ಸಾಂದರ್ಭಿಕ ಚಿತ್ರ  
ರಾಜ್ಯ

ಸಿಎಂ ತವರು ಜಿಲ್ಲೆಯಲ್ಲೇ ಪೈಶಾಚಿಕ ಕೃತ್ಯ: ತೋಟದ ಮನೆಯಲ್ಲಿ ಭ್ರೂಣ ಲಿಂಗ ಪತ್ತೆ ಮಾಡಿ ಹತ್ಯೆ ಮಾಡುತ್ತಿದ್ದ ಗ್ಯಾಂಗ್; ಮಹಿಳೆ ಸೇರಿ ಮೂವರು ವಶಕ್ಕೆ

ಮೈಸೂರು ತಾಲ್ಲೂಕು ಮೆಲ್ಲಹಳ್ಳಿ ಬಳಿಯ ಹುನಗನಹಳ್ಳಿ ಗ್ರಾಮದ ಹೊರವಲಯದಲ್ಲಿರುವ ಐಶಾರಾಮಿ ಬಂಗಲೆಯಲ್ಲಿ ಭ್ರೂಣ ಲಿಂಗ ಪತ್ತೆ ಹಾಗೂ ಹತ್ಯೆ ಮಾಡಲಾಗುತ್ತಿತ್ತು.

ಮೈಸೂರು: ರಾಜ್ಯದ ಜನತೆ ತಲೆತಗ್ಗಿಸುವ ಘಟನೆ ಸಿಎಂ ತವರು ಜಿಲ್ಲೆ ಮೈಸೂರಿನಲ್ಲಿ ನಡೆದಿದೆ. ಭ್ರೂಣಲಿಂಗ ಪತ್ತೆ ಹಾಗೂ ಹತ್ಯೆ ಮಾಡಿದ್ದ ಗ್ಯಾಂಗ್​ ಅನ್ನು​​​​ ಆರೋಗ್ಯ ಇಲಾಖೆ‌ ಅಧಿಕಾರಿಗಳು ಪತ್ತೆಹಚ್ಚಿ ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. ಓರ್ವ ಮಹಿಳೆ ಸೇರಿ ಮೂವರನ್ನು ವಶಕ್ಕೆ ಪಡೆಯಲಾಗಿದೆ. ಬನ್ನೂರಿನ ಪ್ರತಿಷ್ಠಿತ ನರ್ಸಿಂಗ್ ಹೋಂ ಒಂದರ ಕೈವಾಡ ಶಂಕೆ ಕೂಡ ವ್ಯಕ್ತವಾಗಿದ್ದು, ವರುಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ನಡೆದ ಘಟನೆಯೇನು?

ಮೈಸೂರು ತಾಲ್ಲೂಕು ಮೆಲ್ಲಹಳ್ಳಿ ಬಳಿಯ ಹುನಗನಹಳ್ಳಿ ಗ್ರಾಮದ ಹೊರವಲಯದಲ್ಲಿರುವ ಐಶಾರಾಮಿ ಬಂಗಲೆಯಲ್ಲಿ ಭ್ರೂಣ ಲಿಂಗ ಪತ್ತೆ ಹಾಗೂ ಹತ್ಯೆ ಮಾಡಲಾಗುತ್ತಿತ್ತು. ಈ ಐಶಾರಾಮಿ ಬಂಗಲೆಗೆ ಗರ್ಭಿಣಿಯರನ್ನು ಕರೆದುಕೊಂಡು ಬಂದು ಅವರ ಭ್ರೂಣದ ಲಿಂಗ ಪತ್ತೆ ಕೆಲಸ ಮಾಡಲಾಗುತಿತ್ತು. ಅದು ಹೆಣ್ಣಾ ಅಥವಾ ಗಂಡಾ ಎಂದು ಪತ್ತೆ ಮಾಡಲು ಅವರ ಬಳಿ ಸಾವಿರಾರು ರೂಪಾಯಿ ಹಣ ಪೀಕಲಾಗುತಿತ್ತು. ಮನೆಯಲ್ಲಿ ಹಣಕಾಸಿನ ಡೈರಿ ಪತ್ತೆಯಾಗಿದ್ದು ಅದರಲ್ಲಿದ್ದ ಬೆಚ್ಚಿಬೀಳಿಸುವ ಸಂಗತಿ ಬಯಲಾಗಿದೆ.

ಇಲ್ಲಿ ಭ್ರೂಣದ ಲಿಂಗ ಪತ್ತೆಗಾಗಿ 25 ಸಾವಿರ ರೂಪಾಯಿ, ಭ್ರೂಣ ಪತ್ತೆ ಹಚ್ಚಿ ಒಂದು ವೇಳೆ ಅದು ಹೆಣ್ಣು ಭ್ರೂಣವಾದರೆ ಅದರ ಹತ್ಯೆಗೆ 30 ಸಾವಿರ ರೂ ಹಣ ನಿಗದಿ ಮಾಡಲಾಗಿತ್ತು. ಅಷ್ಟೇ ಅಲ್ಲದೆ ಕೊಠಡಿಯಲ್ಲಿ ಇದ್ದ ಕಬ್ಬಿಣದ ಲಾಕರ್​ನಲ್ಲಿ ಮೂರು ಲಕ್ಷಕ್ಕೂ ಹೆಚ್ಚು ನಗದು ಪತ್ತೆ ಆಗಿದೆ. ಸ್ಥಳದಲ್ಲಿ ಭ್ರೂಣ ಹತ್ಯೆಗೆ ಬೇಕಾದ ಕಿಟ್‌ಗಳು, ಔಷಧಿಗಳು ಪತ್ತೆಯಾಗಿದ್ದು, ಎಲ್ಲವನ್ನೂ ವಶಕ್ಕೆ ಪಡೆಯಲಾಗಿದೆ.

ಮೂವರು ಆರೋಪಿಗಳು ವಶಕ್ಕೆ

ಈ‌ ಬಗ್ಗೆ ಮಾಹಿತಿ ತಿಳಿದ ರಾಜ್ಯ ಆರೋಗ್ಯ ಇಲಾಖೆ ಡಿಡಿ ವಿವೇಕ್ ದೊರೈ, ಮಂಡ್ಯ ಡಿಹೆಚ್​​ಓ ಮೋಹನ್ ಹಾಗೂ ಮೈಸೂರು ಡಿಹೆಚ್​​ಓ ಕುಮಾರಸ್ವಾಮಿ, ಮಂಡ್ಯ ಕುಟಂಬ ಕಲ್ಯಾಣ ಅಧಿಕಾರಿ ಬೆಟ್ಟಸ್ವಾಮಿ ನೇತೃತ್ವದಲ್ಲಿ ವರುಣ ಪೊಲೀಸರ ಸಹಕಾರದೊಂದಿಗೆ ನಡೆಸಿದ ಕಾರ್ಯಾಚರಣೆಯಲ್ಲಿ ಒಬ್ಬ ಮಹಿಳೆ ಸೇರಿ ಮೂವರು ಆರೋಪಿಗಳು ಸಿಕ್ಕಿ ಬಿದ್ದಿದ್ದಾರೆ.

ಕಾರ್ಯಾಚರಣೆ ವೇಳೆ ಸ್ಥಳದಲ್ಲಿ ಇಬ್ಬರು ಗರ್ಭಿಣಿಯವರು ಕಂಡುಬಂದಿದ್ದು, ಅವರು ಕೂಡ ಭ್ರೂಣ ಲಿಂಗ ಪತ್ತೆಗೆ ಆಗಮಿಸಿದ್ದರು ಎಂದು ತಿಳಿದುಬಂದಿದೆ. ಅದರಲ್ಲಿ ಓರ್ವ ಮಹಿಳೆಗೆ ಅದಾಗಲೇ ಇಬ್ಬರು ಹೆಣ್ಣು ಮಕ್ಕಳಿದ್ದು, ಈ ಬಾರಿ ಯಾವ ಮಗು ಎಂದು ತಿಳಿದುಕೊಳ್ಳಲು ಬಂದಿದ್ದರು ಎನ್ನಲಾಗಿದೆ.

ವರುಣ ಪೊಲೀಸರು ಆರೋಪಿಗಳನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಿದ್ದಾರೆ. ಆರೋಪಿ ಮಹಿಳೆ ನರ್ಸ್ ಎಂಬ ವಿಚಾರ ತಿಳಿದುಬಂದಿದೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಮೋದಿ-ಅಮಿತ್ ಶಾರನ್ನೇ ಧೈರ್ಯವಾಗಿ ಎದುರಿಸಿ ಜೈಲಿಗೆ ಹೋಗಿ ಬಂದಿದ್ದೇನೆ; ನನ್ನನ್ನು ಹೆದರಿಸಲು ಬರಬೇಡಿ: ಡಿಕೆ ಶಿವಕುಮಾರ್

GOAT India Tour: ಹೈದರಾಬಾದಿನಲ್ಲಿ 'ಮೆಸ್ಸಿ' ಮೇನಿಯಾ; ಸಿಎಂ ರೇವಂತ್ ರೆಡ್ಡಿ ಜೊತೆಗೆ ಆಟವಾಡಿ ಪ್ರೇಕ್ಷಕರನ್ನು ರಂಜಿಸಿದ ಫುಟ್ಬಾಲ್ ದಂತಕಥೆ!

ಕೇರಳ ಸ್ಥಳೀಯ ಸಂಸ್ಥೆ ಚುನಾವಣೆ: ತಿರುವನಂತಪುರಂನಲ್ಲಿ ಬಿಜೆಪಿಗೆ ಐತಿಹಾಸಿಕ ಗೆಲುವು; ಶಶಿ ತರೂರ್ ಹೊಗಳಿದ್ದು ಯಾರನ್ನ?

2026 ಬಂಗಾಳ ಚುನಾವಣೆ ಮೇಲೆ ಬದಲಾದ ಧರ್ಮ ರಾಜಕೀಯದ ಪರಿಣಾಮ ಏನು? ದೀದಿ ಜಾತ್ಯತೀತ ತಂತ್ರ ಬುಡಮೇಲು?

ವಿಮಾನದಲ್ಲಿ ಅಮೆರಿಕ ಯುವತಿ ಅಸ್ವಸ್ಥ: ಚಿಕಿತ್ಸೆ ನೀಡಿ ಪ್ರಾಣ ಕಾಪಾಡಿದ ಮಾಜಿ ಶಾಸಕಿ ಅಂಜಲಿ ನಿಂಬಾಳ್ಕರ್!

SCROLL FOR NEXT