ಡಿಸಿಎಂ ಡಿಕೆ.ಶಿವಕುಮಾರ್ 
ರಾಜ್ಯ

ಬೆಂಗಳೂರು ಅಭಿವೃದ್ಧಿ, ರಸ್ತೆ ಅಗಲೀಕರಣಕ್ಕೆ ಹೊಸ ಮಾಸ್ಟರ್ ಪ್ಲಾನ್: ಡಿಸಿಎಂ ಡಿ.ಕೆ ಶಿವಕುಮಾರ್

ನಗರದಲ್ಲಿ ನಿರ್ಮಾಣ ಚಟುವಟಿಕೆಗಳು ವೇಗ ಪಡೆಯುತ್ತಿರುವುದರಿಂದ, ನಂತರ ರಸ್ತೆ ಅಗಲೀಕರಣ ನಡೆಸುವುದು ಕಷ್ಟಕರದ ಕೆಲಸವಾಗಿರುತ್ತದೆ. ಹೀಗಾಗಿ ಬೆಂಗಳೂರು ನಗರ ಜಿಲ್ಲೆಯ ಹೊರವಲಯದಲ್ಲಿರುವ ಪ್ರದೇಶಗಳ ಸಮೀಕ್ಷೆ ನಡೆಸುವಂತೆ ಸೂಚನೆ ನೀಡಲಾಗಿದೆ.

ಬೆಂಗಳೂರು: ಬೆಂಗಳೂರು ವೇಗವಾಗಿ ಬೆಳೆಯುತ್ತಿದ್ದು, ನಗರದ ಅಭಿವೃದ್ಧಿ ಹಾಗೂ ರಸ್ತೆ ಅಗಲೀಕರಣಕ್ಕೆ ಹೊಸ ಮಾಸ್ಟರ್ ಪ್ಲಾನ್‌ಗಾಗಿ ನಗರಾಭಿವೃದ್ಧಿ ಇಲಾಖೆಗೆ (ಯುಡಿಡಿ) ನಿರ್ದೇಶನ ನೀಡಿದ್ದೇನೆ ಎಂದು ಉಪಮುಖ್ಯಮಂತ್ರಿ ಮತ್ತು ಬೆಂಗಳೂರು ಅಭಿವೃದ್ಧಿ ಸಚಿವ ಡಿ.ಕೆ. ಶಿವಕುಮಾರ್ ಅವರು ಶುಕ್ರವಾರ ಹೇಳಿದ್ದಾರೆ.

ಪಂಚಾಯತ್, ನಗರ ಪುರಸಭೆ ಮತ್ತು ಜಿಬಿಎ ಹೊರ ಪ್ರದೇಶಗಳಲ್ಲಿ ಪಾಲುದಾರರೊಂದಿಗೆ ಸಭೆ ನಡೆಸಿದ ನಂತರ ಮಾತನಾಡಿದ ಡಿಸಿಎಂ, ರಸ್ತೆ ಅಗಲೀಕರಣವು ಪ್ರಮುಖ ಆದ್ಯತೆಯಾಗಲಿದೆ ಎಂದು ಹೇಳಿದರು,

ನಗರದಲ್ಲಿ ನಿರ್ಮಾಣ ಚಟುವಟಿಕೆಗಳು ವೇಗ ಪಡೆಯುತ್ತಿರುವುದರಿಂದ, ನಂತರ ರಸ್ತೆ ಅಗಲೀಕರಣ ನಡೆಸುವುದು ಕಷ್ಟಕರದ ಕೆಲಸವಾಗಿರುತ್ತದೆ. ಹೀಗಾಗಿ ಬೆಂಗಳೂರು ನಗರ ಜಿಲ್ಲೆಯ ಹೊರವಲಯದಲ್ಲಿರುವ ಪ್ರದೇಶಗಳ ಸಮೀಕ್ಷೆ ನಡೆಸುವಂತೆ ಸೂಚನೆ ನೀಡಲಾಗಿದೆ ಎಂದು ತಿಳಿಸಿದರು.

ಭವಿಷ್ಯದಲ್ಲಿ ಬೆಂಗಳೂರು ಬೃಹತ್ ಆಕಾರದಲ್ಲಿ ಬೆಳೆಯುತ್ತದೆ. ಬೆಂಗಳೂರು ಮಹಾನಗರ ಪ್ರಾದೇಶಿಕ ಅಭಿವೃದ್ಧಿ ಪ್ರಾಧಿಕಾರ (ಬಿಎಂಆರ್‌ಡಿಎ) ವ್ಯಾಪ್ತಿಗೆ ಬರುವ ಪ್ರದೇಶಗಳು ಇಂದು ಅಲ್ಲ, ನಾಳೆ ಬೆಂಗಳೂರು ನಗರದ ಭಾಗವಾಗುತ್ತವೆ, ಹೊರಗಿನ ಪ್ರದೇಶಗಳು ಅಭಿವೃದ್ಧಿ ಕಾಣುತ್ತಿರುವುದರಿಂದ, ಒಂದು ಮಾಸ್ಟರ್ ಪ್ಲಾನ್ ಸಿದ್ಧಪಡಿಸಬೇಕಾಗುತ್ತದೆ ಎಂದರು.

ರಸ್ತೆ ಅಗಲೀಕರಣ ಮತ್ತು ಇತರ ಮೂಲಸೌಕರ್ಯ ಅಭಿವೃದ್ಧಿಯನ್ನು ತಕ್ಷಣವೇ ಮಾಡಬೇಕಾಗಿದೆ. ಇದಕ್ಕಾಗಿ ಸರಿಯಾದ ಯೋಜನೆಯನ್ನು ರೂಪಿಸಬೇಕಾಗಿದೆ. ಸಿಎಂಸಿ ಮತ್ತು ಪಟ್ಟಣ ಪಂಚಾಯತ್ ಸೇರಿದಂತೆ ಕೆಲವು ಪ್ರದೇಶಗಳಲ್ಲಿ ರಸ್ತೆಗಳು ಕಿರಿದಾಗಿವೆ. ಭವಿಷ್ಯದಲ್ಲಿ ಇದನ್ನು ಬದಲಾಯಿರುವುದು ಕಷ್ಟಕರವಾಗಿರುತ್ತದೆ. ಲೋಕೋಪಯೋಗಿ ಇಲಾಖೆ (ಪಿಡಬ್ಲ್ಯೂಡಿ) ಮತ್ತು ನಗರ ಯೋಜನಾ ಇಲಾಖೆಗೆ ಮಾಸ್ಟರ್ ಪ್ಲಾನ್ ಸಿದ್ಧಪಡಿಸುವಂತೆ ಸೂಚನೆ ನೀಡಿದ್ದೇನೆಂದು ಮಾಹಿತಿ ನೀಡಿದರು.

ಇದೇ ವೇಳೆ ಬಿ-ಖಾತಾ ಮತ್ತು ಎ-ಖಾತಾಗಳಿಂದ ಪರಿವರ್ತನೆ ವ್ಯವಸ್ಥೆಗೆ ಸಿದ್ಧತೆ ಮಾಡಿಕೊಳ್ಳುವಂತೆ ಅಧಿಕಾರಿಗಳಿಗೆ ಶಿವಕುಮಾರ್ ಅವರು ಸೂಚನೆ ನೀಡಿದರು.

ಬೆಂಗಳೂರು ನಗರದಲ್ಲಿ ಆಸ್ತಿ ಮೌಲ್ಯ ಆಧಾರಿತ ತೆರಿಗೆ ಸಂಗ್ರಹದಂತೆ ಈ ಭಾಗದಲ್ಲಿ ತೆರಿಗೆ ಸಂಗ್ರಹದಲ್ಲಿ ಏಕರೂಪತೆಯನ್ನು ತರಲು ಸೂಚನೆ ನೀಡಿದ್ದೇನೆ. ಭವಿಷ್ಯದಲ್ಲಿ ನೀರು ಮತ್ತು ಇತರ ಮೂಲಸೌಕರ್ಯಗಳನ್ನು ಒದಗಿಸುವುದು ಒಂದು ಸವಾಲಾಗಿ ಪರಿಣಮಿಸುವುದರಿಂದ ಅಕ್ರಮ ಕಟ್ಟಡಗಳ ನಿರ್ಮಾಣದ ವಿರುದ್ಧ ಕ್ರಮ ಕೈಗೊಳ್ಳಲಾಗುವುದು ಎಂದರು.

ರಾಜಕಾಲುವೆ ಅತಿಕ್ರಮಣ ಅತ್ತು ಬೆಂಗಳೂರು ನಗರದಲ್ಲಿ ಸರ್ಕಾರಿ ಆಸ್ತಿಯ ಅತಿಕ್ರಮಣ ಕುರಿತ ಪ್ರಶ್ನೆಗೆ ಉತ್ತರಿಸಿ, ಬೆಂಗಳೂರು ನಗರದ ಮಾದರಿಯಲ್ಲಿ ಎಲ್ಲಾ ಆಸ್ತಿ ದಾಖಲೆಗಳನ್ನು ತಕ್ಷಣ ಡಿಜಿಟಲೀಕರಣಗೊಳಿಸಲಾಗುವುದು ಎಂದು ಹೇಳಿದರು.

ಈ ಪ್ರದೇಶದಲ್ಲಿ ಬೆಂಗಳೂರು ನಗರದ ಮಾದರಿಯಲ್ಲಿ ಇಲ್ಲಿಯೂ ಕಸ ಸಂಗ್ರಹ ವ್ಯವಸ್ಥೆಯನ್ನು ಜಾರಿಗೆ ತರಲಾಗುವುದು ಎಂದು ತಿಳಿಸಿದರು.

ಹೊಸ ಪ್ರದೇಶಗಳನ್ನು ಬೆಂಗಳೂರು ದಕ್ಷಿಣ ಪಾಲಿಕೆಯಲ್ಲಿ ಸೇರಿಸಲಾಗುತ್ತದೆಯೇ ಎಂಬ ಪ್ರಶ್ನೆಗೆ ಉತ್ತರಿಸಿ, ನಾವು ಸುತ್ತಮುತ್ತಲಿನ ಗಡಿ ಪ್ರದೇಶದ 12 ಸ್ಥಳೀಯ ಸಂಸ್ಥೆಗಳನ್ನು ಸೇರಿಸಲು ಯೋಜಿಸುತ್ತಿದ್ದೇವೆ. ಬೆಂಗಳೂರು ಗ್ರೇಟರ್ ಬೆಂಗಳೂರು ಪ್ರಾಧಿಕಾರದ ಅಡಿಯಲ್ಲಿದೆ. ಮೊದಲು, ಅಧಿಕಾರಿಗಳು ವರದಿ ಮಾಡಲಿ. ಇದಲ್ಲದೆ, ಸಾರ್ವಜನಿಕರು, ಸಂಘಗಳು, ಶಾಸಕರು ಮತ್ತು ಸಂಸದರೊಂದಿಗೆ ಚರ್ಚಿಸಲಾಗುತ್ತದೆ ಎಂದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

'ಸ್ಪರ್ಧೆಗಳ ಸಂಕೀರ್ಣ ಸಮಯಗಳೊಂದಿಗೆ ಜಗತ್ತು ಹೋರಾಡುತ್ತಿದ್ದು, ಭಯೋತ್ಪಾದನೆ ವಿಚಾರದಲ್ಲಿ ರಾಜಿ ಇಲ್ಲ': ಜೈಶಂಕರ್ ಖಡಕ್ ಸಂದೇಶ

'ಕಾಂಗ್ರೆಸ್ ಹೈಕಮಾಂಡ್ ನಿರ್ಧರಿಸಿದರೆ 5 ವರ್ಷ ಕಾಲ ನಾನೇ ಮುಖ್ಯಮಂತ್ರಿ': ಸಿದ್ದರಾಮಯ್ಯ ಮಾರ್ಮಿಕ ಹೇಳಿಕೆ!

ವೇಟ್‌ಲಿಫ್ಟಿಂಗ್ ಚಾಂಪಿಯನ್‌ಶಿಪ್‌: 145 ಕೆಜಿ ತೂಕ ಎತ್ತಿ ಪದಕ ಪಡೆದ 7 ತಿಂಗಳ ಗರ್ಭಿಣಿ; ದೆಹಲಿ ಪೊಲೀಸ್ ಕಾನ್ಸ್‌ಟೇಬಲ್ ಸಾಧನೆಗೆ ಅಭಿನಂದನೆಗಳ ಮಹಾಪೂರ!

ಮೊನ್ನೆ ನೇಮಕ ಇಂದು RSS ಕಾರ್ಯಕರ್ತನ ಹೆಸರು ತೆಗೆದು ಹಾಕಿದ ಸರ್ಕಾರ; ಸಿಎಂ ಸಿದ್ದರಾಮಯ್ಯಗೆ ಕ್ಷಮೆ!

Bengaluru: ಡೆಲಿವರಿ ನೆಪದಲ್ಲಿ ಬ್ರೆಜಿಲ್ ಮಾಡೆಲ್ ಗೆ ಲೈಂಗಿಕ ಕಿರುಕುಳ; ಏಜೆಂಟ್ ಬಂಧನ

SCROLL FOR NEXT