ಸಂಗ್ರಹ ಚಿತ್ರ 
ರಾಜ್ಯ

ನಗರದಲ್ಲಿ ಕಾಮಾಂಧರ ಅಟ್ಟಹಾಸ: "ಗೊತ್ತಿಲ್ಲದ" ಗೃಹ ಸಚಿವ ಪರಮೇಶ್ವರ್ ಅವರೇ, ಕೇಳುತ್ತಿಲ್ಲವೇ ನಾರಿಯರ ನರಳಾಟ!

ಭ್ರಷ್ಟ ಕಾಂಗ್ರೆಸ್ ಸರ್ಕಾರದ ದುರಾಡಳಿತದಲ್ಲಿ ಕಾನೂನು ಸುವ್ಯವಸ್ಥೆ ಪಾತಾಳಕ್ಕೆ ಕುಸಿದಿದೆ. ರಾಜಧಾನಿ ಬೆಂಗಳೂರು ರೇಪ್‌ ಸಿಟಿ ಆಗುತ್ತಿದೆ. ಕರುನಾಡು ಗೂಂಡಾ ರಾಜ್ಯವಾಗುತ್ತಿದೆ.

ಬೆಂಗಳೂರು: ರಾಜ್ಯ ರಾಜಧಾನಿಯಲ್ಲಿ ಕಾಮಾಂಧರ ಅಟ್ಟಹಾಸ ಹೆಚ್ಚಾಗುತ್ತಿದ್ದು, ಈ ನಡುವಲ್ಲೇ ರಾಜ್ಯದ ಕಾನೂನು ಸುವ್ಯವಸ್ಥೆ ಕುರಿತು ರಾಜ್ಯ ಸರ್ಕಾರದ ವಿರುದ್ಧ ಬಿಜೆಪಿ ವಾಗ್ದಾಳಿ ನಡೆಸಿದೆ.

ನಗರದಲ್ಲಿ ಮಂಗಳವಾರ ಪಶ್ಚಿಮ ಬಂಗಾಳ ಮೂಲದ ಮಹಿಳೆ ಮೇಲೆ ಸಾಮೂಹಿಕ ಅತ್ಯಾಚಾರ ನಡೆದಿದ್ದು, ಘಟನೆಯ ವರದಿ ಹಿಡಿದು ಬಿಜೆಪಿ ಸರ್ಕಾರದ ವಿರುದ್ಧ ಕಿಡಿಕಾರಿದೆ.

ಸಾಮಾಜಿಕ ಜಾಲತಾಣ ಎಕ್ಸ್ ನಲ್ಲಿ ಪೋಸ್ಟ್ ಮಾಡಿರುವ ಬಿಜೆಪಿ, ಭ್ರಷ್ಟ ಕಾಂಗ್ರೆಸ್ ಸರ್ಕಾರದ ದುರಾಡಳಿತದಲ್ಲಿ ಕಾನೂನು ಸುವ್ಯವಸ್ಥೆ ಪಾತಾಳಕ್ಕೆ ಕುಸಿದಿದೆ. ರಾಜಧಾನಿ ಬೆಂಗಳೂರು ರೇಪ್‌ ಸಿಟಿ ಆಗುತ್ತಿದೆ. ಕರುನಾಡು ಗೂಂಡಾ ರಾಜ್ಯವಾಗುತ್ತಿದೆ ಎಂದು ವಾಗ್ದಾಳಿ ನಡೆಸಿದೆ.

"ಗೊತ್ತಿಲ್ಲದ"ಗೃಹ ಸಚಿವ ಡಾ.ಜಿ.ಪರಮೇಶ್ವರ್ ಅವರೆ, ಕೇಳುತ್ತಿಲ್ಲವೇ ನಾರಿಯರ ನರಳಾಟ. ಕೀಚಕರ ಹೆಡೆಮುರಿ ಕಟ್ಟಿ, ಮಹಿಳೆಯರಲ್ಲಿ ಸುರಕ್ಷತೆಯ ಭಾವನೆ ಮೂಡಿಸುವುದು ಯಾವಾಗ ಗೃಹ ಸಚಿವರೇ? ಎಂದು ಪ್ರಶ್ನಿಸಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ದೆಹಲಿಯಲ್ಲಿ ನಾಯಕರ ಬಂಧನ, ಮೆಟ್ರೋ ಸ್ಥಗಿತ ಕುರಿತ ನ್ಯಾಯಾಂಗ ನಿಂದನೆ: ಭಾನುವಾರವೂ 'ಸುಪ್ರೀಂ' ವಿಶೇಷ ಪೀಠದಿಂದ ವಿಚಾರಣೆ!

BBK 13: ಗಾನವಿ ಹೇಳಿಕೆಗೆ ನೊಂದು ಗಗನ್ ತಾಯಿಗೆ ತಾನೇ ಕ್ಷಮೆ ಕೇಳಿ ಕಣ್ಣೀರು ಹಾಕಿದ ಸುದೀಪ್

ವಿಶ್ವಸಂಸ್ಥೆಯ ಭದ್ರತಾ ಮಂಡಳಿಯಲ್ಲಿ ಭಾರತ, ಆಫ್ರಿಕಾಗೆ ಸೂಕ್ತ ಪ್ರಾತಿನಿಧ್ಯ ಸಿಗಲೇಬೇಕು: ಜೈಶಂಕರ್ ಆಗ್ರಹ

ಪ್ರತಿಭಟನೆಗಳ ನಡುವೆಯೇ ಚು. ಆಯೋಗ ಮಹತ್ವದ ನಡೆ, ಹೊಸ ಉಪಾಯುಕ್ತರ ನೇಮಕ, 27 ಅಧಿಕಾರಿಗಳಿಗೆ ಹೊಸ ಹೊಣೆ!

ಮಣಿಪುರದಲ್ಲಿ ಮತ್ತೆ ಭುಗಿಲೆದ್ದ ಹಿಂಸಾಚಾರ: 30 ಮನೆ-ಅಂಗಡಿಗಳಿಗೆ ಬೆಂಕಿ, ಕನಿಷ್ಠ 5 ಸಾವು!