಾರ್ಭಟ ಮುಂದುವರಿಯಲಿದೆ. ಬೆಂಗಳೂರು ಸೇರಿದಂತೆ ದಕ್ಷಿಣ ಒಳನಾಡು, ಉತ್ತರ ಒಳನಾಡು, ಕರಾವಳಿ ಮತ್ತು ಘಟ್ಟ ಪ್ರದೇಶಗಳಲ್ಲಿ ಭಾರೀ ಮಳೆಯಾಗುವ ಸಂಭವವಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.

ಬೆಂಗಳೂರು: ರಾಜಧಾನಿ ಬೆಂಗಳೂರು ಸೇರಿದಂತೆ ರಾಜ್ಯಾದ್ಯಂತ ಇಂದು ಭಾರೀ ಮಳೆಯಾಗುತ್ತಿದೆ. ಹವಾಮಾನ ಇಲಾಖೆ 7 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್​ ಘೋಷಿಸಿದೆ.

ಅರಬ್ಬಿ ಸಮುದ್ರದಲ್ಲಿ ಕಡಿಮೆ ಒತ್ತಡದ ಪ್ರದೇಶ ನಿರ್ಮಾಣವಾಗಿರುವುದರಿಂದ ಅಕ್ಟೋಬರ್ 29 ರವರೆಗೆ ಕರ್ನಾಟಕದಾದ್ಯಂತ ವ್ಯಾಪಕ ಮಳೆಯಾಗುವ ಸಾಧ್ಯತೆ ಇದೆ ಎಂದು ಭಾರತೀಯ ಹವಾಮಾನ ಇಲಾಖೆ (IMD) ಮುನ್ಸೂಚನೆ ನೀಡಿದೆ.

ಕರಾವಳಿಯಲ್ಲಿ ವರುಣಾರ್ಭಟ ಮುಂದುವರಿಯಲಿದೆ. ಬೆಂಗಳೂರು ಸೇರಿದಂತೆ ದಕ್ಷಿಣ ಒಳನಾಡು, ಉತ್ತರ ಒಳನಾಡು, ಕರಾವಳಿ ಮತ್ತು ಘಟ್ಟ ಪ್ರದೇಶಗಳಲ್ಲಿ ಭಾರೀ ಮಳೆಯಾಗುವ ಸಂಭವವಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.

ಬೆಂಗಳೂರಲ್ಲಿ ಗಾಳಿ ಮಳೆ

ಬೆಂಗಳೂರಿನಲ್ಲಿ ಇಂದು ಬೆಳಗ್ಗೆಯಿಂದಲೇ ತುಂತುರು ಮಳೆಯಾಗುತ್ತಿದೆ. ನಾಳೆ ಗಾಳಿ ಸಹಿತ ಸಾಧಾರಣ ಮಳೆಯ ಮುನ್ಸೂಚನೆ ಇದೆ. ಶೇಕಡಾ 86ರಷ್ಟು ಮಳೆಯಾಗುವ ಸಾಧ್ಯತೆ ಇದ್ದು, ಗಾಳಿಯ ವೇಗ ಗಂಟೆಗೆ 11-20 ಕಿ.ಮೀ. ಇರಲಿದೆ. ನಗರದ ಗರಿಷ್ಠ ಉಷ್ಣಾಂಶ 24 ಡಿಗ್ರಿ ಸೆಲ್ಸಿಯಸ್​ ಮತ್ತು ಕನಿಷ್ಠ ಉಷ್ಣಾಂಶ 20 ಡಿಗ್ರಿ ಸೆಲ್ಸಿಯಸ್ ದಾಖಲಾಗಲಿದೆ ಎಂದು ಹವಾವಾನ ಇಲಾಖೆ ತಿಳಿಸಿದೆ.

ಎಲ್ಲೆಲ್ಲಿ ಮಳೆ?

ದಕ್ಷಿಣ ಒಳನಾಡು ಭಾಗದ ಜಿಲ್ಲೆಗಳಾದ ಚಿಕ್ಕಮಗಳೂರು, ಶಿವಮೊಗ್ಗ, ಕೊಡಗು, ಚಾಮರಾಜನಗರ ಮತ್ತು ಹಾಸನದಲ್ಲಿ ಆರೆಂಜ್​ ಅಲರ್ಟ್​ ಇರಲಿದೆ ಎಂದು ಹವಾಮಾನ ಇಲಾಖೆ ಘೊಷಿಸಿದೆ. ಬೆಂಗಳೂರು ಗ್ರಾಮಾಂತರ, ಚಿಕ್ಕಬಳ್ಳಾಪುರ, ಚಿತ್ರದುರ್ಗ, ದಾವಣಗೆರೆ, ಕೋಲಾರ, ಮಂಡ್ಯ, ಮೈಸೂರು, ರಾಮನಗರ ಮತ್ತು ತುಮಕೂರಲ್ಲಿ ಸಣ್ಣ ಪ್ರಮಾಣದ ಮಳೆಯಾಗಲಿದೆ.

ಉತ್ತರ ಒಳನಾಡು ಜಿಲ್ಲೆಗಳಾದ ಬಾಗಲಕೋಟೆ, ಬೆಳಗಾವಿ, ಬೀದರ್​, ಧಾರವಾಡ, ಗದಗ, ಹಾವೇರಿ, ಕಲಬುರಗಿ, ಕೊಪ್ಪಳ, ರಾಯಚೂರು ಮತ್ತು ಯಾದಗಿರಿಲ್ಲಿ ಸಣ್ಣ ಪ್ರಮಾಣದ ಮಳೆಯಾಗಲಿದೆ. ಬಳ್ಳಾರಿ ಮತ್ತು ವಿಜಯನಗರದಲ್ಲಿ ಮೋಡ ಕವಿದ ವಾತಾವಣರಣ ಅಥವಾ ತುಂತುರು ಮಳೆಯ ನಿರೀಕ್ಷೆ ಇದೆ.

ಕೊಡಗು, ಹಾಸನ, ಚಿಕ್ಕಮಗಳೂರು ಮತ್ತು ಶಿವಮೊಗ್ಗದಂತಹ ಗುಡುಗು ಪ್ರದೇಶಗಳ ಜಿಲ್ಲೆಗಳಲ್ಲಿ ಸಂಜೆ ವೇಳೆ ಉತ್ತಮ ಮಳೆಯಾಗುವ ನಿರೀಕ್ಷೆಯಿದೆ.

ಕರಾವಳಿಯಲ್ಲಿ ಮಳೆ

ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಗಳಲ್ಲಿ ಭಾರಿ ಪ್ರಮಾಣದ ಮಳೆಯಾಗಲಿದ್ದು, ಆರೆಂಜ್​ ಅಲರ್ಟ್​ ಘೋಷಿಸಲಾಗಿದೆ. ಮಳೆ ಜೊತೆ ಗಾಳಿಯ ವೇಗ ಗಂಟೆಗೆ 35-45 ಕಿ.ಮೀ. ಇರುವ ಸಾಧ್ಯತೆ ಹಿನ್ನಲೆ ಮುನ್ನೆಚ್ಚರಿಕೆಯಾಗಿ ಸಮುದ್ರಕ್ಕೆ ಇಳಿಯದಂತೆ ಮೀನುಗಾರರಿಗೆ ಸೂಚಿಸಲಾಗಿದೆ. ಉತ್ತರ ಕನ್ನಡ ಜಿಲ್ಲೆಯಲ್ಲೂ ಸಾಧಾರಣ ಮಳೆಯಾಗಲಿದೆ.

ಮೀನುಗಾರರಿಗೆ ಎಚ್ಚರಿಕೆ

ಕರಾವಳಿಯಲ್ಲಿ ಗಾಳಿಯ ವೇಗ ಗಂಟೆಗೆ 55 ಕಿ.ಮೀ. ವೇಗದಲ್ಲಿ ಬೀಸುವ ಸಾಧ್ಯತೆ ಇರುವುದರಿಂದ ಅಕ್ಟೋಬರ್ 21 ರಿಂದ 23 ರವರೆಗೆ ಮೀನುಗಾರರು ಸಮುದ್ರಕ್ಕೆ ಇಳಿಯದಂತೆ ಐಎಂಡಿ ಎಚ್ಚರಿಕೆ ನೀಡಿದೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ತಂದೆಯ ರಾಜಕೀಯ ಜೀವನ ಮುಗಿಯಿತು; ಸತೀಶ್ ಜಾರಕಿಹೊಳಿ 'ಉತ್ತರಾಧಿಕಾರಿ': ಯತೀಂದ್ರ ಸಿದ್ದರಾಮಯ್ಯ ಹೇಳಿಕೆ; ಡಿಕೆಶಿ ಬಣಕ್ಕೆ ಶಾಕ್!

ದೀಪ ಹಚ್ಚೋಣ, ಇದು ಬೆಳಕಿನ ಅನ್ವೇಷಣೆಯೆಂಬ ಅನಂತ ಯಾನ (ತೆರೆದ ಕಿಟಕಿ)

PNB ವಂಚನೆ ಪ್ರಕರಣ: ಮೆಹುಲ್ ಚೋಕ್ಸಿ ಗಡಿಪಾರಿಗೆ ಬೆಲ್ಜಿಯಂ ಕೋರ್ಟ್ ಅನುಮೋದನೆ; 8 ವರ್ಷ ಭಾರತ ನಡೆಸಿದ್ದ ಹೋರಾಟ ಸಫಲ!

ಪಿಒಕೆಯಲ್ಲಿ ಎಲ್‌ಒಸಿ ಉದ್ದಕ್ಕೂ ಭಯೋತ್ಪಾದಕ ಶಿಬಿರಗಳು, ಉಡಾವಣಾ ಪ್ಯಾಡ್‌ಗಳು ಮತ್ತೆ ತಲೆ ಎತ್ತುತ್ತಿವೆ: ಗುಪ್ತಚರ ವರದಿ

BiggBoss Kannada 12: 'ತಪ್ಪು ಮಾಡ್ಬಿಟ್ಟೆ.. ಅಮ್ಮ-ಅಣ್ಣಂಗೆ ನನ್ನಿಂದ ಅವಮಾನ..'; ಬಿಕ್ಕಿ ಬಿಕ್ಕಿ ಅತ್ತ ಜಾಹ್ನವಿ

SCROLL FOR NEXT