ಚಿಕ್ಕಬಳ್ಳಾಪುರ: ಶಾಲಾ ಬಸ್ ಮತ್ತು ಬೈಕ್ ನಡುವೆ ಸಂಭವಿಸಿದ ಅಪಘಾತದಲ್ಲಿ ಇಬ್ಬರು ಮಕ್ಕಳು ಸೇರಿ ನಾಲ್ವರು ಸಾವನ್ನಪ್ಪಿರು ಘಟನೆ ಚಿಕ್ಕಬಳ್ಳಾಪುರ ಚಿಂತಾಮಣಿ ತಾಲೂಕು ಕೆಂಚಾರ್ಲಹಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯ ಬುರುಡುಗುಂಟೆ ಬಳಿ ನಡೆದಿದೆ. ಮೃತರನ್ನು ಹರೀಶ್, ಆರ್ಯ, ಬಾಲಾಜಿ ಮತ್ತು ವೆಂಕಟೇಶಪ್ಪ ಎಂದು ಗುರುತಿಸಲಾಗಿದೆ. ಮದುವೆ ಸಮಾರಂಭದಲ್ಲಿ ಭಾಗಿಯಾಗಲು ತಲಕಾಯಲಬೆಟ್ಟಕ್ಕೆ ಒಂದೇ ಬೈಕ್ ನಲ್ಲಿ ಮೂವರು ಮಕ್ಕಳು ಸೇರಿದಂತೆ ಇಬ್ಬರು ಪುರುಷರು ತೆರಳುತ್ತಿದ್ದರು. ಆದರೆ ಖಾಸಗಿ ಶಾಲಾ ಬಸ್ ಡಿಕ್ಕಿಯಾಗಿ ನಾಲ್ವರು ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಇನ್ನು ಪವಾಡ ಸದೃಶ್ಯ ಮಗುವೊಂದು ಪ್ರಾಣಾಪಾಯದಿಂದ ಪಾರಾಗಿದೆ. ಕೆಂಚಾರ್ಲಹಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ.