ಸಚಿವ ಪ್ರಿಯಾಂಕ್ ಖರ್ಗೆ  
ರಾಜ್ಯ

ಮತಗಳವು ಪ್ರಕರಣದ ಹೊಣೆಗಾರರನ್ನು ಜೈಲಿಗಟ್ಟುವುದು ಖಚಿತ: ಸಚಿವ ಪ್ರಿಯಾಂಕ್ ಖರ್ಗೆ

ಎಲ್ಲಾ ತನಿಖೆಗಳು ಈಗ ಬಿಜೆಪಿ ನಾಯಕರು ಮತ್ತು ಅವರ ಸಹಚರರ ಅಕ್ರಮವನ್ನು ತೋರಿಸುತ್ತವೆ. ಬಿಜೆಪಿಯ ವೋಟ್ ಚೋರಿಯ ಪ್ರತಿಯೊಂದು ಕೊಳಕು ತಂತ್ರ ಮತ್ತು ಕಾರ್ಯವೈಖರಿಯನ್ನು ಒಂದೊಂದಾಗಿ ಬಹಿರಂಗಪಡಿಸುತ್ತಿವೆ.

ಕಲಬುರಗಿ: ವೋಟ್ ಚೋರಿ ಪ್ರಕರಣಕ್ಕೆ ಹೊಸ ತಿರುವು ಪಡೆದಿದ್ದು, ಮತದಾರರ ಪಟ್ಟಿಯಿಂದ ಮತದಾರರ ಹೆಸರು ಅಳಿಸಿಹಾಕಲು ಪ್ರತಿಯೊಂದಕ್ಕೆ 80 ರು ಪಾವತಿಸಲಾಗಿದೆ ಎನ್ನುವ ಅಂಶ ಎಸ್ಐಟಿ ತನಿಖೆಯಿಂದ ತಿಳಿದು ಬಂದಿದೆ. ಇದು ಮತಗಳವು ವಿಚಾರದಲ್ಲಿ ನಾವು ಇಷ್ಟು ದಿನ ಹೇಳುತ್ತಿದ್ದ ವಿಷಯ ಎಸ್ಐಟಿ ತನಿಖೆಯಿಂದ ದೃಢಪಟ್ಟಿದೆ' ಎಂದು ಜಿಲ್ಲಾ ಉಸ್ತುವಾರಿ ಸಚಿವ ಪ್ರಿಯಾಂಕ್ ಖರ್ಗೆ ಹೇಳಿದ್ದಾರೆ.

ಎಲ್ಲಾ ತನಿಖೆಗಳು ಈಗ ಬಿಜೆಪಿ ನಾಯಕರು ಮತ್ತು ಅವರ ಸಹಚರರ ಅಕ್ರಮವನ್ನು ತೋರಿಸುತ್ತವೆ. ಬಿಜೆಪಿಯ ವೋಟ್ ಚೋರಿಯ ಪ್ರತಿಯೊಂದು ಕೊಳಕು ತಂತ್ರ ಮತ್ತು ಕಾರ್ಯವೈಖರಿಯನ್ನು ಒಂದೊಂದಾಗಿ ಬಹಿರಂಗಪಡಿಸುತ್ತಿವೆ. ಈ ವಿಷಯದಲ್ಲಿ ಭಾಗಿಯಾಗಿರುವ ಪ್ರತಿಯೊಬ್ಬರನ್ನು ಹೊಣೆಗಾರರನ್ನಾಗಿ ಮಾಡಿ ಜೈಲಿಗೆ ಹಾಕಲಾಗುವುದು' ಎಂದು‌ ಸಾಮಾಜಿಕ‌ ಜಾಲತಾಣ 'ಎಕ್ಸ್'ನಲ್ಲಿ ಪೋಸ್ಟ್‌ ಮಾಡಿದ್ದಾರೆ.

2023ರ ವಿಧಾನಸಭೆ ಚುನಾವಣೆಗೆ ಮುನ್ನ, ಆಳಂದ ಮತ ಕ್ಷೇತ್ರದಲ್ಲಿ ಹಣ ನೀಡುವ ಮೂಲಕ ಸುಮಾರು 6,000ಕ್ಕೂ ಅಧಿಕ ಮತದಾರರನ್ನು ಪಟ್ಟಿಯಿಂದ ತೆಗೆದು ಹಾಕಲು ಯತ್ನಿಸಲಾಗಿತ್ತು. ಕಲಬುರಗಿಯ ಪೂರ್ಣ ಪ್ರಮಾಣದ ದತ್ತಾಂಶ ಕೇಂದ್ರದಲ್ಲಿ ಕಾರ್ಯನಿರ್ವಹಿಸುತ್ತಿದ್ದ ನಿರ್ವಾಹಕರು ಮತದಾರರ ಹೆಸರುಗಳನ್ನು ವ್ಯವಸ್ಥಿತವಾಗಿ ಅಳಿಸಿ‌ಹಾಕುವ ಮೂಲಕ ಪ್ರಜಾಪ್ರಭುತ್ವ ಪ್ರಕ್ರಿಯೆಯನ್ನು ಹಾಳುಗೆಡವುತ್ತಿದ್ದರು‌ ಎಂದು‌ ಟೀಕಿಸಿದ್ದಾರೆ.

ಕಲಬುರಗಿಯ ಪೂರ್ಣ ಪ್ರಮಾಣದ ದತ್ತಾಂಶ ಕೇಂದ್ರದಲ್ಲಿ ಕಾರ್ಯ ನಿರ್ವಹಿಸುತ್ತಿದ್ದ ನಿರ್ವಾಹಕರು ಮತದಾರರ ಹೆಸರುಗಳನ್ನು ವ್ಯವಸ್ಥಿತವಾಗಿ ಅಳಿಸಿ‌ಹಾಕುವ ಮೂಲಕ ಪ್ರಜಾಪ್ರಭುತ್ವ ಪ್ರಕ್ರಿಯೆಯನ್ನು ಹಾಳುಗೆಡವುತ್ತಿದ್ದರು. ಎಲ್ಲಾ ತನಿಖೆಗಳು ಈಗ ಬಿಜೆಪಿ ನಾಯಕರು ಮತ್ತು ಅವರ ಸಹಚರರ ಅಕ್ರಮವನ್ನು ತೋರಿಸುತ್ತವೆ. ಬಿಜೆಪಿಯ ವೋಟ್ ಚೋರಿಯ ಪ್ರತಿಯೊಂದು ತಂತ್ರ ಮತ್ತು ಕಾರ್ಯವೈಖರಿಯನ್ನು ಬಹಿರಂಗಪಡಿಸುತ್ತಿವೆ. ಈ ವಿಷಯದಲ್ಲಿ ಭಾಗಿಯಾಗಿರುವ ಪ್ರತಿಯೊಬ್ಬರನ್ನು ಹೊಣೆಗಾರರನ್ನಾಗಿ ಮಾಡಿ ಜೈಲಿಗೆ ಹಾಕಲಾಗುವುದು ಎಂದು ಪ್ರಿಯಾಂಕ್ ತಿಳಿಸಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ದೇಶಾದ್ಯಂತ SIR ಪ್ರಯೋಗ: ಮೊದಲ ಹಂತದಲ್ಲಿ ಬಂಗಾಳ, ಕೇರಳ, ತಮಿಳುನಾಡು; ನಾಳೆ ಕೇಂದ್ರ ಚುನಾವಣಾ ಆಯೋಗ ಮಹತ್ವದ ಸುದ್ದಿಗೋಷ್ಠಿ

ಭಯೋತ್ಪಾದಕರ ಪಟ್ಟಿಗೆ Bollywood ನಟ ಸಲ್ಮಾನ್ ಖಾನ್ ಹೆಸರು ಸೇರಿದ ಪಾಕಿಸ್ತಾನ!

ಅಲ್ಬೇನಿಯಾದ ಎಐ ಸಚಿವೆ ಈಗ ಗರ್ಭಿಣಿ, 83 ಮಕ್ಕಳ ತಾಯಿ..: ಅಲ್ಬೇನಿಯಾ ಪ್ರಧಾನಿ ಎಡಿ ರಾಮ ವಿಲಕ್ಷಣ ಘೋಷಣೆ!

Cricket: 'ಕೊನೆಯ ವಿದಾಯ ಸಿಡ್ನಿ..'; ರೋಹಿತ್ ಶರ್ಮಾ ಭಾವನಾತ್ಮಕ ಪೋಸ್ಟ್; ವಿಶ್ವಕಪ್ ಗೆ ಡೌಟ್!

'ಇಂಡಿ ಕೂಟ ಅಧಿಕಾರಕ್ಕೆ ಬಂದರೆ ವಕ್ಫ್ ಕಾಯ್ದೆ ಕಸದ ಬುಟ್ಟಿಗೆ ಎಸೆಯುತ್ತೇವೆ': ಸಿಎಂ ಅಭ್ಯರ್ಥಿ ತೇಜಸ್ವಿ ಯಾದವ್

SCROLL FOR NEXT