ಪ್ರತಾಪ್ ಸಿಂಹ, ಪ್ರದೀಪ್ ಈಶ್ವರ್ ಸಾಂದರ್ಭಿಕ ಚಿತ್ರ 
ರಾಜ್ಯ

ಮುಳ್ಳಂದಿ ಮುಖದ ಕಾಮಿಡಿ ಪೀಸ್! ನಮ್ಮಪ್ಪ ಚಿಕ್ಕಬಳ್ಳಾಪುರ ಕಡೆ ಬಂದಿದ್ರೆ ನೀನು ಸುಂದರವಾಗಿ ಹುಟ್ಟುತ್ತಿದ್ದೆ: ಪ್ರತಾಪ್ ಸಿಂಹ ಲೇವಡಿ

ತಮ್ಮ ತಾಯಿ ಬಗ್ಗೆ ಅವಹೇಳನಕಾರಿಯಾಗಿ ಮಾತನಾಡಿರುವ "ಪ್ರದೀಪ್ ಈಶ್ವರ್ ಕತ್ತಲಲ್ಲಿ ಕಾಣಲ್ಲ, ಬೆಳಕಲ್ಲಿ ಹೊಳೆಯಲ್ಲ ಎಂದು ವಾಗ್ದಾಳಿ ನಡೆಸಿದರು.

ಮೈಸೂರು: ಮಾಜಿ ಸಂಸದ ಪ್ರತಾಪ್ ಸಿಂಹ ಹಾಗೂ ಚಿಕ್ಕಬಳ್ಳಾಪುರ ಕಾಂಗ್ರೆಸ್​ ಶಾಸಕ ಪ್ರದೀಪ್​ ಈಶ್ವರ್​ ನಡುವಿನ ವಾಕ್ ಸಮರ ಜೋರಾಗಿದೆ. ಪರಸ್ಪರ ಏಕವಚನದಲ್ಲೇ ಬೈದಾಡಿಕೊಳ್ಳುತ್ತಿದ್ದಾರೆ.

ಮೈಸೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಪ್ರತಾಪ್ ಸಿಂಹ, ತಮ್ಮ ತಾಯಿ ಬಗ್ಗೆ ಅವಹೇಳನಕಾರಿಯಾಗಿ ಮಾತನಾಡಿರುವ "ಪ್ರದೀಪ್ ಈಶ್ವರ್ ಕತ್ತಲಲ್ಲಿ ಕಾಣಲ್ಲ, ಬೆಳಕಲ್ಲಿ ಹೊಳೆಯಲ್ಲ ಎಂದು ವಾಗ್ದಾಳಿ ನಡೆಸಿದರು.

ಮುಳ್ಳಂದಿ ಮುಖದ ಕರ್ನಾಟಕದ ಏಕೈಕ ಕಾಮಿಡಿ ಪೀಸ್. ನಮ್ಮ ತಂದೆ ವಯಸ್ಸಿನಲ್ಲಿ ಇದ್ದಾಗ ಚಿಕ್ಕಬಳ್ಳಾಪುರ ಕಡೆ ಬಂದಿದ್ರೆ ನೀನು ಸುಂದರವಾಗಿ ಹುಟ್ಟುತ್ತಿದ್ದೆ. ನನ್ನ ಬಗ್ಗೆ ಮಾತಾಡುವಾಗ ಎಚ್ಚರಿಕೆ ಇರಬೇಕು ಮಗನೆ ಎಂದು ಏಕವಚನದಲ್ಲೇ ಕಿಡಿ ಕಾರಿದರು.

ಪ್ರದೀಪ್ ಈಶ್ವರ್​ಗೆ ಅವನ ಭಾಷೆಯಲ್ಲಿಯೇ ಉತ್ತರ ಹೇಳುತ್ತಿರುವುದಕ್ಕೆ ಕರ್ನಾಟಕದ ಜನರ ಕ್ಷಮೆ ಕೇಳುತ್ತೇನೆ ಎಂದು ಹೇಳಿದರು.

ನಾನು ಕತ್ತಲಲ್ಲಿ ಕಾಣಲ್ವಂತೆ, ಅಯೋಗ್ಯ

ಇತ್ತ ಚಿಕ್ಕಬಳ್ಳಾಪುರದಲ್ಲಿ ಪ್ರತಾಪ್​ ಸಿಂಹಗೆ ಶಾಸಕ ಪ್ರದೀಪ್​ ಈಶ್ವರ್​ ತಿರುಗೇಟು ನೀಡಿದ್ದಾರೆ. ಎಷ್ಟು ಜನ ಗೌಡರ ಮಕ್ಕಳಿಗೆ ನೀನು ನೆರವಾಗಿದ್ದೀಯಾ? ನನ್ನ ಕ್ಷೇತ್ರದಲ್ಲಿ ನಾನು 2,500 ಮಕ್ಕಳಿಗೆ ವಿದ್ಯಾರ್ಥಿ ವೇತನ ನೀಡಿದ್ದೇನೆ.

ನಾನು ಕತ್ತಲಲ್ಲಿ ಕಾಣಲ್ವಂತೆ, ಅಯೋಗ್ಯ, ನನ್ನನ್ನು ಕತ್ತಲಲ್ಲಿ ಯಾಕೆ ಹುಡುಕುತ್ತಾನೋ ಗೊತ್ತಿಲ್ಲ. ಪ್ರತಾಪ ನಾನು ಹಾಗಲ್ಲ. ಆತನಿಗೆ 50-50 ಬಿಸ್ಕತ್ ಫೆವರೇಟ್​ ಎಂದು ಪ್ರದೀಪ್​ ಈಶ್ವರ್​ ವ್ಯಂಗ್ಯವಾಡಿದ್ದಾರೆ

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ನಾಯಕತ್ವ ಬದಲಾವಣೆ, ಸಂಪುಟ ಪುನಾರಚನೆ ಚರ್ಚೆ ನಡುವಲ್ಲೇ ನವೆಂಬರ್‌ನಲ್ಲಿ ರಾಹುಲ್ ಗಾಂಧಿ ಬೆಂಗಳೂರಿಗೆ..?

ಭಾರತ ಅಮೆರಿಕ ವ್ಯಾಪಾರ ಒಪ್ಪಂದ: 'ಬಹುತೇಕ ಎಲ್ಲ ಸಮಸ್ಯೆಗಳು ಇತ್ಯರ್ಥವಾಗಿವೆ': ಸರ್ಕಾರಿ ಮೂಲಗಳು!

ರಷ್ಯನ್ ತೈಲ: ಆರ್ಥಿಕ ಅವಶ್ಯಕತೆ ಮತ್ತು ಅಮೆರಿಕದ ಒತ್ತಡಗಳ ನಡುವೆ ಸಿಲುಕಿದ ಭಾರತ, ಚೀನಾ (ಜಾಗತಿಕ ಜಗಲಿ)

ನಾವು ಭಾರತೀಯರನ್ನು ನಂಬುತ್ತೇವೆ; ಟ್ರಂಪ್ ನಮಗೆ...: ನೊಬೆಲ್ ಶಾಂತಿ ಪ್ರಶಸ್ತಿ ವಿಜೇತೆ ಮಾರಾ ಕೊರಿನಾ ಮಚಾದೊ ಅಚ್ಚರಿ ಹೇಳಿಕೆ

ಗದರಿಸಿದ್ದಕ್ಕೆ ತಾಯಿಯನ್ನು ಕೊಡಲಿಯಿಂದ ಹೊಡೆದು ಕೊಂದ 16 ವರ್ಷದ ಬಾಲಕ!

SCROLL FOR NEXT