ಆರ್ ಎಸ್ ಎಸ್ ಪಥ ಸಂಚಲನ(ಸಾಂದರ್ಭಿಕ ಚಿತ್ರ) 
ರಾಜ್ಯ

ಚಿತ್ತಾಪುರದಲ್ಲಿ ಪಥ ಸಂಚಲನ: ಶಾಂತಿ ಸಭೆ ನಡೆಸುವಂತೆ ಸರ್ಕಾರಕ್ಕೆ ಹೈಕೋರ್ಟ್ ಸೂಚನೆ; RSSಗೆ ನಿರಾಸೆ

ಇದರೊಂದಿಗೆ ನವೆಂಬರ್ 2ರಂದು ಪಥಸಂಚಲನಕ್ಕೆ ಹೈಕೋರ್ಟ್ ಇಂದು ಅನುಮತಿ ನೀಡುತ್ತೆ ಎನ್ನುವ ನಿರೀಕ್ಷೆಯಲ್ಲಿದ್ದ ಆರ್​​ಎಸ್​​ಸ್​​ ಮುಖಂಡರಿಗೆ ಕೊಂಚ ನಿರಾಸೆಯಾಗಿದೆ.

ಕಲಬುರಗಿ: ಅಕ್ಟೋಬರ್ 28 ರಂದು ಉದ್ದೇಶಿತ ರಾಷ್ಟ್ರೀಯ ಸ್ವಯಂಸೇವಕ ಸಂಘ(ಆರ್‌ಎಸ್‌ಎಸ್)ದ ರೂಟ್ ಮಾರ್ಚ್‌ನ ಆಯೋಜಕರೊಂದಿಗೆ ಶಾಂತಿ ಸಭೆ ನಡೆಸುವಂತೆ ಕರ್ನಾಟಕ ಹೈಕೋರ್ಟ್ ಶುಕ್ರವಾರ ರಾಜ್ಯ ಸರ್ಕಾರಕ್ಕೆ ಸೂಚಿಸಿದೆ.

ಪಥ ಸಂಚಲನಕ್ಕೆ ಅನುಮತಿ ನಿರಾಕರಿಸಿದ್ದ ತಹಶೀಲ್ದಾರ್ ಕ್ರಮ ಪ್ರಶ್ನಿಸಿ ಆರ್‌ಎಸ್‌ಎಸ್ ಸಲ್ಲಿಸಿದ್ದ ಅರ್ಜಿಯ ವಿಚಾರಣೆ ನಡೆಸಿದ ಕಲಬುರಗಿ ಹೈಕೋರ್ಟ್ ಪೀಠ, ಚಿತ್ತಾಪುರ ಪಟ್ಟಣದಲ್ಲಿ ಕೆಲವು ರೀತಿಯ ಉದ್ವಿಗ್ನತೆ ಉಂಟಾಗಿದೆ ಎಂದು ಅಧಿಕಾರಿಗಳು ಸಲ್ಲಿಸಿದ ವರದಿಯನ್ನು ಗಮನಿಸಿ, ಅಕ್ಟೋಬರ್‌ 28ಕ್ಕೆ ಶಾಂತಿ ಸಭೆ ನಡೆಸಬೇಕು. ಅಕ್ಟೋಬರ್‌ 30ರಂದು ವರದಿ ನೀಡುವಂತೆ ಸೂಚಿಸಿದೆ. ಈ ವರದಿ ಆಧಾರದ ಮೇಲೆ ಹೈಕೋರ್ಟ್ ತೀರ್ಪು ನೀಡಲಿದೆ.

ಇದರೊಂದಿಗೆ ನವೆಂಬರ್ 2ರಂದು ಪಥಸಂಚಲನಕ್ಕೆ ಹೈಕೋರ್ಟ್ ಇಂದು ಅನುಮತಿ ನೀಡುತ್ತೆ ಎನ್ನುವ ನಿರೀಕ್ಷೆಯಲ್ಲಿದ್ದ ಆರ್​​ಎಸ್​​ಸ್​​ ಮುಖಂಡರಿಗೆ ಕೊಂಚ ನಿರಾಸೆಯಾಗಿದೆ.

ಸರ್ಕಾರದ ಪರ ವಾದ ಮಂಡಿಸಿದ ಅಡ್ವೊಕೇಟ್ ಜನರಲ್ ಶಶಿಕಿರಣ್ ಶೆಟ್ಟಿ ಅವರು, ಜಿಲ್ಲಾಧಿಕಾರಿ ತಮ್ಮ ವರದಿಯಲ್ಲಿ ಎರಡು ಅಭಿಪ್ರಾಯಗಳನ್ನು ನೀಡಿದ್ದಾರೆ. ಜನರಿಗೆ ತೊಂದರೆಯಾಗುವ ಬಗ್ಗೆ ಕಲಬುರಗಿ ಎಸ್‌ಪಿ ವರದಿ ನೀಡಿದ್ದಾರೆ. ಪಥಸಂಚಲನದ ಮಾರ್ಗದಲ್ಲಿ ಸಂಚಾರ ದಟ್ಟಣೆಯಾಗುವ ಸಾಧ್ಯತೆಯಿದೆ. ಹೀಗಾಗಿ ಕಾನೂನು ಸುವ್ಯವಸ್ಥೆಗೆ ಧಕ್ಕೆಯಾಗುವ ಸಾಧ್ಯತೆಯಿದೆ. ಪರಿಸ್ಥಿತಿ ಸಾಮಾನ್ಯವಾದ ನಂತರ ಪಥಸಂಚಲನ ಸೂಕ್ತ. ಕೆಲ ವಾರಗಳ ಬಳಿಕ ಪಥಸಂಚಲನ ನಡೆಸುವುದು ಸೂಕ್ತವೆಂದು ವರದಿಯಿದೆ. ಇದರಿಂದ ಯಾವುದೇ ಸಂಘಟನೆಗಳಿಗೂ ಅನುಮತಿ ನೀಡದಂತೆ ವರದಿಯಿದೆ ಎಂದು ಹೇಳಿದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಪ್ರಶ್ನೆಪತ್ರಿಕೆ ಸೋರಿಕೆ,'ಚಂದಾ ಚೋರಿ' ವಿರುದ್ಧ ರಾಷ್ಟ್ರವ್ಯಾಪಿ ಪ್ರತಿಭಟನೆಗೆ ಕಾಂಗ್ರೆಸ್ ನಿರ್ಧಾರ; 'ವಂದೇ ಮಾತರಂ'ನ ಎರಡು ಪ್ಯಾರಾ ಮಾತ್ರ ಹಾಡಲು ನಿರ್ಣಯ!

illegal gold mine: ಮಧ್ಯ ಆಫ್ರಿಕಾದಲ್ಲಿ ಭಯಾನಕ ದುರಂತ, ಚಿನ್ನದ ಗಣಿಯಲ್ಲಿ ಕುಸಿತ,100 ಮಂದಿ ದುರ್ಮರಣ! Video

ಮೂಡಾ ಅಕ್ರಮಕ್ಕೆ ಬ್ರೇಕ್: ₹2000 ಕೋಟಿ ಮೌಲ್ಯದ 1,100 ಸೈಟುಗಳ ಹಂಚಿಕೆ ರದ್ದು ಮಾಡಿದ ಯತೀಂದ್ರ ಸಿದ್ದರಾಮಯ್ಯ

ರೋಚಕ ಪಂದ್ಯದಲ್ಲಿ ಭಾರತ 5-3 ಗೋಲುಗಳಿಂದ ಪಾಕಿಸ್ತಾನವನ್ನು ಸೋಲಿಸಿ ವಿಶ್ವಕಪ್‌ನಿಂದ ಹೊರದೂಡಿದೆ!

ಬಾಲಿವುಡ್ ನಟ ಗೋವಿಂದಾ ದಾಂಪತ್ಯ ಕಿತ್ತಾಟದಲ್ಲಿ ಸ್ಫೋಟಕ ತಿರುವು: ವಿಚ್ಛೇದನ ಅರ್ಜಿ ಹಿಂಪಡೆದ ಪತ್ನಿ ಸುನೀತಾ ಅಹುಜಾ!