ಸಂಗ್ರಹ ಚಿತ್ರ 
ರಾಜ್ಯ

ಅಕ್ರಮ ಗೋ ಸಾಗಣೆ: 10 ಕಿ.ಮೀ ಬೆನ್ನಟ್ಟಿ ಪರಾರಿಯಾಗುತ್ತಿದ್ದ ಆರೋಪಿ ಕಾಲಿಗೆ ಪೊಲೀಸರ​ ಗುಂಡೇಟು

ಕೇರಳದ ಕಾಸರಗೋಡು ಮೂಲದ ಅಬ್ದುಲ್ಲಾ (40) ಬಂಧಿತ ಆರೋಪಿ. ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರು ತಾಲ್ಲೂಕಿನಲ್ಲಿ ಮಂಗಳವಾರ ಸಂಜೆ ಈ ಘಟನೆ ನಡೆದಿದೆ, ಮತ್ತೊಬ್ಬ ಆರೋಪಿ ಪರಾರಿಯಾಗಿದ್ದಾನೆ.

ಪುತ್ತೂರು: ಅಕ್ರಮ ಗೋವು ಸಾಗಣೆಯಲ್ಲಿ ಭಾಗಿ, ತಪ್ಪಿಸಿಕೊಳ್ಳಲು ಯತ್ನಿಸುತ್ತಿದ್ದ ವ್ಯಕ್ತಿಯನ್ನು ಸಿನಿಮೀಯ ಶೈಲಿಯಲ್ಲಿ ಬೆನ್ನಟ್ಟಿ, ಕಾಲಿಗೆ ಗುಂಡಿ ಹಾರಿಸಿ ಬಂಧನಕ್ಕೊಳಪಡಿಸಿರುವ ಘಟನೆ ನಂಜನಗೂಡು ತಾಲೂಕಿನ ಹುಲ್ಲಹಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.

ಕೇರಳದ ಕಾಸರಗೋಡು ಮೂಲದ ಅಬ್ದುಲ್ಲಾ (40) ಬಂಧಿತ ಆರೋಪಿ. ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರು ತಾಲ್ಲೂಕಿನಲ್ಲಿ ಮಂಗಳವಾರ ಸಂಜೆ ಈ ಘಟನೆ ನಡೆದಿದೆ, ಮತ್ತೊಬ್ಬ ಆರೋಪಿ ಪರಾರಿಯಾಗಿದ್ದಾನೆ.

ಆರೋಪಿ ಐಸರ್​ ಲಾರಿಯಲ್ಲಿ ಸುಮಾರು 10 ಜಾನುವಾರುಗಳನ್ನು ಹಾಸನದಿಂದ ಕೇರಳಕ್ಕೆ ಸಾಗಾಟ ಮಾಡಲಾಗುತ್ತಿದ್ದ. ಈ ಬಗ್ಗೆ ಮಾಹಿತಿ ಪಡೆದ ಪೊಲೀಸರು ವಾಹನವನ್ನು ನಿಲ್ಲಿಸಲು ಸೂಚಿಸಿದಾಗ ಚಾಲಕ ನಿಲ್ಲಿಸದೇ ಮುಂದೆ ಸಾಗಿದ್ದಾರೆ. ಈ ವೇಳೆ ಪೊಲೀಸರು ಸುಮಾರು 10 ಕಿಮೀ ವರೆಗೂ ವಾಹನವನ್ನು ಬೆನ್ನಟ್ಟಿದ್ದಾರೆ.

ಬಳಿಕ ಲಾರಿಯನ್ನು ಅಡ್ಡಗಟ್ಟಿದ್ದಾರೆ. ಆದರೂ ನಿಲ್ಲದ ಚಾಲಕ ಪೊಲೀಸರಿಗೆ ಹಿಂಬದಿಯಿಂದ ಡಿಕ್ಕಿ ಹೊಡೆದಿದ್ದಾನೆ. ಬಳಿಕ ಪಿಎಸ್‌ಐ ಆರೋಪಿಯ ಮೇಲೆ ಎರಡು ಸುತ್ತು ಗುಂಡುಗಳನ್ನು ಫೈಯರ್ ಮಾಡಿದ್ದಾರೆ.

ಇದರಿಂದ ಒಂದು ಗುಂಡು ವಾಹನದ ಮೇಲೆ ಹಾಗೂ ಮತ್ತೊಂದು ಆರೋಪಿಯ ಕಾಲಿಗೆ ಬಿದ್ದಿದೆ. ಘಟನೆಯ ಸಮಯದಲ್ಲಿ ಮತ್ತೋರ್ವ ಆರೋಪಿ ಸ್ಥಳದಿಂದ ಪರಾರಿಯಾಗಿದ್ದಾನೆ.

ಬಂಧಿತ ಆರೋಪಿ ಅಬ್ದುಲ್ಲಾ ಮೂಲತಃ ಕೇರಳದ ಕಾಸರಗೋಡಿನಾಗಿದ್ದು, ಚಿಕಿತ್ಸೆಗಾಗಿ ಆತನನ್ನು ವೆನ್​ಲಾಕ್ ಆಸ್ಪತ್ರೆಗೆ ದಾಖಲಿಸಲಾಗಿದೆ.

ಈತನ ಮೇಲೆ ಈ ಹಿಂದೆ ಬೆಳ್ಳಾರೆ ಪೊಲೀಸ್ ಠಾಣೆಯಲ್ಲಿ ಗೋಹತ್ಯೆ ಕಾಯ್ದೆಯಡಿಯಲ್ಲಿ ಪ್ರಕರಣ ದಾಖಲಾಗಿದೆ. ಪ್ರಕರಣ ದಾಖಲಾಗಿದ್ದು, ತಲೆಮರೆಸಿಕೊಂಡಿರುವ ಆರೋಪಿಗಳನ್ನು ಪತ್ತೆಹಚ್ಚಲು ಪ್ರಯತ್ನಗಳು ನಡೆಯುತ್ತಿವೆ ಎಂದು ಪೊಲೀಸರು ತಿಳಿಸಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಕೋಗಿಲು ಅಕ್ರಮ ನಿವಾಸಿಗಳ ಪೌರತ್ವ ಪರಿಶೀಲಿಸಿ, ಎನ್‌ಐಎ ತನಿಖೆಗೆ ವಹಿಸಿ: ಆರ್‌. ಅಶೋಕ ಆಗ್ರಹ

ಕೊಯಮತ್ತೂರು: ತಮಿಳು ಮಾತನಾಡದಿದ್ದಕ್ಕೆ ವಲಸೆ ಕಾರ್ಮಿಕನಿಗೆ ಚಾಕು ಇರಿತ; ಆರೋಪಿಗಳಿಗೆ ಹುಡುಕಾಟ

Video: ಹಿಂದೂ ದೇವರಿಗೆ 'ಅವಮಾನ': ಹೈದರಾಬಾದ್ ಯೂಟ್ಯೂಬರ್ Anvesh ವಿರುದ್ಧ ಪೊಲೀಸ್ ದೂರು, ಕಾರಣ ನಟ ಶಿವಾಜಿ!

Osman Hadi ಕೊಲೆಗಾರ ಭಾರತದಲ್ಲಿದ್ದಾನೆ ಎಂದ ಬಾಂಗ್ಲಾದೇಶಕ್ಕೆ ತೀವ್ರ ಮುಖಭಂಗ; ದುಬೈನಲ್ಲಿ ಲೈವ್ ಬಂದು ಸ್ಪಷ್ಟನೆ..! ಹೇಳಿದ್ದೇನು?

ಮುಷ್ಕರದ ಬಿಸಿ, ಝೊಮ್ಯಾಟೊ, ಸ್ವಿಗ್ಗಿ ಸಿಬ್ಬಂದಿಗೆ ಹೆಚ್ಚಿನ ವೇತನ: ಹೊಸ ವರ್ಷದ ಮುನ್ನಾದಿನ ಗಿಗ್ ಕಾರ್ಮಿಕರಿಗೆ ಸಿಹಿಸುದ್ದಿ!

SCROLL FOR NEXT