ಸಾಂದರ್ಭಿಕ ಚಿತ್ರ 
ರಾಜ್ಯ

Bengaluru: ಶಿಕ್ಷಕಿಯ ಹೊಟ್ಟೆ ಕಿಚ್ಚು; ಪಶ್ಚಿಮ ಬಂಗಾಳದ ಮಹಿಳೆ ಮೇಲೆ ಮನೆಯಲ್ಲೇ ಸಾಮೂಹಿಕ ಅತ್ಯಾಚಾರ!

ಬೆಂಗಳೂರು ಉತ್ತರ ತಾಲೂಕಿನ ಗಂಗೊಂಡನಹಳ್ಳಿಯಲ್ಲಿ ಪಶ್ಚಿಮ ಬಂಗಾಳ ಮೂಲದ ಮಹಿಳೆ ಮೇಲೆ ಸಾಮೂಹಿಕ ಅತ್ಯಾಚಾರ ನಡೆದಿದೆ.

ಬೆಂಗಳೂರು: ಬೆಂಗಳೂರಿನಲ್ಲಿ ಮತ್ತೊಂದು ಅತ್ಯಾಚಾರ ಪ್ರಕರಣವೊಂದು ವರದಿಯಾಗಿದ್ದು, ಮಹಿಳೆಯ ಮನೆಯಲ್ಲೇ ಸಾಮೂಹಿಕ ಅತ್ಯಾಚಾರ ನಡೆಸಲಾಗಿದೆ ಎಂದು ಹೇಳಲಾಗಿದೆ.

ಬೆಂಗಳೂರು ಉತ್ತರ ತಾಲೂಕಿನ ಗಂಗೊಂಡನಹಳ್ಳಿಯಲ್ಲಿ ಪಶ್ಚಿಮ ಬಂಗಾಳ ಮೂಲದ ಮಹಿಳೆ ಮೇಲೆ ಸಾಮೂಹಿಕ ಅತ್ಯಾಚಾರ ನಡೆದಿದೆ.

ಮನೆಗೆ ನುಗ್ಗಿ ಮೂವರು ದುಷ್ಕರ್ಮಿಗಳು ಮಹಿಳೆ ಮೇಲೆ ಅತ್ಯಾಚಾರವೆಸಗಿದ್ದಾರೆ. ಮಹಿಳೆ ವಾಸವಿದ್ದ ಬಾಡಿಗೆ ಮನೆಯಲ್ಲೇ ಆಕೆಯ ಮೇಲೆ ಅತ್ಯಾಚಾರ ನಡೆದಿದೆ.

ಸಂತ್ರಸ್ತೆ ನೀಡಿರುವ ದೂರಿನ ಮೇರೆಗೆ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ. ಮಾದನಾಯಕನಹಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಮಹಿಳೆಯನ್ನು ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಲಾಗುತ್ತಿದೆ.

ಮದ್ಯಪಾನ ಮಾಡಿದ್ದ ಆರೋಪಿಗಳು

ಮಹಿಳೆ ದೂರಿನಲ್ಲಿರುವಂತೆ ಆರೋಪಿಗಳು ಅಪರಾಧ ಎಸಗುವ ಮುನ್ನ ಮದ್ಯಪಾನ ಮಾಡಿದ್ದರು ಎನ್ನಲಾಗಿದೆ. ಆರೋಪಿಗಳು ಪ್ರಕರಣ ನಂತರ ನಾಪತ್ತೆಯಾಗಿದ್ದಾರೆ, ಅವರನ್ನು ಹಿಡಿಯಲು ಪೊಲೀಸರು ಬಲೆ ಬೀಸಿದ್ದಾರೆ. ಮಹಿಳೆಗೂ ಹಾಗೂ ಈ ಯುವಕರಿಗೂ ಮೊದಲೇ ಪರಿಚಯವಿತ್ತೇ ಎನ್ನುವುದಿನ್ನೂ ದೃಢಪಟ್ಟಿಲ್ಲ. ಮಾದನಾಯಕನಹಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಇಬ್ಬರು ಆರೋಪಿಗಳ ಪತ್ತೆ, ಮೂರನೇ ಆರೋಪಿ ಪರಾರಿ

ಮಹಿಳೆ ದೂರು ನೀಡಿದ ನಂತರ ಪೊಲೀಸ್ ವರಿಷ್ಠಾಧಿಕಾರಿ ಸಿ.ಕೆ. ಬಾಬಾ ನೇತೃತ್ವದ ಪೊಲೀಸ್ ತಂಡ ಸ್ಥಳಕ್ಕೆ ಧಾವಿಸಿ, ಪರಿಸ್ಥಿತಿಯನ್ನು ಅವಲೋಕಿಸಿ, ರಾತ್ರಿಯಿಡೀ ಕಾರ್ಯಾಚರಣೆ ನಡೆಸಿದರು. ಬಳಿಕ ಕೆಲವೇ ಗಂಟೆಗಳಲ್ಲಿ ಇಬ್ಬರು ಆರೋಪಿಗಳನ್ನು ಪತ್ತೆ ಹಚ್ಚಿದ್ದಾರೆ. ಪರಾರಿಯಾಗಿರುವ ಇತರ ಮೂವರು ಆರೋಪಿಗಳನ್ನು ಪತ್ತೆಹಚ್ಚಲು ಪ್ರಯತ್ನಗಳು ನಡೆಯುತ್ತಿವೆ ಎಂದು ಮಾಹಿತಿ ನೀಡಿದ್ದಾರೆ.

ಶಿಕ್ಷಕಿಯ ಹೊಟ್ಟೆ ಕಿಚ್ಚು

ತನಿಖೆಯಲ್ಲಿ ಸಂತ್ರಸ್ಥ ಮಹಿಳೆ ಸಲೂನ್‌ನಲ್ಲಿ ಕೆಲಸ ಮಾಡುತ್ತಿದ್ದು, ಬಾಡಿಗೆ ಮನೆಯಲ್ಲಿ ವಾಸಿಸುತ್ತಿದ್ದಳು. ಆಕೆಯ ಸಲೂನ್ ಗೆ ಹಲವು ಗ್ರಾಹಕರು ಬರುತ್ತಿದ್ದರು, ಇದು ಇತರ ಬಾಡಿಗೆದಾರರನ್ನು ಕೆರಳಿಸಿತು. ಬಾಡಿಗೆದಾರರಲ್ಲಿ ಒಬ್ಬರಾದ ಶಿಕ್ಷಕಿ, ಕಟ್ಟಡ ಮಾಲೀಕರಿಗೆ ಪದೇ ಪದೇ ದೂರು ನೀಡಿದರೂ ಪ್ರಯೋಜನವಾಗಿರಲಿಲ್ಲ. ಬಳಿಕ ಆಕೆ ತನ್ನ ವಿದ್ಯಾರ್ಥಿಗೆ ಹೇಳಿ ಸಹಾಯವನ್ನು ಕೋರಿದ್ದರು.

ಆತ ತನ್ನ ಶಿಕ್ಷಕಿಯನ್ನು ಮೆಚ್ಚಿಸಲು ಸ್ಥಳೀಯ ಗೂಂಡಾಗಳಾದ ತನ್ನ ಸ್ನೇಹಿತರೊಂದಿಗೆ ಈ ಕೃತ್ಯವೆಸಗಿದ್ದಾನೆ. ಆರೋಪಿಯು ಮನೆಗೆ ನುಗ್ಗಿ, ಮಹಿಳೆಯನ್ನು ಬೆದರಿಸಿ, ಆಕೆಯ ಮೇಲೆ ಅತ್ಯಾಚಾರ ಮಾಡಿ, ನಗದು ಮತ್ತು ಮೊಬೈಲ್ ಫೋನ್‌ಗಳು ಸೇರಿದಂತೆ ಆಕೆಯ ಬೆಲೆಬಾಳುವ ವಸ್ತುಗಳನ್ನು ದೋಚಿ ಪರಾರಿಯಾಗಿದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ತಂದೆಯ ರಾಜಕೀಯ ಜೀವನ ಮುಗಿಯಿತು; ಸತೀಶ್ ಜಾರಕಿಹೊಳಿ 'ಉತ್ತರಾಧಿಕಾರಿ': ಯತೀಂದ್ರ ಸಿದ್ದರಾಮಯ್ಯ ಹೇಳಿಕೆ; ಡಿಕೆಶಿ ಬಣಕ್ಕೆ ಶಾಕ್!

PoK: ಎಲ್‌ಒಸಿ ಉದ್ದಕ್ಕೂ ಭಯೋತ್ಪಾದಕ ಶಿಬಿರಗಳು, ಉಡಾವಣಾ ಪ್ಯಾಡ್‌ಗಳು ಮತ್ತೆ ತಲೆ ಎತ್ತುತ್ತಿವೆ; ಗುಪ್ತಚರ ವರದಿ

ದೀಪ ಹಚ್ಚೋಣ, ಇದು ಬೆಳಕಿನ ಅನ್ವೇಷಣೆಯೆಂಬ ಅನಂತ ಯಾನ (ತೆರೆದ ಕಿಟಕಿ)

'ಇಸ್ಲಾಂ ರಾಜಕೀಯ' ಸನಾತನ ಧರ್ಮಕ್ಕೆ ಅತ್ಯಂತ ಅಪಾಯಕಾರಿ; ಹಲಾಲ್ ಬಗ್ಗೆ ಎಚ್ಚರ: ಸಿಎಂ ಯೋಗಿ ಆದಿತ್ಯನಾಥ್

PNB ವಂಚನೆ ಪ್ರಕರಣ: ಮೆಹುಲ್ ಚೋಕ್ಸಿ ಗಡಿಪಾರಿಗೆ ಬೆಲ್ಜಿಯಂ ಕೋರ್ಟ್ ಅನುಮೋದನೆ; 8 ವರ್ಷ ಭಾರತ ನಡೆಸಿದ್ದ ಹೋರಾಟ ಸಫಲ!

SCROLL FOR NEXT