ಸಂಗ್ರಹ ಚಿತ್ರ 
ರಾಜ್ಯ

ಚಿಕ್ಕಮಗಳೂರು: ಭಾರೀ ಮಳೆಗೆ ಕೊಚ್ಚಿ ಹೋದ ಜಲ್ಲಿ ಕಲ್ಲು; ರೈಲ್ವೇ ಸಿಬ್ಬಂದಿ ಸಮಯಪ್ರಜ್ಞೆಯಿಂದ ತಪ್ಪಿದ ಭಾರೀ ಅನಾಹುತ..!

ಕಳೆದ ನಾಲ್ಕು ದಿನಗಳಿಂದ ಮಲೆನಾಡು ಹಾಗೂ ಬಯಲುಸೀಮೆ ಭಾಗದಲ್ಲಿ ಸುರಿಯುತ್ತಿರುವ ಧಾರಾಕಾರ ಮಳೆಯಿಂದ ಚಿಕ್ಕಮಗಳೂರು ತಾಲೂಕಿನ ಕಣಿವೆ ಗ್ರಾಮದಲ್ಲಿ‌ ರೈಲ್ವೇ ಹಳಿ ಲಯ ತಪ್ಪಿ ಹಳಿಗೆ ಹಾಕಿದ್ದ ಜಲ್ಲಿ ಕಲ್ಲುಗಳು ಕೊಚ್ಚಿ ಹೋಗಿತ್ತು.

ಬೆಂಗಳೂರು: ಭಾರೀ ಮಳೆಗೆ ರೈಲ್ವೆ ಹಳಿಗೆ ಹಾಕಿದ್ದ ಜಲ್ಲಿ ಕಲ್ಲು ಕೊಚ್ಚಿ ಹೋಗಿದ್ದು, ಈ ನಡುವೆ ರೈಲ್ವೇ ಸಿಬ್ಬಂದಿಯ ಸಮಯ ಪ್ರಜ್ಞೆಯಿಂದ ದೊಡ್ಡ ಅನಾಹುವೊಂದು ತಪ್ಪಿರುವ ಘಟನೆ ತಾಲೂಕಿನ ಕಣಿವೆ ಗ್ರಾಮದಲ್ಲಿ ನಡೆದಿದೆ.

ಕಳೆದ ನಾಲ್ಕು ದಿನಗಳಿಂದ ಮಲೆನಾಡು ಹಾಗೂ ಬಯಲುಸೀಮೆ ಭಾಗದಲ್ಲಿ ಸುರಿಯುತ್ತಿರುವ ಧಾರಾಕಾರ ಮಳೆಯಿಂದ ಚಿಕ್ಕಮಗಳೂರು ತಾಲೂಕಿನ ಕಣಿವೆ ಗ್ರಾಮದಲ್ಲಿ‌ ರೈಲ್ವೇ ಹಳಿ ಲಯ ತಪ್ಪಿ ಹಳಿಗೆ ಹಾಕಿದ್ದ ಜಲ್ಲಿ ಕಲ್ಲುಗಳು ಕೊಚ್ಚಿ ಹೋಗಿತ್ತು.

ಬುಧವಾರ ರಾತ್ರಿಯಿಡೀ ಸುರಿದ ಮಳೆಯಿಂದ ಕಾಲುವೆಯ ನೀರು ಉಕ್ಕಿ ಹರಿದ ಪರಿಣಾಮ ಹಳಿಯಲ್ಲಿದ್ದ ಜಲ್ಲಿ ಕಲ್ಲುಗಳು ಕೊಚ್ಚಿ ಹೋಗಿದ್ದವು.

ಈ ನಡುವೆ ಇಂದು ಬೆಳಗ್ಗೆ ಚಿಕ್ಕಮಗಳೂರಿನಿಂದ ಶಿವಮೊಗ್ಗ ಕಡೆಗೆ ಹೊರಟ್ಟಿದ್ದ ಪ್ಯಾಸೆಂಜರ್ ರೈಲು ಕಣಿವೆ ಬಳಿ ಆಗಮಿಸಿದೆ. ಈ ವೇಳೆ ರೈಲ್ವೇ ಸಿಬ್ಬಂದಿ ತಕ್ಷಣ ರೈಲು ನಿಲ್ಲಿಸುವಂತೆ ಲೋಕೋ ಪೈಲಟ್‌ಗೆ ಮಾಹಿತಿ ನೀಡಿದ್ದಾರೆ.

ಎಚ್ಚೆತ್ತ ಲೋಕೋ ಪೈಲಟ್ ರೈಲನ್ನು ನಿಲ್ಲಿಸಿದ್ದು. ಈ ವೇಳೆ ರೈಲ್ವೇ ಸಿಬ್ಬಂದಿಗಳು ತುರ್ತು ದುರಸ್ತಿ ಕಾರ್ಯ ಕೈಗೊಂಡು ರೈಲಿನ ಸುಗಮ ಸಂಚಾರಕ್ಕೆ ಅನುವು ಮಾಡಿಕೊಟ್ಟಿದ್ದಾರೆ. ತಾತ್ಕಾಲಿಕ ದುರಸ್ತಿ ಕಾರ್ಯ ಪೂರ್ಣಗೊಂಡ 30 ನಿಮಿಷಗಳ ಬಳಿಕ ರೈಲು ಶಿವಮೊಗ್ಗದತ್ತ ಪ್ರಯಾಣ ಬೆಳೆಸಿದೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಅಮೆರಿಕ ಜೊತೆ ವ್ಯಾಪಾರ ಒಪ್ಪಂದ: 'ನಮ್ಮ ತಲೆಗೇ ಬಂದೂಕು ಇಟ್ಟುಕೊಳ್ಳುವ ವ್ಯಾಪಾರ ಒಪ್ಪಂದಕ್ಕೆ ಭಾರತ ಸಹಿ ಹಾಕಲ್ಲ': ಪಿಯೂಷ್ ಗೋಯಲ್

ರಾಜ್ಯದಲ್ಲಿ 13 ಕಂಪನಿಗಳಿಂದ 27 ಸಾವಿರ ಕೋಟಿ ರೂ. ಹೂಡಿಕೆಗೆ ಸರ್ಕಾರ ಅಸ್ತು, 11 ಹೊಸ ಯೋಜನೆ!

ಗಾಯಕಿ ವಾರಿಜ ಶ್ರೀ ಜೊತೆ ಸಪ್ತಪದಿ ತುಳಿದ ಸಂಗೀತ ನಿರ್ದೇಶಕ ರಘು ದೀಕ್ಷಿತ್, ಫೋಟೋ ವೈರಲ್!

ಟ್ರಂಪ್ ಕೋರಿಕೆಯ ಮೇರೆಗೆ ಭಾರತ ರಷ್ಯಾದಿಂದ ತೈಲ ಆಮದನ್ನು ತಗ್ಗಿಸಲಿದೆ: ಶ್ವೇತಭವನ

ಭಾರತದ ಗಡಿಯಲ್ಲಿ ಹೊಸದಾದ 'ವಾಯು ರಕ್ಷಣಾ ವ್ಯವಸ್ಥೆ' ನಿರ್ಮಿಸುತ್ತಿರುವ ಚೀನಾ! Satellite Images

SCROLL FOR NEXT